ಪರೀಕ್ಷಾ ಶಿಬಿರಗಳು ಮಕ್ಕಳನ್ನು ಮಾನಸಿಕವಾಗಿ ಹಾಗೂ ಶಾರೀರಿಕವಾಗಿ ಮೌಲ್ಯಮಾಪನ ಮಾಡುತ್ತವೆ-ಎಂ.ಬಾಲಕೃಷ್ಣ

ಪರೀಕ್ಷಾ ಶಿಬಿರಗಳು ಮಕ್ಕಳನ್ನು ಮಾನಸಿಕವಾಗಿ ಹಾಗೂ ಶಾರೀರಿಕವಾಗಿ ಮೌಲ್ಯಮಾಪನ ಮಾಡುತ್ತವೆ-ಎಂ.ಬಾಲಕೃಷ್ಣ

ಪರೀಕ್ಷಾ ಶಿಬಿರಗಳು ಮಕ್ಕಳನ್ನು ಮಾನಸಿಕವಾಗಿ ಹಾಗೂ ಶಾರೀರಿಕವಾಗಿ ಮೌಲ್ಯಮಾಪನ ಮಾಡುತ್ತವೆ-ಎಂ.ಬಾಲಕೃಷ್ಣ

ಆಲೂರು: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನಡೆಸುವ ಪರೀಕ್ಷಾ ಶಿಬಿರಗಳು ಮಕ್ಕಳನ್ನು ಮಾನಸಿಕವಾಗಿ ಹಾಗೂ ಶಾರೀರಿಕವಾಗಿ ಮೌಲ್ಯಮಾಪನ ಮಾಡುತ್ತವೆ ಎಂದು ಜಿಲ್ಲಾ ಸಹಾಯಕ ಆಯುಕ್ತ ಎಂ.ಬಾಲಕೃಷ್ಣ ಅಭಿಪ್ರಾಯಪಟ್ಟರು. ಅವರು ಆಲೂರು ತಾಲ್ಲೂಕು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆಯು ಭೈರಾಪುರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಂಡಿದ್ದ ತಾಲ್ಲೂಕು ಮಟ್ಟದ ದ್ವಿತೀಯ ಸೋಪಾನ ಪರೀಕ್ಷಾ ಶಿಬಿರದ ಅಧ್ಯಕ್ಷತೆ ವಹಿಸಿ ಮಾತನಾಡಿ ನಮ್ಮ ಸ್ಕೌಟ್ಸ್ ಮತ್ತು ಗೈಡ್ಸ್ ಮಕ್ಕಳಿಗಾಗಿ ಹಮ್ಮಿಕೊಳ್ಳುವ ವಿವಿಧ ಹಂತಗಳ  ಪರೀಕ್ಷಾ ಶಿಬಿರಗಳಲ್ಲಿ ಸಕ್ರಿಯವಾಗಿ ಭಾಗಿಯಾಗಿ ರಾಜ್ಯ ಪುರಸ್ಕಾರ್ ಹಾಗೂ ರಾಷ್ಟ್ರಪತಿ ಪುರಸ್ಕಾರ ಪರೀಕ್ಷೆಗಳಲ್ಲಿ ಉತ್ತೀರ್ಣರಾದರೆ ಉನ್ನತ ವ್ಯಾಸಂಗ ಹಾಗೂ ನೇಮಕಾತಿ ಸಂದರ್ಭಗಳಲ್ಲಿ ವಿಶೇಷ ಮೀಸಲಾತಿಗೆ ಅರ್ಹರಾಗುವುದರ ಜೊತೆಗೆ ಸ್ವಯಂ ಶಿಸ್ತು, ಸೇವಾ ಮನೋಭಾವ, ರಾಷ್ಟ್ರಪ್ರೇಮ, ಕೌಟುಂಬಿಕ ಹಾಗೂ ಸಾಮಾಜಿಕ ಮೌಲ್ಯಗಳನ್ನು ಬೆಳೆಸಿಕೊಳ್ಳಬಹುದಾಗಿದೆ ಎಂದರು. ತಾಲ್ಲೂಕು ಉಪಾಧ್ಯಕ್ಷರಾದ ಸಿ.ಎಸ್.ಪೂರ್ಣಿಮಾ ಮಾತನಾಡಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಗಳಂತಹ ಸಂಸ್ಥೆ ಪ್ರತಿ ಶಾಲೆಯಲ್ಲಿಯೂ ಅಸ್ತಿತ್ವಕ್ಕೆ ಬರಬೇಕು. ಮಕ್ಕಳಲ್ಲಿ ಜೀವನ ಮೌಲ್ಯಗಳನ್ನು ಬೆಳೆಸಿ ವ್ಯಕ್ತಿತ್ವ ವಿಕಸನಗೊಳಿಸುವಲ್ಲಿ ಈ ಸಂಸ್ಥೆಯ ಪಾತ್ರ ಅಪಾರವಾಗಿದೆ. ಮುಂದಿನ ದಿನಗಳಲ್ಲಿ ನಮ್ಮ ವಿಶ್ವೇಶ್ವರಯ್ಯ ಶಿಕ್ಷಣ ಸಂಸ್ಥೆಯಲ್ಲಿ ದಳಗಳನ್ನು ಪ್ರಾರಂಭ ಮಾಡುವುದರ ಮುಖೇನ ನಮ್ಮ ಶಾಲೆಯ ಮಕ್ಕಳಿಗೂ ಇಂತಹ ಅಮೂಲ್ಯ ಶಿಕ್ಷಣ ದೊರೆಸುಕೊಡಲು ಶ್ರಮಿಸುತ್ತೇನೆ ಎಂದರು.