ಪುನರ್ವಿಕ ಶೋರೂಮ್ ಉದ್ಘಾಟಿಸಿದ ಶಾಸಕ ಸಿ ಎನ್ ಬಾಲಕೃಷ್ಣ

May 19, 2025 - 11:43
 0  7
ಪುನರ್ವಿಕ ಶೋರೂಮ್ ಉದ್ಘಾಟಿಸಿದ ಶಾಸಕ ಸಿ ಎನ್ ಬಾಲಕೃಷ್ಣ

ಶ್ರವಣಬೆಳಗೂಳ: ಚನ್ನರಾಯಪಟ್ಟಣ ತಾಲೂಕಿನ ಶ್ರವಣಬೆಳಗೂಳ ಹೋಬಳಿ ಕೇಂದ್ರದಲ್ಲಿ ಮಾಳೇನಹಳ್ಳಿ ನವೀನ್ ಮಾಲಿಕತ್ವದ ಪುನರ್ವಿಕ ಫರ್ನಿಚರ್ ಶೋರೂಮ್ ಲೋಕಾರ್ಪಣೆಗೊಂಡಿತು. ಈ ಕಾರ್ಯಕ್ರಮವನ್ನು ಶ್ರವಣಬೆಳಗೊಳ ವಿಧಾನಸಭಾ ಕ್ಷೇತ್ರದ ಶಾಸಕರಾದ ಸಿಎನ್ ಬಾಲಕೃಷ್ಣರವರು ಉದ್ಘಾಟಿಸಿ ಮಾತನಾಡಿ ಗ್ರಾಮಾಂತರ ಪ್ರದೇಶದ ಸಾರ್ವಜನಿಕರಿಗೆ ಅನುಕೂಲವಾಗಲಿ ಎಂಬ ದೃಷ್ಟಿಯಿಂದ ನಿಮ್ಮೂರಿನಲ್ಲಿ ಪುನರ್ವಿಕ ಶೋರೂಮ್ ಲೋಕಾರ್ಪಣೆಗೊಂಡಿದೆ ಎಂದರು. ಶ್ರವಣಬೆಳಗೂಳ ವಿಧಾನಸಭಾ ಕ್ಷೇತ್ರದ ಸಾರ್ವಜನಿಕರು ತಮಗೆ ಬೇಕಾದ ವಸ್ತುಗಳನ್ನು ಕೈಗೆಟುಕುವ ಬೆಲೆಯಲ್ಲಿ ಗೃಹ ಉಪಯೋಗಿ ವಸ್ತುಗಳನ್ನು ಖರೀದಿಸಿ, ಇದರ ಸದುಪಯೋಗ ಪಡೆಸಿಕೊಳ್ಳಬಹುದು ಎಂದು ತಿಳಿಸಿದರು. ಇದೇ ಸಂದರ್ಭದಲ್ಲಿ ಶಾಸಕ ಸಿಎನ್ ಬಾಲಕೃಷ್ಣ,ಜೆಡಿಎಸ್ ಮುಖಂಡರಾದ ಪುನರ್ವಿಕ ನವೀನ್, ಟಿಎಪಿಎಂಎಸ್ ಮಾಜಿ ಉಪಾಧ್ಯಕ್ಷರಾದ ಸಿಜೆ ಜಗದೀಶ್, ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷರಾದ ಶ್ರೀಮತಿ ಅನುರಾಧ, ಲೋಹಿತ್, ಸೇರಿದಂತೆ ಇತರರು ಹಾಜರಿದ್ದರು.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0
suddikirana ಸುದ್ದಿ ಕಿರಣ ಟಿವಿ ಬಾಳಿನ ಬೆಳಕು ಕರ್ನಾಟಕದ ಮಾಹಿತಿ ಮನರಂಜನಾ ಚಾನೆಲ್ ಆಗಿದೆ. ಇದು ಮನರಂಜನೆಯ ಜೊತೆಗೆ ಇತ್ತೀಚಿನ ಸುದ್ದಿ ಮತ್ತು ಮಾಹಿತಿಯನ್ನು ವೀಕ್ಷಕರಿಗೆ ತೋರುತ್ತಿದೆ. ಮತ್ತು ಸಮಾಜವು ತೆಗೆದುಕೊಳ್ಳುವ ದಿಕ್ಕು ಮಾಹಿತಿಯಿಂದ ಪ್ರಭಾವಿತವಾಗಿರುತ್ತದೆ ಎಂದು ನಾವು ಅರ್ಥಮಾಡಿಕೊಂಡಿದ್ದೇವೆ. ಸುದ್ದಿ ಕಿರಣ ಟಿವಿ ಹಲವು ವಿಷಯಗಳಲ್ಲಿ ಪ್ರವರ್ತಕವಾಗಿದೆ. ಇದು ತನಿಖಾ ಪತ್ರಿಕೋದ್ಯಮ. ಮತ್ತು ತಾಂತ್ರಿಕ ಕೈಗಾರಿಕೆಗಳ ವೃತ್ತಿಪರರಿಂದ ಪ್ರಚಾರ ಮಾಡಲ್ಪಟ್ಟ ಚಾನೆಲ್ ಆಗಿದೆ. ಸುದ್ದಿ ಕಿರಣ ಟಿವಿ ಇತ್ತೀಚಿನ ತಂತ್ರಜ್ಞಾನಗಳೊಂದಿಗೆ ಗುಣಮಟ್ಟದ ಸಂಪನ್ಮೂಲಗಳನ್ನು ಸಂಯೋಜಿಸಲು ಪ್ರಯತ್ನಿಸುತ್ತದೆ. Chief Editor B.S.Mallikarjuna Reddy # 560, 3ನೇ ಮಹಡಿ, 1ನೇ ಮುಖ್ಯ ರಸ್ತೆ, ಯಶವಂತಪುರ ಬೆಂಗಳೂರು-560022., Email: suddikiranatv@gmail.com Email:suddikiranaa@gmail.com www.suddikirana.com ಸುದ್ದಿ ಮತ್ತು ಜಾಹೀರಾತಿಗಳಿಗಾಗಿ ಸಂಪರ್ಕಿಸಿ ಕಛೇರಿ 08041505268 ಸಂಚಾರಿ ವಾಣಿ 9686665456