ಪುರಸಭೆ ಸ್ಥಾಯಿ ಸಮಿತಿಯ ಅಧ್ಯಕ್ಷರಾಗಿ ಎಸ್.ಎ.ಗಣೇಶ್ ಅವಿರೋಧ ಆಯ್ಕೆ

Jun 18, 2025 - 17:20
 0  3
ಪುರಸಭೆ ಸ್ಥಾಯಿ ಸಮಿತಿಯ ಅಧ್ಯಕ್ಷರಾಗಿ ಎಸ್.ಎ.ಗಣೇಶ್ ಅವಿರೋಧ ಆಯ್ಕೆ

ಚನ್ನರಾಯಪಟ್ಟಣ: ಪುರಸಭೆಯ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ವಾರ್ಡ್ ನಂ.22ರ ಜೆಡಿಎಸ್‌ ಸದಸ್ಯ ಎಸ್.ಎ.ಗಣೇಶ್ ಅವರನ್ನು ಅವಿರೋಧವಾಗಿ ಆಯ್ಕೆಗೊಂಡರು.

ಈ ಹಿಂದೆ ಸ್ಥಾಯಿ ಸಮಿತಿ ಅಧ್ಯಕ್ಷರಾಗಿದ್ದ ವಾರ್ಡ್ ನಂ.17ರ ಕಾಂಗ್ರೆಸ್ ಸದಸ್ಯೆ ಪರ್ಹ ಅನ್ನು ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ಪುರಸಭಾ ಅಧ್ಯಕ್ಷ ಸಿ.ಎನ್.ಮೋಹನ್ ಅಧ್ಯಕ್ಷತೆಯಲ್ಲಿ ಆಯ್ಕೆ ಪ್ರಕ್ರಿಯೆ ನಡೆಯಿತು. ಎಸ್.ಎ.ಗಣೇಶ್ ಹೊರತು ಪಡಿಸಿ ಬೇರಾರು ಆಕಾಂಕ್ಷಿಗಳು ನಾಮಪತ್ರ ಸಲ್ಲಿಸದ ಹಿನ್ನೆಲೆಯಲ್ಲಿ  ಅವಿರೋಧ ಆಯ್ಕೆ ಗೊಂಡರು.
ನೂತನ ಸ್ಥಾಯಿ ಸಮಿತಿ ಅಧ್ಯಕ್ಷರನ್ನು ಶಾಸಕ ಸಿ.ಎನ್.ಬಾಲಕೃಷ್ಣ, ಪುರಸಭಾಧ್ಯಕ್ಷ ಸಿ.ಎನ್.ಮೋಹನ್, ಉಪಾಧ್ಯಕ್ಷೆ ರಾಣಿಕೃಷ್ಣ, ಮುಖ್ಯ ಅಧಿಕಾರಿ ಯತೀಶ್, ಸೇರಿ ಆಡಳಿತರೂಢ ಜೆಡಿಎಸ್ ಹಾಗೂ ಕಾಂಗ್ರೆಸ್ ಸದಸ್ಯರು ಅಭಿನಂದಿಸಿದರು.
 ಶಾಸಕರಾದ ಬಾಲಕೃಷ್ಣ ಮಾತನಾಡಿ ಗಣೇಶ್ ಸಾರ್ವಜನಿಕರೊಂದಿಗೆ ಉತ್ತಮ ಬಾಂಧವ್ಯದೊಂದಿಗೆ ಕಾರ್ಯನಿರ್ವಹಿಸುತ್ತಿದ್ದು, ಆಯಾ ಕಾಲಾವಧಿಯಲ್ಲಿ ಆಗುವ ಸ್ಥಾಯಿ ಸಮಿತಿ ಅಧ್ಯಕ್ಷರು ಸರ್ಕಾರದ, ಪುರಸಭೆಯ ಕೆಲಸ ಕಾರ್ಯಗಳಿಗೆ ಗೈರಾಗದೆ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಸದಸ್ಯರ ಸಲಹೆ ಸೂಚನೆ ಮೇರೆಗೆ ಪಟ್ಟಣದ ಅಭಿವೃದ್ಧಿಗೆ ಶ್ರಮಿಸಲಿ ಎಂದು ಸಲಹೆ ನೀಡಿದರು.
ಅಧ್ಯಕ್ಷರ ಆಯ್ಕೆ ಘೋಷಣೆ ಆಗುತ್ತಿದ್ದಂತೆ ವಾರ್ಡ್ ನಂ.22 ರ ಜನತೆ, ಅವರ ಅಭಿಮಾನಿಗಳು, ಮುಖಂಡರು, ಆಗಮಿಸಿ ಸಿಹಿ ಹಂಚಿ, ಪಟಾಕಿ ಸಿಡಿಸಿ, ಅಭಿನಂದಿಸಿದರು.ಜೆಡಿಎಸ್ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಸೇರಿದಂತೆ ಇತರರು ಹಾಜರಿದ್ದರು.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0
suddikirana ಸುದ್ದಿ ಕಿರಣ ಟಿವಿ ಬಾಳಿನ ಬೆಳಕು ಕರ್ನಾಟಕದ ಮಾಹಿತಿ ಮನರಂಜನಾ ಚಾನೆಲ್ ಆಗಿದೆ. ಇದು ಮನರಂಜನೆಯ ಜೊತೆಗೆ ಇತ್ತೀಚಿನ ಸುದ್ದಿ ಮತ್ತು ಮಾಹಿತಿಯನ್ನು ವೀಕ್ಷಕರಿಗೆ ತೋರುತ್ತಿದೆ. ಮತ್ತು ಸಮಾಜವು ತೆಗೆದುಕೊಳ್ಳುವ ದಿಕ್ಕು ಮಾಹಿತಿಯಿಂದ ಪ್ರಭಾವಿತವಾಗಿರುತ್ತದೆ ಎಂದು ನಾವು ಅರ್ಥಮಾಡಿಕೊಂಡಿದ್ದೇವೆ. ಸುದ್ದಿ ಕಿರಣ ಟಿವಿ ಹಲವು ವಿಷಯಗಳಲ್ಲಿ ಪ್ರವರ್ತಕವಾಗಿದೆ. ಇದು ತನಿಖಾ ಪತ್ರಿಕೋದ್ಯಮ. ಮತ್ತು ತಾಂತ್ರಿಕ ಕೈಗಾರಿಕೆಗಳ ವೃತ್ತಿಪರರಿಂದ ಪ್ರಚಾರ ಮಾಡಲ್ಪಟ್ಟ ಚಾನೆಲ್ ಆಗಿದೆ. ಸುದ್ದಿ ಕಿರಣ ಟಿವಿ ಇತ್ತೀಚಿನ ತಂತ್ರಜ್ಞಾನಗಳೊಂದಿಗೆ ಗುಣಮಟ್ಟದ ಸಂಪನ್ಮೂಲಗಳನ್ನು ಸಂಯೋಜಿಸಲು ಪ್ರಯತ್ನಿಸುತ್ತದೆ. Chief Editor B.S.Mallikarjuna Reddy # 560, 3ನೇ ಮಹಡಿ, 1ನೇ ಮುಖ್ಯ ರಸ್ತೆ, ಯಶವಂತಪುರ ಬೆಂಗಳೂರು-560022., Email: suddikiranatv@gmail.com Email:suddikiranaa@gmail.com www.suddikirana.com ಸುದ್ದಿ ಮತ್ತು ಜಾಹೀರಾತಿಗಳಿಗಾಗಿ ಸಂಪರ್ಕಿಸಿ ಕಛೇರಿ 08041505268 ಸಂಚಾರಿ ವಾಣಿ 9686665456