ಪೆದ್ದೂರು ಗ್ರಾಮದಲ್ಲಿ ಭಾದ್ರಪದ ಪೌರ್ಣಮಿ: ಶ್ರೀ ಚೌಡೇಶ್ವರಿ ದೇವಿಗೆ ವಿಶೇಷ ಪೂಜೆ

ಪೆದ್ದೂರು ಗ್ರಾಮದಲ್ಲಿ ಭಾದ್ರಪದ ಪೌರ್ಣಮಿ: ಶ್ರೀ ಚೌಡೇಶ್ವರಿ ದೇವಿಗೆ ವಿಶೇಷ ಪೂಜೆ

ಮುಳಬಾಗಿಲು: ತಾಲ್ಲೂಕಿನ ಬೈರಕೂರು ಹೋಬಳಿಯ ಮುಷ್ಟೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪೆದ್ದೂರು ಗ್ರಾಮದಲ್ಲಿ ಭಾದ್ರಪದ ಮಾಸದ ಪೌರ್ಣಮಿ ಪ್ರಯುಕ್ತ ಶ್ರೀ ಸಪ್ತಮಾತೃಕ ಸಮೇತ ಚೌಡೇಶ್ವರಿ ದೇವಾಲಯದಲ್ಲಿ ವಿಶೇಷ ಧಾರ್ಮಿಕ ಕಾರ್ಯಕ್ರಮಗಳನ್ನು ಭಕ್ತಿಭಾವದಿಂದ ನೆರವೇರಿಸಲಾಯಿತು.

ಪುರೋಹಿತರ ವೇದ ಮಂತ್ರ ಘೋಷಗಳೊಂದಿಗೆ ದೇವಿಗೆ ವಿಶೇಷ ಅಭಿಷೇಕ ಹಾಗೂ ಪೂಜಾ ವಿಧಿವಿಧಾನಗಳನ್ನು ನೆರವೇರಿಸಲಾಯಿತು. ಇದೇ ವೇಳೆ ವಿವಿಧ ಬಗೆಯ ಹೂವುಗಳಿಂದ ಶ್ರೀ ಚೌಡೇಶ್ವರಿ ದೇವಿಯ ಮೂರ್ತಿಗೆ ವಿಶೇಷ ಪುಷ್ಪಾಲಂಕಾರ ಮಾಡಲಾಗಿತ್ತು.

ಪೌರ್ಣಮಿ ಅಂಗವಾಗಿ ನಡೆದ ವಿಶೇಷ ಪೂಜಾ ಕಾರ್ಯಕ್ರಮದಲ್ಲಿ ಗ್ರಾಮದ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ದೇವಿಯ ದರ್ಶನ ಪಡೆದು, ಪೂಜಾ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಈ ಸಂದರ್ಭದಲ್ಲಿ ಗ್ರಾಮದ ಶಾಂತಿ, ಸಮೃದ್ಧಿ ಹಾಗೂ ಸರ್ವರ ಒಳಿತಿಗಾಗಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು.