ಪೆದ್ದೂರು ಗ್ರಾಮದಲ್ಲಿ ಮಹಾಶಿವರಾತ್ರಿ ಸಂಭ್ರಮ: ಶಿವನಿಗೆ ವಿಶೇಷ ಪೂಜೆ ಅಭಿಷೇಕ
ಮುಳಬಾಗಿಲು: ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ಮುಳಬಾಗಿಲು ತಾಲೂಕಿನ ಬೈರಕೂರು ಹೋಬಳಿಯ ಪೆದ್ದೂರು ಗ್ರಾಮದ ಪುರಾತನ ಶ್ರೀ ರಾಮಲಿಂಗೇಶ್ವರ ದೇವಸ್ಥಾನದಲ್ಲಿ ಭಾನುವಾರ ಅತ್ಯಂತ ಶ್ರದ್ಧಾಭಕ್ತಿಯಿಂದ ಹಾಗೂ ಸಡಗರದಿಂದ ವಿಶೇಷ ಪೂಜಾ ಕಾರ್ಯಕ್ರಮಗಳು ಜರುಗಿದವು.
ಬೆಳಿಗ್ಗೆಯಿಂದಲೇ ಗ್ರಾಮದ ಹಾಗೂ ಸುತ್ತಮುತ್ತಲ ಗ್ರಾಮಗಳ ಭಕ್ತಾದಿಗಳು ದೇವಸ್ಥಾನಕ್ಕೆ ಆಗಮಿಸಿ ಶಿವನ ದರ್ಶನವನ್ನು ಪಡೆದರು. ಹಬ್ಬದ ಅಂಗವಾಗಿ ದೇವಾಲಯವನ್ನು ವಿವಿಧ ಹೂಗಳಿಂದ ಮತ್ತು ವಿದ್ಯುತ್ ದೀಪಗಳಿಂದ ಅಲಂಕರಿಸಲಾಗಿತ್ತು.
ವಿಶೇಷ ಪೂಜಾ ಕೈಂ ಕಾರ್ಯಗಳು:
ಶಿವನಿಗೆ ಪಂಚಾಮೃತ ಅಭಿಷೇಕ ರುದ್ರಾಭಿಷೇಕ ಹಾಗೂ ಬಿಲ್ವಾರ್ಚನೆಯ ಶಾಸ್ತ್ರೋಕ್ತವಾಗಿ ನೆರವೇರಿಸಲಾಯಿತು ಬೆಳಗ್ಗೆಯಿಂದಲೇ ದೇವಸ್ಥಾನದಲ್ಲಿ ಮಂತ್ರಘೋಷಗಳು ಮೊಳಗಿದವು, ಮಧ್ಯಾಹ್ನ ದೇವಸ್ಥಾನಕ್ಕೆ ಬಂದ ಭಕ್ತಾದಿಗಳಿಗೆ ವಿಶೇಷ ಅನ್ನದಾನವನ್ನು ಏರ್ಪಡಿಸಲಾಗಿತ್ತು.
ಗ್ರಾಮಸ್ಥರು ಮಾತನಾಡಿ, ನಮ್ಮ ಗ್ರಾಮದಲ್ಲಿ ಪ್ರತಿ ವರ್ಷದಂತೆ ಈ ವರ್ಷವು ಮಹಾಶಿವರಾತ್ರಿ ಹಬ್ಬವು ಸಡಗರ ಸಂಭ್ರಮದಿಂದ ಮಾಡುತ್ತೇವೆ, ದೇವಸ್ಥಾನದಲ್ಲಿ ಶಿವನಿಗೆ ನಡೆದ ವಿಶೇಷ ಪೂಜೆ ಕೈಂ ಕಾರ್ಯಗಳಲ್ಲಿ ಅನೇಕ ಭಕ್ತರು ಭಾಗಿಯಾಗಿದ್ದರು,
ಈ ಸಂದರ್ಭದಲ್ಲಿ ಗ್ರಾಮಸ್ಥರು ಹಾಗೂ ಸುತ್ತಮುತ್ತಲಿನ ಗ್ರಾಮದ ಭಕ್ತಾದಿಗಳು ಉಪಸ್ಥಿತರಿದ್ದರು.
What's Your Reaction?
Like
2
Dislike
0
Love
1
Funny
0
Angry
0
Sad
1
Wow
1
