ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬದ ಅಂಗವಾಗಿ ರೋಗಿಗಳಿಗೆ ಹಣ್ಣು-ಹಂಪಲು, ಸಿಹಿ ವಿತರಣೆ

ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬದ ಅಂಗವಾಗಿ ರೋಗಿಗಳಿಗೆ ಹಣ್ಣು-ಹಂಪಲು, ಸಿಹಿ ವಿತರಣೆ

        ಬೇತಮಂಗಲ: ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಪ್ರಯುಕ್ತ ಕೆಜಿಎಫ್ ಗ್ರಾಮಾಂತರ ಭಾಗದ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಬೇತಮಂಗಲದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ರೋಗಿಗಳು ಹಾಗೂ ಆಸ್ಪತ್ರೆಯ ಸಿಬ್ಬಂದಿ ವರ್ಗದವರಿಗೆ ಹಣ್ಣು-ಹಂಪಲು ಮತ್ತು ಸಿಹಿ ವಿತರಿಸುವ ಮೂಲಕ ಹುಟ್ಟುಹಬ್ಬವನ್ನು ಸರಳವಾಗಿ ಆಚರಿಸಿದರು.

ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿಜೆಪಿ ಮುಖಂಡರು, ಭಾರತ ದೇಶಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರ ಕೊಡುಗೆ ಅಪಾರವಾಗಿದೆ. ಅವರ ನೇತೃತ್ವದಲ್ಲಿ ಭಾರತವು ಅಭಿವೃದ್ಧಿಯತ್ತ ಸಾಗುತ್ತಿದ್ದು, ಇಂದು ವಿಶ್ವದಾದ್ಯಂತ ಭಾರತವನ್ನು ತಿರುಗಿ ನೋಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಹೇಳಿದರು.

ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಪಕ್ಷದ ಆದೇಶದಂತೆ ಮುಂದಿನ ದಿನಗಳಲ್ಲಿ ಸಸಿ ನೆಡುವುದು, ಮನೆ ಮನೆಗೂ ದೀಪ ಹಚ್ಚುವುದು ಸೇರಿದಂತೆ ವಿವಿಧ ಸೇವಾ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಸರಳವಾಗಿ ಆಚರಿಸಲಾಗುತ್ತಿದೆ ಎಂದು ತಿಳಿಸಿದರು.
ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ದೇವರು ಇನ್ನಷ್ಟು ಆರೋಗ್ಯ, ಆಯುಷ್ಯ ಹಾಗೂ ಐಶ್ವರ್ಯವನ್ನು ಕರುಣಿಸಲಿ. ಅವರ ನೇತೃತ್ವದಲ್ಲಿ ಭಾರತ ದೇಶವು ವಿಶ್ವದಲ್ಲೇ ಅಭಿವೃದ್ಧಿ ಹೊಂದಿದ ರಾಷ್ಟ್ರವಾಗಿ ಮತ್ತಷ್ಟು ಬೆಳೆಯಲಿ ಎಂದು ದೇವರಲ್ಲಿ ಪ್ರಾರ್ಥಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಗ್ರಾಮಾಂತರ ಅಧ್ಯಕ್ಷರು ಲಕ್ಷ್ಮೀ ನಾರಾಯಣ್ ಶರ್ಮ, ಮಾಜಿ ಗ್ರಾಪಂ ಅಧ್ಯಕ್ಷರಾದ ವೆಂಕಟಾಚಲಪತಿ, ಸುನೀಲ್, ರೈತಮೋರ್ಚಾ ಉಪಾಧ್ಯಕ್ಷ ವಿಜಯ್ ಭಾಸ್ಕರ್ ನಾಯ್ಡು, ಯುವ ಮೋರ್ಚಾ ಅಧ್ಯಕ್ಷ ಮಂಜು(ಪಂಡು) ಮಾಜಿ ಗ್ರಾಪಂ ಸದಸ್ಯ ನಾರಾಯಣಸ್ವಾಮಿ, ಓಂ ಸುರೇಶ್, ಮುಖಂಡರಾದ ವೆಂಕಟೇಶ್, ಗಂಗಾಧರ್, ಕೇಶವ ಸೇರಿದಂತೆ, ಉಪಸ್ಥಿತರಿದ್ದರು.