ಬಡವರ ಪಾಲಿಗೆ ಉಚಿತ ಅರೋಗ್ಯ ತಪಾಸಣೆ ಶಿಬಿರಗಳು ವರದಾನ-ಕೆಡಿಪಿ ಮಾಜಿ ಸದಸ್ಯ ಲಾಯರ್ ಸತೀಶ್

Jun 24, 2025 - 12:17
 0  3
ಬಡವರ ಪಾಲಿಗೆ ಉಚಿತ ಅರೋಗ್ಯ ತಪಾಸಣೆ ಶಿಬಿರಗಳು ವರದಾನ-ಕೆಡಿಪಿ ಮಾಜಿ ಸದಸ್ಯ ಲಾಯರ್ ಸತೀಶ್

ಬಾಗೇಪಲ್ಲಿ: ಸುತ್ತಮುತ್ತಲಿನ ವಿವಿಧ ಗ್ರಾಮೀಣ ಪ್ರದೇಶಗಳಿಂದ ಆಗಮಿಸಿದ ರೋಗಿಗಳು ತಮ್ಮ ಆರೋಗ್ಯ ಸಮಸ್ಯೆಗಳ ಕುರಿತು ತಪಾಸಣೆ  ಮಾಡಿಸಿಕೊಂಡು, ಹೆಚ್ಚಿನ ಶಸ್ತ್ರಚಿಕಿತ್ಸೆ ಅವಶ್ಯವಿದ್ದವರಿಗೆ ತಮ್ಮ ಬಿಪಿಎಲ್ ಪಡಿತರ ಚೀಟಿ, ಆಧಾರ್ ಕಾರ್ಡ್ ನೀಡಿ ಆಕಾಶ್ ಆಸ್ಪತ್ರೆ ವತಿಯಿಂದ ಸಂಪೂರ್ಣ ಉಚಿತವಾಗಿ ಶಾಸ್ತ್ರ ಚಿಕಿತ್ಸೆ ಮಾಡಿಸಿಕೊಡಲಾಗುತ್ತದೆ ಎಂದು ಕೆಡಿಪಿ ಮಾಜಿ ಸದಸ್ಯ ಲಾಯರ್ ತಿಳಿಸಿದ್ದಾರೆ.

ತಾಲೂಕಿನ ಪಾತಪಾಳ್ಯ ಗ್ರಾಮ ಪಂಚಾಯಿತಿ ದೇವರಾಸಪಲ್ಲಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆ ಆವರಣದಲ್ಲಿ ಸ್ವರ್ಣಭೂಮಿ ಫೌಂಡೇಶನ್  ಆಕಾಶ್ ಆಸ್ಪತ್ರೆ ಮತ್ತು ದೇವರಾಸಪಲ್ಲಿ ಗ್ರಾಮಸ್ಥರ ಸಂಯುಕ್ತಶ್ರದಲ್ಲಿ ನಡೆದ ಉಚಿತ ಅರೋಗ್ಯ ತಪಾಸಣೆ ಶಿಬಿರ ಉದ್ಘಾಟನೆ ಮಾಡಿ ಮಾತನಾಡಿದ ಅವರು ಇತ್ತೀಚಿನ ದಿನಗಳಲ್ಲಿ ಜನರ ಜೀವನ ಶೈಲಿ ಹಾಗೂ ಆಹಾರ ಕ್ರಮಗಳು ಆರೋಗ್ಯದ ಮೇಲೆ ದುಷ್ಪರಿಣಾಮಗಳು ಬೀರುತ್ತಿವೆ. ಪಾಸ್ಟ್ ಫುಡ್ ಸೇವನೆ, ದೈಹಿಕ ಆರೋಗ್ಯದ ಕಡೆ ಗಮನ ಹರಿಸದಿರುವುದು ಹಾಗೂ ಪೌಷ್ಟಿಕಾಹಾರದ ಕೊರತೆಯಂತಹ ಸವಾಲುಗಳು ಅನಾರೋಗ್ಯಕ್ಕೆ ಕಾರಣವಾಗುತ್ತಿವೆ.

ಈ ಭಾಗದಲ್ಲಿ ಹೆಚ್ಚು ಫ್ಲೋರೈಡ್ ನೀರಿನ ಸಮಸ್ಯೆಗಳಿದ್ದು, ಮಕ್ಕಳಲ್ಲಿ ಹೆಚ್ಚಾಗಿ ದಂತ ಮತ್ತು ಮೂಳೆ ಸಂಬಂಧಿಸಿದ ಸಮಸ್ಯೆಗಳು ಕಾಡುತ್ತಿವೆ. ಹಾಗಾಗಿ ಅಂತಹ ಸಮಸ್ಯೆಗಳಿಗೆ ಶಸ್ತ್ರಚಿಕಿತ್ಸೆ ಮಾಡಲಾಗುತ್ತದೆ. ದೃಷ್ಟಿದೋಷಗಳಿಗೆ ಕನ್ನಡಕಗಳನ್ನು ನೀಡಲಾಗುತ್ತದೆ ಎಂದರು.

ಈ ಸಂಧರ್ಭದಲ್ಲಿ ಗ್ರಾಮ ಪಂಚಾಯಿತಿ ಸದಸ್ಯ ಎ.ರವಿ  ವೈದ್ಯರಾದ ಡಾ!ಮಹಿಮಾ,ಡಾ!.ವರ್ಷಿತ,ಡಾ! ಹರಿಣಿ,ಡಾ!. ಕೀರ್ತನ,ಡಾ!.ಶಾಮಲ,ಡಾ!.ಉದಯ್,ಡಾ!.ಕರೀಷ್ಮ,ಡಾ!.ನಳಿನಿ,ದೇವ ರಾಸಪಲ್ಲಿ ಗ್ರಾಮಸ್ಥರಾದ ಮಧು,ಸೂದನ್, ಸೀ. ನಾರಾಯಣ ಸ್ವಾಮಿ, ವೆಂಕಟರವಣಪ್ಪ, ಧನುoಜಯ್, ಧನುಷ್, ಅಂಬರೀಶ್, ಲೋಕೇಶ್ ಸೇರಿದಂತೆ ಮತ್ತಿತರರು ಇದ್ದರು.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0
suddikirana ಸುದ್ದಿ ಕಿರಣ ಟಿವಿ ಬಾಳಿನ ಬೆಳಕು ಕರ್ನಾಟಕದ ಮಾಹಿತಿ ಮನರಂಜನಾ ಚಾನೆಲ್ ಆಗಿದೆ. ಇದು ಮನರಂಜನೆಯ ಜೊತೆಗೆ ಇತ್ತೀಚಿನ ಸುದ್ದಿ ಮತ್ತು ಮಾಹಿತಿಯನ್ನು ವೀಕ್ಷಕರಿಗೆ ತೋರುತ್ತಿದೆ. ಮತ್ತು ಸಮಾಜವು ತೆಗೆದುಕೊಳ್ಳುವ ದಿಕ್ಕು ಮಾಹಿತಿಯಿಂದ ಪ್ರಭಾವಿತವಾಗಿರುತ್ತದೆ ಎಂದು ನಾವು ಅರ್ಥಮಾಡಿಕೊಂಡಿದ್ದೇವೆ. ಸುದ್ದಿ ಕಿರಣ ಟಿವಿ ಹಲವು ವಿಷಯಗಳಲ್ಲಿ ಪ್ರವರ್ತಕವಾಗಿದೆ. ಇದು ತನಿಖಾ ಪತ್ರಿಕೋದ್ಯಮ. ಮತ್ತು ತಾಂತ್ರಿಕ ಕೈಗಾರಿಕೆಗಳ ವೃತ್ತಿಪರರಿಂದ ಪ್ರಚಾರ ಮಾಡಲ್ಪಟ್ಟ ಚಾನೆಲ್ ಆಗಿದೆ. ಸುದ್ದಿ ಕಿರಣ ಟಿವಿ ಇತ್ತೀಚಿನ ತಂತ್ರಜ್ಞಾನಗಳೊಂದಿಗೆ ಗುಣಮಟ್ಟದ ಸಂಪನ್ಮೂಲಗಳನ್ನು ಸಂಯೋಜಿಸಲು ಪ್ರಯತ್ನಿಸುತ್ತದೆ. Chief Editor B.S.Mallikarjuna Reddy # 560, 3ನೇ ಮಹಡಿ, 1ನೇ ಮುಖ್ಯ ರಸ್ತೆ, ಯಶವಂತಪುರ ಬೆಂಗಳೂರು-560022., Email: suddikiranatv@gmail.com Email:suddikiranaa@gmail.com www.suddikirana.com ಸುದ್ದಿ ಮತ್ತು ಜಾಹೀರಾತಿಗಳಿಗಾಗಿ ಸಂಪರ್ಕಿಸಿ ಕಛೇರಿ 08041505268 ಸಂಚಾರಿ ವಾಣಿ 9686665456