ಬಿಜೆಪಿ-ಜೆಡಿಎಸ್ ಪಕ್ಷಗಳಿಗೆ ಮತ ಕೇಳುವ ನೈತಿಕತೆ ಇಲ್ಲ-ಸಿಎಂ ಸಿದ್ದರಾಮಯ್ಯ

ಬಿಜೆಪಿ-ಜೆಡಿಎಸ್ ಪಕ್ಷಗಳಿಗೆ ಮತ ಕೇಳುವ ನೈತಿಕತೆ ಇಲ್ಲ-ಸಿಎಂ ಸಿದ್ದರಾಮಯ್ಯ

ಬಾಗೇಪಲ್ಲಿ: ಪ್ರಧಾನಿ ಮೋದಿಯವರು ಹತ್ತು ವರ್ಷದಲ್ಲಿ ಕೊಟ್ಟ ಒಂದೂ ಆಶ್ವಾಸನೆಯನ್ನೂ ಈಡೇರಿಸದೆ ಭಾರತೀಯರ ನಂಬಿಕೆಗಳಿಗೆ ದ್ರೋಹ ಬಗೆದಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ವಾಗ್ದಾಳಿ ನಡೆಸಿದ್ದಾರೆ..

ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಾಗೇಪಲ್ಲಿ ಪಟ್ಟಣದ ಕೆ.ಎಸ್.ಆರ್, ಟಿ.ಸಿ. ಡಿಪೋ ರಸ್ತೆಯಲ್ಲಿರುವ   ನಡೆದ ಪ್ರಜಾಧ್ವನಿ-2 ಬೃಹತ್ ಜನಸಮಾವೇಶದಲ್ಲಿ ಮಾತನಾಡಿ,ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯ ಅವರ ಗೆಲುವಿಗೆ ಕರೆ ನೀಡಿ ಮಾತನಾಡಿದರು.

ಕೊಟ್ಟ ಮಾತು ಈಡೇರಿಸದ ಬಿಜೆಪಿಗೆ ಮತ್ತು ಇವರ ಜತೆ ಸೇರಿರುವ ಜೆಡಿಎಸ್ ಗೆ ನಿಮ್ಮ ಮತ ಕೇಳುವ ನೈತಿಕತೆ ಇಲ್ಲ. ಮೋದಿ ಪ್ರಧಾನಿ ಆದರೆ ದೇಶ ಬಿಟ್ಟು ಹೋಗ್ತೀನಿ ಅಂದಿದ್ದ ದೇವೇಗೌಡರು ಈಗ ಅದೇ ಮೋದಿಯವರನ್ನು ಅಪ್ಪಿಕೊಂಡಿದ್ದಾರೆ. ಚುನಾವಣೆ ಬಳಿಕ ರಾಜ್ಯ ಕಾಂಗ್ರೆಸ್ ಸರ್ಕಾರ ಪಥನ ಆಗ್ತದೆ ಎನ್ಮುವುದು ಬರೀ ದೇವೇಗೌಡರ  ಭ್ರಮೆ‌. ಐದೂ ವರ್ಷ ನಮ್ಮ ಸರ್ಕಾರ ಸುಭದ್ರವಾಗಿದ್ದು ಮತ್ತೆ ನಾವೇ ಗೆದ್ದು ಬರ್ತೀವಿ ಎಂದರು.

ಭ್ರಷ್ಟನಿಗೆ ಮತ ಕೇಳಲು ಮೋದಿ ಬರ್ತಾರೆ ಅಂದ್ರೆ ವಿಪರ್ಯಾಸ ಕೋವಿಡ್ ಸಂದರ್ಭದಲ್ಲಿ ವ್ಯಾಪಕ ಭ್ರಷ್ಟಾಚಾರ ಎಸಗಿ ಸೋತು ಮನೆ ಸೇರಿರುವ ಸುಧಾಕರ್ ಪರವಾಗಿ ಮತ ಕೇಳಲು ಪ್ರಧಾನಿ ಮೋದಿ ಚಿಕ್ಕಬಳ್ಳಾಪುರಕ್ಕೆ ಬರುತ್ತಿದ್ದಾರೆ. ವಿಧಾನಸಭೆ ಚುನಾವಣೆಯಲ್ಲಿ ಮೋದಿ ಪ್ರಚಾರ ನಡೆಸಿದ್ದ ಎಲ್ಲಾ ಕ್ಷೇತ್ರಗಳಲ್ಲೂ ಬಿಜೆಪಿ ಹೀನಾಯವಾಗಿ ಸೋತಿದೆ.  ಲೋಕಸಭಾ ಚುನಾವಣೆಯಲ್ಲೂ ಅದೇ ಗತಿ ಆಗ್ತದೆ.

ಭಾರತೀಯರಿಗೆ ಭ್ರಮೆ ಹುಟ್ಟಿಸಿ ವಂಚಿಸಿದ ಮೋದಿಯವರನ್ನು ಈ ಬಾರಿ ದೇಶ ತಿರಸ್ಕರಿಸಲಿದೆ. ಕೇಂದ್ರದಲ್ಲಿ ಕಾಂಗ್ರೆಸ್ ನೇತೃತ್ವದ INDIA ಅಧಿಕಾರಕ್ಕೆ ಬರಲಿದೆ. ಕಾಂಗ್ರೆಸ್ ಕೇಂದ್ರದಲ್ಲಿ ಅಧಿಕಾರಕ್ಕೆ ಬರುತ್ತಿದ್ದಂತೆ ಹೊಸ ಗ್ಯಾರಂಟಿಗಳು ಜಾರಿಯಾಗಲಿವೆ.

ರಾಜ್ಯ ಸರ್ಕಾರದ ಗ್ಯಾರಂಟಿಗಳಿಂದ ಪ್ರತೀ ತಿಂಗಳು 5 ರಿಂದ 6 ಸಾವಿರ ರೂಪಾಯಿ ಉಳಿತಾಯ ಆಗುತ್ತಿದೆ. ಕೇಂದ್ರದಲ್ಲೂ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ, ಇಂಥಾ 25 ಹೊಸ ಗ್ಯಾರಂಟಿಗಳು ಜಾರಿಗೆ ಬರಲಿದೆ ಎಂದರು.

ಈ ಸಂಧರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಂ. ಸಿ. ಸುಧಾಕರ್, ವಿಧಾನ ಪರಿಷತ್ ಸದಸ್ಯ ಎಂ.ಎಸ್. ಸೀತ ರಾಮ್,ಶಾಸಕ ಪ್ರದೀಪ್ ಈಶ್ವರ್,ಮಾಜಿ ಶಾಸಕ ಏನ್. ಸಂಪಂಗಿ,ಕಾಂಗ್ರೇಸ್ ಪಕ್ಷದ ಜಿಲ್ಲಾಧ್ಯಕ್ಷ ಕೇಶವ ರೆಡ್ಡಿ,ಮುಖ್ಯಮಂತ್ರಿಗಳ ಕಚೇರಿ ಕಾರ್ಯದರ್ಶಿ ನಸೀರ್ ಅಹ್ಮದ್,ಬ್ಲಾಕ್ ಕಾಂಗ್ರೇಸ್, ಅಧ್ಯಕ್ಷ ಎಚ್. ಎಸ್. ನರೇಂದ್ರ, ಕೆ. ಪಿ. ಸಿ. ಸಿ ಸದಸ್ಯ ಅಮರನಾಥ ರೆಡ್ಡಿ, ಮುಖಂಡರಾದ ಗೊರ್ತಪಲ್ಲಿ ಶಂಕರ್ ರೆಡ್ಡಿ, ಎ. ವಿ. ಪೂಜಪ್ಪ,ಗುಂಟಿ ಗಾನಪಲ್ಲಿ ಮಂಜುನಾಥ ರೆಡ್ಡಿ,ಬುರಗಮಡಗು ನರಸಿಂಹಪ್ಪ,ಬಿ.ವಿ.ವೆಂಕಟರವಣ ಸೇರಿದಂತೆ ವಿವಿಧ ಗಣ್ಯರು, ಅನೇಕ ಮುಖಂಡರು ಸಹಸ್ರಾರು ಸಂಖ್ಯೆಯಲ್ಲಿ ಕಾಂಗ್ರೆಸ್ ಪಕ್ಷದ ಅಭಿಮಾನಿಗಳು, ಕಾರ್ಯಕರ್ತರು ಸೇರಿದ್ದರು....