ಬಿಜೆಪಿ ರಾಜ್ಯ ಕಚೇರಿಯಲ್ಲಿ ಕನಕದಾಸರ ಜಯಂತಿ
ಬೆಂಗಳೂರು: ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಕನಕದಾಸರ ಜಯಂತಿಯನ್ನು ಆಯೋಜಿಸಲಾಗಿತ್ತು.
ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ, ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ವಿಧಾನಪರಿಷತ್ ವಿಪಕ್ಷ ಮುಖ್ಯ ಸಚೇತಕ ಎನ್. ರವಿಕುಮಾರ್, ಕೇಂದ್ರದ ಮಾಜಿ ಸಚಿವ ಎ. ನಾರಾಯಣಸ್ವಾಮಿ, ಬಿಜೆಪಿ ರಾಜ್ಯ ಉಪಾಧ್ಯಕ್ಷ ಮತ್ತು ಶಾಸಕ ಭೈರತಿ ಬಸವರಾಜ್, ರಾಜ್ಯ ಉಪಾಧ್ಯಕ್ಷ ಹರತಾಳು ಹಾಲಪ್ಪ, ವಿಧಾನಪರಿಷತ್ ಮಾಜಿ ಸದಸ್ಯ ಮಹಂತೇಶ ಕವಟಗಿಮಠ, ಒಬಿಸಿ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಬಿ. ಸೋಮಶೇಖರ್, ರಾಜ್ಯ ಕಾರ್ಯಾಲಯ ಕಾರ್ಯದರ್ಶಿ ಲೋಕೇಶ್ ಅಂಬೆಕಲ್ಲು, ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಎಸ್. ಹರೀಶ್ ಮತ್ತು ಪಕ್ಷದ ಪ್ರಮುಖರು ಮತ್ತು ಕಚೇರಿ ಸಿಬ್ಬಂದಿಗಳು ಭಾಗವಹಿಸಿದ್ದರು.
ಕನಕದಾಸರ ಜೀವನಾದರ್ಶಗಳನ್ನು ಅಳವಡಿಸಿಕೊಳ್ಳುವ ಕುರಿತು ಗಣ್ಯರು ಮಾತನಾಡಿದರು.
ಕನಕದಾಸರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಾಯಿತು.
What's Your Reaction?
Like
1
Dislike
0
Love
0
Funny
0
Angry
0
Sad
0
Wow
0
