ಬೂಚೆಪಲ್ಲಿ ಪ್ರೀಮಿಯರ್ ಲೀಗ್ (ಬಿಪಿಎಲ್) ಸೀಸನ್-1 ಕ್ರಿಕೆಟ್ ಪಂದ್ಯಾವಳಿ ಯಶಸ್ವಿ 

Apr 7, 2026 - 17:27
 0  57
ಬೂಚೆಪಲ್ಲಿ ಪ್ರೀಮಿಯರ್ ಲೀಗ್ (ಬಿಪಿಎಲ್) ಸೀಸನ್-1 ಕ್ರಿಕೆಟ್ ಪಂದ್ಯಾವಳಿ ಯಶಸ್ವಿ 

       ಬೇತಮಂಗಲ: ಕ್ರಿಕೆಟ್ ಪಂದ್ಯಾವಳಿಯು ಗ್ರಾಮೀಣ ಮತ್ತು ಪಟ್ಟಣ ಪ್ರದೇಶದ ಉದಯೋನ್ಮುಖ ಕ್ರಿಕೆಟಿಗರಿಗೆ ತಮ್ಮ ಕೌಶಲ್ಯ ಪ್ರತಿಭೆಗಳನ್ನು ಪ್ರದರ್ಶಿಸಲು ಉತ್ತಮ ವೇದಿಕೆಯಾಗಿದೆ ಎಂದು ಯುವ ಮುಖಂಡ ಸಾಮ್ರಾಟ್ ಕೃಷ್ಣಮೂರ್ತಿ ತಿಳಿಸಿದರು. 


ಪಟ್ಟಣದ ಸಮೀಪದ ಬೂಚೆಪಲ್ಲಿ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಬೂಚೆಪಲ್ಲಿ ಪ್ರೀಮಿಯಾರ್ ಲೀಗ್(ಬಿಪಿಎಲ್ ) ಸೀಸನ್- 1 ಕ್ರಿಕೆಟ್ ಪಂದ್ಯಾವಳಿ ಯಶಸ್ವಿಯಾಗಿ ನಡೆಯಿತು. 

ಈ ವೇಳೆ ಗ್ರಾಮದ ಯುವ ಮುಖಂಡ ಸಾಮ್ರಾಟ್ ಕೃಷ್ಣಮೂರ್ತಿ ಮಾತನಾಡಿ, ಯುವ ಜನತೆಯನ್ನು ಕ್ರೀಡೆಯತ್ತ ಸೆಳೆಯುವುದು ಮತ್ತು ಅವರಿಗೆ ಸರಿಯಾದ ಅವಕಾಶ ಕಲ್ಪಿಸುವುದು ನಮ್ಮ ಉದ್ದೇಶವಾಗಿತ್ತು. ಸೀಸನ್-1 ರ ಯಶಸ್ಸು  ಮುಂದಿನ ದಿನಗಳಲ್ಲಿ ಇನ್ನು ದೊಡ್ಡ ಮಟ್ಟದ ಪಂದ್ಯಾವಳಿ ಆಯೋಜಿಸಲು ಸ್ಫೂರ್ತಿ ನೀಡಿದೆ ಹಾಗೂ ಗ್ರಾಮೀಣ ಭಾಗದಲ್ಲಿ ಯುವಕರ ಪ್ರತಿಭೆಗಳನ್ನು ಗುರುತಿಸಲು ಈ ಟೂರ್ನಿಯನ್ನು ಆಯೋಜಿಸಲಾಗಿದೆ ಎಂದು ತಿಳಿಸಿದರು, 

ವಿಜೇತ ತಂಡಗಳಿಗೆ ಬಹುಮಾನ ವಿತರಣೆ: ಪ್ರಥಮ ಬಹುಮಾನ ಎಲ್ಲೋ ಸೂಪರ್ ಕಿಂಗ್ಸ್ ತಂಡವು ನಗದು ಹಾಗೂ ಆಕರ್ಷಕ ಟ್ರೋಫಿಯನ್ನು ಪಡೆದುಕೊಂಡಿತು ದ್ವಿತೀಯ ಬಹುಮಾನ ಗ್ರೀನ್ ಫೈಟರ್ಸ್ ತಂಡವು ನಗದು ಹಾಗೂ ಆಕರ್ಷಕ ಟ್ರೋಫಿ ಪಡೆದು ಕೊಂಡಿತು ಈ ಮೇಲಿನ ತಂಡಗಳಿಗೆ ಗಣ್ಯರು ಬಹುಮಾನಗಳನ್ನು ವಿತರಿಸಿದರು. 

ಈ ಸಂದರ್ಭದಲ್ಲಿ ಸಾಮ್ರಾಟ್ ಕೃಷ್ಣಮೂರ್ತಿ, ವೆಂಕಟ್ರಾಮ್, ಚಲಪತಿ, ಶ್ರೀನಿವಾಸ್ ರೆಡ್ಡಿ, ನಾಗರಾಜ್ ರೆಡ್ಡಿ, ರಾಜೇಂದ್ರ, ವಿನೋದ್, ಕುಮಾರ್, ಸೇರಿದಂತೆ ಯುವಕರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

What's Your Reaction?

Like Like 2
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 1
suddikirana ಸುದ್ದಿ ಕಿರಣ ಟಿವಿ ಬಾಳಿನ ಬೆಳಕು ಕರ್ನಾಟಕದ ಮಾಹಿತಿ ಮನರಂಜನಾ ಚಾನೆಲ್ ಆಗಿದೆ. ಇದು ಮನರಂಜನೆಯ ಜೊತೆಗೆ ಇತ್ತೀಚಿನ ಸುದ್ದಿ ಮತ್ತು ಮಾಹಿತಿಯನ್ನು ವೀಕ್ಷಕರಿಗೆ ತೋರುತ್ತಿದೆ. ಮತ್ತು ಸಮಾಜವು ತೆಗೆದುಕೊಳ್ಳುವ ದಿಕ್ಕು ಮಾಹಿತಿಯಿಂದ ಪ್ರಭಾವಿತವಾಗಿರುತ್ತದೆ ಎಂದು ನಾವು ಅರ್ಥಮಾಡಿಕೊಂಡಿದ್ದೇವೆ. ಸುದ್ದಿ ಕಿರಣ ಟಿವಿ ಹಲವು ವಿಷಯಗಳಲ್ಲಿ ಪ್ರವರ್ತಕವಾಗಿದೆ. ಇದು ತನಿಖಾ ಪತ್ರಿಕೋದ್ಯಮ. ಮತ್ತು ತಾಂತ್ರಿಕ ಕೈಗಾರಿಕೆಗಳ ವೃತ್ತಿಪರರಿಂದ ಪ್ರಚಾರ ಮಾಡಲ್ಪಟ್ಟ ಚಾನೆಲ್ ಆಗಿದೆ. ಸುದ್ದಿ ಕಿರಣ ಟಿವಿ ಇತ್ತೀಚಿನ ತಂತ್ರಜ್ಞಾನಗಳೊಂದಿಗೆ ಗುಣಮಟ್ಟದ ಸಂಪನ್ಮೂಲಗಳನ್ನು ಸಂಯೋಜಿಸಲು ಪ್ರಯತ್ನಿಸುತ್ತದೆ. Chief Editor B.S.Mallikarjuna Reddy # 560, 3ನೇ ಮಹಡಿ, 1ನೇ ಮುಖ್ಯ ರಸ್ತೆ, ಯಶವಂತಪುರ ಬೆಂಗಳೂರು-560022., Email: suddikiranatv@gmail.com Email:suddikiranaa@gmail.com www.suddikirana.com ಸುದ್ದಿ ಮತ್ತು ಜಾಹೀರಾತಿಗಳಿಗಾಗಿ ಸಂಪರ್ಕಿಸಿ ಕಛೇರಿ 08041505268 ಸಂಚಾರಿ ವಾಣಿ 9686665456