ಬೇತಮಂಗಲ ಪೊಲೀಸ್ ವತಿಯಿಂದ ಜನ ಸಂಪರ್ಕ ಸಭೆ: ಕೆಜಿಎಫ್ ಜಿಲ್ಲಾ ಪೊಲೀಸ್ ಅಧೀಕ್ಷಕ ಶಿವಾಂಶು ರಜಪೂತ್ ಉದ್ಘಾಟನೆ
ಬೇತಮಂಗಲ: ಬೇತಮಂಗಲ ಪೊಲೀಸ್ ಠಾಣೆಯ ವತಿಯಿಂದ ಬಡಮಾಕನಹಳ್ಳಿ ಗ್ರಾಮದಲ್ಲಿ ಜನ ಸಂಪರ್ಕ ಸಭೆಯನ್ನು ಆಯೋಜಿಸಲಾಗಿತ್ತು.
ಕಾರ್ಯಕ್ರಮವನ್ನು ಕೆಜಿಎಫ್ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಶಿವಾಂಶು ರಜಪೂತ್ ಅವರು ಉದ್ಘಾಟಿಸಿದರು ಈ ವೇಳೆ ಮಾತನಾಡಿದ ಅವರು, ಸಾರ್ವಜನಿಕರು ಮತ್ತು ಪೊಲೀಸ್ ಇಲಾಖೆಯ ನಡುವಿನ ಬಾಂಧವ್ಯವನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಜನ ಸಂಪರ್ಕ ಸಭೆಗಳನ್ನು ಆಯೋಜಿಸಲಾಗುತ್ತಿದೆ ಎಂದು ತಿಳಿಸಿದರು. ಗ್ರಾಮಸ್ಥರು ತಮ್ಮ ಸಮಸ್ಯೆಗಳು, ಕಾನೂನು ಮತ್ತು ಸುವ್ಯವಸ್ಥೆಗೆ ಸಂಬಂಧಿಸಿದ ವಿಷಯಗಳನ್ನು ಮುಕ್ತವಾಗಿ ಹಂಚಿಕೊಳ್ಳುವಂತೆ ಕರೆ ನೀಡಿದರು.
ಸಭೆಯಲ್ಲಿ ಮಹಿಳೆಯರ ಸುರಕ್ಷತೆ, ಸೈಬರ್ ಅಪರಾಧ ತಡೆ, ಮಾದಕ ವಸ್ತುಗಳ ಬಳಕೆ ನಿಯಂತ್ರಣ ಹಾಗೂ ರಸ್ತೆ ಸುರಕ್ಷತೆ ಕುರಿತು ಸಾರ್ವಜನಿಕರಿಗೆ ಜಾಗೃತಿ ಮೂಡಿಸಲಾಯಿತು. ಗ್ರಾಮದಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡಲು ಸಾರ್ವಜನಿಕರು ಪೊಲೀಸ್ ಇಲಾಖೆಯೊಂದಿಗೆ ಸಹಕರಿಸಬೇಕು ಎಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಡಿವೈಎಸ್ಪಿ ಲಕ್ಷ್ಮಯ್ಯ, ತಹಸಿಲ್ದಾರ್ ಭರತ್, ವೃತ್ತ ನಿರೀಕ್ಷಕ ಎಸ್ ಆರ್ ಜಗದೀಶ್, ಉಪನಿರೀಕ್ಷಕ ತ್ಯಾಗರಾಜ್, ಪಿಡಿಒ ಶ್ರೀನಿವಾಸ್ ಮೂರ್ತಿ, ಕಂದಾಯ ವೃತ್ತ ನಿರೀಕ್ಷಕ ಮುನಿ ವೆಂಕಟಪ್ಪ, ಸೇರಿದಂತೆ ಸಾರ್ವಜನಿಕರು ಹಾಗೂ ಉಪಸ್ಥಿತರಿದ್ದರು.
What's Your Reaction?