ಬೈಕ್ ನಲ್ಲಿ ತೆರಳುತ್ತಿದ್ದ ದಂಪತಿ ಮೇಲೆ ಚಿರತೆ ಅಟ್ಯಾಕ್...ಮಗು ಸೇರಿ ಮೂವರಿಗೆ ಗಂಭೀರ ಗಾಯ...

Feb 11, 2026 - 11:34
 0  15
ಬೈಕ್ ನಲ್ಲಿ ತೆರಳುತ್ತಿದ್ದ ದಂಪತಿ ಮೇಲೆ ಚಿರತೆ ಅಟ್ಯಾಕ್...ಮಗು ಸೇರಿ ಮೂವರಿಗೆ ಗಂಭೀರ ಗಾಯ...

    ನಂಜನಗೂಡು: ಜಮೀನಿಗೆ ಬೈಕ್ ನಲ್ಲಿ ತೆರಳುತ್ತಿದ್ದ ರೈತ ದಂಪತಿಗಳ ಮೇಲೆ ಚಿರತೆ ದಾಳಿ ನಡೆಸಿದ್ದು ಮಗು ಸೇರಿದಂತೆ ಮೂವರು ಗಂಭೀರ ಗಾಯಗೊಂಡ ಘಟನೆ ನಂಜನಗೂಡು ತಾಲ್ಲೂಕಿನ ಚುಂಚನಹಳ್ಳಿ ಗ್ರಾಮದಲ್ಲಿ ನಡೆದಿದೆ. 


ಚುಂಚನಹಳ್ಳಿ ಗ್ರಾಮದ ರೈತ ನಂಜುಂಡಸ್ವಾಮಿ ತನ್ನ ಪತ್ನಿ ಮತ್ತು ಮಗುವಿನೊಂದಿಗೆ ಚುಂಚನಹಳ್ಳಿ -ಕೋಣನೂರು ರಸ್ತೆ ಬಳಿ ಇರುವ ಜಮೀನಿಗೆ ಹೋಗುತ್ತಿದ್ದ ಸಂದರ್ಭದಲ್ಲಿ ಚಿರತೆ ದಾಳಿ ಮಾಡಿದೆ. ಬೈಕ್ ನಲ್ಲಿ ತೆರಳುತ್ತಿದ್ದ ರೈತನ ಮೇಲೆ ಚಿರತೆ ದಾಳಿ ನಡೆಸಿದೆ. ಪರಿಣಾಮ ಮಗು ಸಮೇತ ರೈತ ದಂಪತಿ ಬೈಕ್ ನಿಂದ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದಾರೆ.

ಸ್ಥಳೀಯರು ಕೂಡಲೇ ತಗಡೂರಿನ ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಆಸ್ಪತ್ರೆಗೆ ದಾಖಸಿದ್ದಾರೆ.
ಚುಂಚನಹಳ್ಳಿ, ಕೋಣನೂರು, ಹನುಮನಪುರ ಗ್ರಾಮಗಳ ವ್ಯಾಪ್ತಿಯಲ್ಲಿ ಚಿರತೆಯ ಕಾಟ ಹೆಚ್ಚಾಗಿದ್ದು, ದಿನನಿತ್ಯ ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದೆ.

ಅಲ್ಲದೆ ಜಮೀನಿಗೆ ಹೋಗುವ ರೈತರ ಮೇಲು ದಾಳಿ ನಡೆಸಲು ಮುಂದಾಗುತ್ತಿದ್ದು, ಇಂದು ಜಮೀನಿಗೆ ತೆರಳುತ್ತಿದ್ದ ರೈತ ದಂಪತಿಗಳ ಮೇಲೆ ಚಿರತೆ ದಾಳಿ ನಡೆಸಿದ್ದು, ಕೂಡಲೇ ಚಿರತೆಯನ್ನು ಬೋನು ಇಟ್ಟು ಸೆರೆ ಹಿಡಿಯಬೇಕು. ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕು ಎಂದು ರೈತ ಕಲ್ಯಾಣ ಸಂಘದ ರೈತರು ಒತ್ತಾಯಿಸಿದ್ದಾರೆ...

What's Your Reaction?

Like Like 1
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0
suddikirana ಸುದ್ದಿ ಕಿರಣ ಟಿವಿ ಬಾಳಿನ ಬೆಳಕು ಕರ್ನಾಟಕದ ಮಾಹಿತಿ ಮನರಂಜನಾ ಚಾನೆಲ್ ಆಗಿದೆ. ಇದು ಮನರಂಜನೆಯ ಜೊತೆಗೆ ಇತ್ತೀಚಿನ ಸುದ್ದಿ ಮತ್ತು ಮಾಹಿತಿಯನ್ನು ವೀಕ್ಷಕರಿಗೆ ತೋರುತ್ತಿದೆ. ಮತ್ತು ಸಮಾಜವು ತೆಗೆದುಕೊಳ್ಳುವ ದಿಕ್ಕು ಮಾಹಿತಿಯಿಂದ ಪ್ರಭಾವಿತವಾಗಿರುತ್ತದೆ ಎಂದು ನಾವು ಅರ್ಥಮಾಡಿಕೊಂಡಿದ್ದೇವೆ. ಸುದ್ದಿ ಕಿರಣ ಟಿವಿ ಹಲವು ವಿಷಯಗಳಲ್ಲಿ ಪ್ರವರ್ತಕವಾಗಿದೆ. ಇದು ತನಿಖಾ ಪತ್ರಿಕೋದ್ಯಮ. ಮತ್ತು ತಾಂತ್ರಿಕ ಕೈಗಾರಿಕೆಗಳ ವೃತ್ತಿಪರರಿಂದ ಪ್ರಚಾರ ಮಾಡಲ್ಪಟ್ಟ ಚಾನೆಲ್ ಆಗಿದೆ. ಸುದ್ದಿ ಕಿರಣ ಟಿವಿ ಇತ್ತೀಚಿನ ತಂತ್ರಜ್ಞಾನಗಳೊಂದಿಗೆ ಗುಣಮಟ್ಟದ ಸಂಪನ್ಮೂಲಗಳನ್ನು ಸಂಯೋಜಿಸಲು ಪ್ರಯತ್ನಿಸುತ್ತದೆ. Chief Editor B.S.Mallikarjuna Reddy # 560, 3ನೇ ಮಹಡಿ, 1ನೇ ಮುಖ್ಯ ರಸ್ತೆ, ಯಶವಂತಪುರ ಬೆಂಗಳೂರು-560022., Email: suddikiranatv@gmail.com Email:suddikiranaa@gmail.com www.suddikirana.com ಸುದ್ದಿ ಮತ್ತು ಜಾಹೀರಾತಿಗಳಿಗಾಗಿ ಸಂಪರ್ಕಿಸಿ ಕಛೇರಿ 08041505268 ಸಂಚಾರಿ ವಾಣಿ 9686665456