ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಬಿ.ಮಾಣಿಕ್ಯಂ ನೇಮಕ

Mar 4, 2026 - 13:18
 0  12
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಬಿ.ಮಾಣಿಕ್ಯಂ ನೇಮಕ

     ಕೆಜಿಎಫ್ ವಿಧಾನಸಭಾ ಕ್ಷೇತ್ರದ ರಾಬರ್ಟ್ಸನ್ ಪೇಟೆ ಬ್ಲಾಕ್ ಕಾಂಗ್ರೆಸ್ ಸಮಿತಿಗೆ ಹೊಸ ಚೈತನ್ಯ ತುಂಬುವ ಬೆಳವಣಿಗೆಯಾಗಿ ಬಿ. ಮಾಣಿಕ್ಯಂ ಅವರನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಈ ಕುರಿತು ರಾಜ್ಯ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್ ಆದೇಶ ಹೊರಡಿಸಿದ್ದು, ಪಕ್ಷದ ಸಂಘಟನೆಗೆ ಹೊಸ ದಿಕ್ಕು ನೀಡುವ ನಿರೀಕ್ಷೆ ವ್ಯಕ್ತವಾಗಿದೆ. ಎರಡು ಬಾರಿ ಒಂದನೇ ವಾರ್ಡ್‌ನಿಂದ ನಗರಸಭಾ ಸದಸ್ಯರಾಗಿ ಆಯ್ಕೆಯಾಗಿ ಜನಾನುರಾಗಿಯಾಗಿರುವ ಮಾಣಿಕ್ಯಂ, ಸ್ಥಳೀಯ ಮಟ್ಟದಲ್ಲಿ ಮೃದುಭಾಷಿ ಮತ್ತು ಕಾರ್ಯನಿಷ್ಠ ನಾಯಕನಾಗಿ ಗುರುತಿಸಿಕೊಂಡಿದ್ದಾರೆ. ಪಕ್ಷದ ಹಿತಾಸಕ್ತಿಗಾಗಿ ನೆಲಮಟ್ಟದಲ್ಲಿ ದುಡಿಯುವವರಾಗಿ ಹೆಸರು ಮಾಡಿರುವ ಅವರು ಈಗ ಬ್ಲಾಕ್ ಅಧ್ಯಕ್ಷರ ಜವಾಬ್ದಾರಿ ಹೊತ್ತಿರುವುದು ಕಾಂಗ್ರೆಸ್ ಕಾರ್ಯಕರ್ತರಲ್ಲಿ ಉತ್ಸಾಹ ಮೂಡಿಸಿದೆ.

          ಮಾಣಿಕ್ಯಂ ಅವರ ನೇಮಕಾತಿಗೆ ಕುಡಾ ಅಧ್ಯಕ್ಷ ಶ್ರೀನಿವಾಸ್ ಸೇರಿದಂತೆ ಹಲವು ಮುಖಂಡರು ಅಭಿನಂದನೆ ಸಲ್ಲಿಸಿ, ಸಂಘಟನಾತ್ಮಕ ಬಲವರ್ಧನೆಗೆ ಅವರ ನೇತೃತ್ವ ಸಹಕಾರಿಯಾಗಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು. ತಮ್ಮ ನೇಮಕಾತಿಗೆ ಪ್ರತಿಕ್ರಿಯಿಸಿದ ಮಾಣಿಕ್ಯಂ, ಕೆಜಿಎಫ್ ಶಾಸಕಿ ರೂಪಕಲಾ ಶಶಿಧರ್ ಅವರಿಗೆ ಧನ್ಯವಾದಗಳನ್ನು ತಿಳಿಸಿದರು. “ಅವರ ಮಾರ್ಗದರ್ಶನದಲ್ಲಿ ಪಕ್ಷದ ಕೆಲಸ ಮಾಡಲು ಸಂತೋಷವಾಗುತ್ತಿದೆ. ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷವನ್ನು ಮತ್ತಷ್ಟು ಬಲಪಡಿಸಲು ಸಮರ್ಪಿತವಾಗಿ ಕಾರ್ಯನಿರ್ವಹಿಸುತ್ತೇನೆ,” ಎಂದು ಹೇಳಿದರು. ಸ್ಥಳೀಯ ರಾಜಕೀಯ ಸಮೀಕರಣಗಳಲ್ಲಿ ಈ ನೇಮಕಾತಿ ಮಹತ್ವ ಪಡೆದುಕೊಂಡಿದ್ದು, ಮುಂಬರುವ ಚುನಾವಣಾ ರಾಜಕಾರಣದ ದೃಷ್ಟಿಯಿಂದ ಕಾಂಗ್ರೆಸ್ ಸಂಘಟನೆಯನ್ನು ತಳಮಟ್ಟದಿಂದ ಸಜ್ಜುಗೊಳಿಸುವ ಹೆಜ್ಜೆಯಾಗಿ ಇದನ್ನು ವಿಶ್ಲೇಷಿಸಲಾಗುತ್ತಿದೆ. ಈ ಸಂದರ್ಭದಲ್ಲಿ ಶಾಸಕಿ . ರೂಪಕಲಾ ಶಶಿಧರ್. ಕಾಂಗ್ರೆಸ್ ಮುಖಂಡರು. ಆ.ಮು. ಲಕ್ಷ್ಮಿ ನಾರಾಯಣ್. ಮೋಹನ್ .ಎಂ. ಸಿ ಇದ್ದರು.

What's Your Reaction?

Like Like 1
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0
suddikirana ಸುದ್ದಿ ಕಿರಣ ಟಿವಿ ಬಾಳಿನ ಬೆಳಕು ಕರ್ನಾಟಕದ ಮಾಹಿತಿ ಮನರಂಜನಾ ಚಾನೆಲ್ ಆಗಿದೆ. ಇದು ಮನರಂಜನೆಯ ಜೊತೆಗೆ ಇತ್ತೀಚಿನ ಸುದ್ದಿ ಮತ್ತು ಮಾಹಿತಿಯನ್ನು ವೀಕ್ಷಕರಿಗೆ ತೋರುತ್ತಿದೆ. ಮತ್ತು ಸಮಾಜವು ತೆಗೆದುಕೊಳ್ಳುವ ದಿಕ್ಕು ಮಾಹಿತಿಯಿಂದ ಪ್ರಭಾವಿತವಾಗಿರುತ್ತದೆ ಎಂದು ನಾವು ಅರ್ಥಮಾಡಿಕೊಂಡಿದ್ದೇವೆ. ಸುದ್ದಿ ಕಿರಣ ಟಿವಿ ಹಲವು ವಿಷಯಗಳಲ್ಲಿ ಪ್ರವರ್ತಕವಾಗಿದೆ. ಇದು ತನಿಖಾ ಪತ್ರಿಕೋದ್ಯಮ. ಮತ್ತು ತಾಂತ್ರಿಕ ಕೈಗಾರಿಕೆಗಳ ವೃತ್ತಿಪರರಿಂದ ಪ್ರಚಾರ ಮಾಡಲ್ಪಟ್ಟ ಚಾನೆಲ್ ಆಗಿದೆ. ಸುದ್ದಿ ಕಿರಣ ಟಿವಿ ಇತ್ತೀಚಿನ ತಂತ್ರಜ್ಞಾನಗಳೊಂದಿಗೆ ಗುಣಮಟ್ಟದ ಸಂಪನ್ಮೂಲಗಳನ್ನು ಸಂಯೋಜಿಸಲು ಪ್ರಯತ್ನಿಸುತ್ತದೆ. Chief Editor B.S.Mallikarjuna Reddy # 560, 3ನೇ ಮಹಡಿ, 1ನೇ ಮುಖ್ಯ ರಸ್ತೆ, ಯಶವಂತಪುರ ಬೆಂಗಳೂರು-560022., Email: suddikiranatv@gmail.com Email:suddikiranaa@gmail.com www.suddikirana.com ಸುದ್ದಿ ಮತ್ತು ಜಾಹೀರಾತಿಗಳಿಗಾಗಿ ಸಂಪರ್ಕಿಸಿ ಕಛೇರಿ 08041505268 ಸಂಚಾರಿ ವಾಣಿ 9686665456