ಭಾನುವಾರ ಮಕ್ಕಳಿಂದ ಕುರುಕ್ಷೇತ್ರ ನಾಟಕ ಪ್ರದರ್ಶನ  ಎಚ್ಎನ್ ಲೋಕೇಶ್

Nov 21, 2025 - 13:13
 0  5
ಭಾನುವಾರ ಮಕ್ಕಳಿಂದ ಕುರುಕ್ಷೇತ್ರ ನಾಟಕ ಪ್ರದರ್ಶನ  ಎಚ್ಎನ್ ಲೋಕೇಶ್

  ಚನ್ನರಾಯಪಟ್ಟಣ: ಮಕ್ಕಳಿಂದ ಮಕ್ಕಳಿಗಾಗಿ ಮಕ್ಕಳಿಗೋಸ್ಕರವೇ ಪ್ರಾರಂಭವಾಗಿರುವ ಟ್ರಸ್ಟ್ ವತಿಯಿಂದ ಮಹಾಬುಜ ಮಾರುತಿ ಇಂಡಿಯನ್ ಟ್ರಸ್ಟ್ ಅಡಿಯಲ್ಲಿ ನ.23 ರಂದು ಕುರುಕ್ಷೇತ್ರ ಅಥವಾ ಗದಾಯುದ್ಧ ನಾಟಕ ಪ್ರದರ್ಶನವು ಸರ್ಕಾರಿ ಮಾಧ್ಯಮಿಕ ಶಾಲಾ ಆವರಣದಲ್ಲಿ ನಡೆಯಲಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ ತಾಲ್ಲೂಕು ಘಟಕದ ಅಧ್ಯಕ್ಷ ಎಚ್‌.ಎನ್ ಲೋಕೇಶ್ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಪಟ್ಟಣದ ಸರ್ಕಾರಿ ಪ್ರಾಥಮಿಕ ಶಾಲಾ ಆವರಣದಲ್ಲಿ ಭಾನುವಾರ ಬೆಳಿಗ್ಗೆ 10.00 ರಿಂದ ರಾತ್ರಿ 12.00 ರವರೆಗೆ ನಾಟಕ ಪ್ರದರ್ಶನಕ್ಕೆ ತಯಾರಿ ಮಾಡಲಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಹಾಗೂ ಕಲಾರಸಿಕರು ಆಗಮಿಸುವ ಮೂಲಕ ನಾಟಕ ಪ್ರದರ್ಶನ ಯಶಸ್ವಿ ಗೊಳಿಸಬೇಕು ಎಂದು ಮನವಿ ಮಾಡಿದರು. ಇದೇ ಸಂದರ್ಭದಲ್ಲಿ ನಾಟಕ ತರಬೇತುದಾರ ಪ್ರಜ್ವಲ್, ನಾಟಕ ಆಯೋಜಕರಾದ ರಾಜೇಶ್, ಕಸಾಪ ಅಧ್ಯಕ್ಷರಾದ ಎಚ್ಎನ್ ಲೋಕೇಶ್, ರಾಜಕುಮಾರ್, ಸುರೇಶ್ ಗೌಡ ಸೇರಿದಂತೆ ಇತರರು ಹಾಜರಿದ್ದರು.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0
suddikirana ಸುದ್ದಿ ಕಿರಣ ಟಿವಿ ಬಾಳಿನ ಬೆಳಕು ಕರ್ನಾಟಕದ ಮಾಹಿತಿ ಮನರಂಜನಾ ಚಾನೆಲ್ ಆಗಿದೆ. ಇದು ಮನರಂಜನೆಯ ಜೊತೆಗೆ ಇತ್ತೀಚಿನ ಸುದ್ದಿ ಮತ್ತು ಮಾಹಿತಿಯನ್ನು ವೀಕ್ಷಕರಿಗೆ ತೋರುತ್ತಿದೆ. ಮತ್ತು ಸಮಾಜವು ತೆಗೆದುಕೊಳ್ಳುವ ದಿಕ್ಕು ಮಾಹಿತಿಯಿಂದ ಪ್ರಭಾವಿತವಾಗಿರುತ್ತದೆ ಎಂದು ನಾವು ಅರ್ಥಮಾಡಿಕೊಂಡಿದ್ದೇವೆ. ಸುದ್ದಿ ಕಿರಣ ಟಿವಿ ಹಲವು ವಿಷಯಗಳಲ್ಲಿ ಪ್ರವರ್ತಕವಾಗಿದೆ. ಇದು ತನಿಖಾ ಪತ್ರಿಕೋದ್ಯಮ. ಮತ್ತು ತಾಂತ್ರಿಕ ಕೈಗಾರಿಕೆಗಳ ವೃತ್ತಿಪರರಿಂದ ಪ್ರಚಾರ ಮಾಡಲ್ಪಟ್ಟ ಚಾನೆಲ್ ಆಗಿದೆ. ಸುದ್ದಿ ಕಿರಣ ಟಿವಿ ಇತ್ತೀಚಿನ ತಂತ್ರಜ್ಞಾನಗಳೊಂದಿಗೆ ಗುಣಮಟ್ಟದ ಸಂಪನ್ಮೂಲಗಳನ್ನು ಸಂಯೋಜಿಸಲು ಪ್ರಯತ್ನಿಸುತ್ತದೆ. Chief Editor B.S.Mallikarjuna Reddy # 560, 3ನೇ ಮಹಡಿ, 1ನೇ ಮುಖ್ಯ ರಸ್ತೆ, ಯಶವಂತಪುರ ಬೆಂಗಳೂರು-560022., Email: suddikiranatv@gmail.com Email:suddikiranaa@gmail.com www.suddikirana.com ಸುದ್ದಿ ಮತ್ತು ಜಾಹೀರಾತಿಗಳಿಗಾಗಿ ಸಂಪರ್ಕಿಸಿ ಕಛೇರಿ 08041505268 ಸಂಚಾರಿ ವಾಣಿ 9686665456