ಭೂ ಪರಿವರ್ತನೆ ನಿಯಮ ಗಳ ಸರಳಿಕರಣ: ಸಚಿವ ಕೃಷ್ಣ ಬೈರೇಗೌಡ

Dec 10, 2025 - 17:35
 0  4
ಭೂ ಪರಿವರ್ತನೆ ನಿಯಮ ಗಳ ಸರಳಿಕರಣ: ಸಚಿವ ಕೃಷ್ಣ ಬೈರೇಗೌಡ

   ಬೆಳಗಾವಿ ಡಿಸೆಂಬರ್ 10:  ರಾಜ್ಯದಲ್ಲಿ ಕೃಷಿ ಜಮೀನನ್ನು ಕೃಷಿಯೇತರ ಉದ್ದೇಶಗಳಿಗೆ ಪರಿವರ್ತಿಸುವ ಪ್ರಕ್ರಿಯೆಯನ್ನು ಸರಳೀಕರಿಸಲು ಕರ್ನಾಟಕ ಭೂ ಕಂದಾಯ ಕಾಯ್ದೆ, 1964ರ ಕಲಂ 95ರ ವಿವಿಧ ಉಪ-ಕಲಂಗಳಿಗೆ ತಿದ್ದುಪಡಿಯನ್ನು ಮಾಡಲಾಗಿದೆ. ಅದನ್ನು ಜಾರಿಗೆ ತರಲು ಈಗಾಗಲೇ ವಿವಿಧ ಇಲಾಖೆಗಳೊಂದಿಗೆ ಸಮಾಲೋಚನೆ ನಡೆಸಿ, ಅಭಿಪ್ರಾಯ ಹಾಗೂ ಸಲಹೆಯನ್ನು ಪಡೆದು ಸೂಕ್ತ ನಿಯಮಗಳನ್ನು ಕ್ರಮಕೈಗೊಳ್ಳಲಾಗುತ್ತಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.

*ಅವರು ವಿಧಾನ ಪರಿಷತ್ ನಲ್ಲಿ ಸದಸ್ಯ ರಾಮೋಜಿ ಗೌಡ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ 
ಉತ್ತರಿಸಿದರು*.

ಪ್ರಸ್ತುತ ಕೃಷಿ ಜಮೀನನ್ನು ಕೃಷಿಯೇತರ ಉದ್ದೇಶಗಳಿಗೆ ಪರಿವರ್ತಿಸಲು  ಕ್ರಮವಹಿಸಲಾಗುತ್ತಿರುವುದರಿಂದ ಜನತೆಗೆ ತೊಂದರೆಯಾಗುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿರುವುದಿಲ್ಲ.

ಕರ್ನಾಟಕ ಭೂ ಕಂದಾಯ ಕಾಯ್ದೆ, 1964ರ ಕಲಂ 95ಕ್ಕೆ ಮಾಡಲಾದ ತಿದ್ದುಪಡಿಗಳಿಗೆ ಅನುಗುಣವಾಗಿ ಕರ್ನಾಟಕ ಭೂ ಕಂದಾಯ ನಿಯಮಗಳು, 1966ರ ವಿವಿಧ ನಿಯಮಗಳಿಗೆ ತಿದ್ದುಪಡಿ ಮಾಡಲು ಸರ್ಕಾರವು ದಿನಾಂಕ: 17.09.2025 ರಂದು ಕರಡು ನಿಯಮಗಳ ಅಧಿಸೂಚನೆಯನ್ನು ಹೊರಡಿಸಿದ್ದು, ಶೀಘ್ರದಲ್ಲಿ ಅಂತಿಮ ಅಧಿಸೂಚನೆಯನ್ನು
ಹೊರಡಿಸಲಾಗುವುದು ಎಂದರು.

ಸಣ್ಣ ಕೈಗಾರಿಕೆಗಳಿಗೆ ಪ್ರೋತ್ಸಾಹ ನೀಡುವ ಉದ್ದೇಶದಿಂದ 2 ಎಕ್ರೆ ವರೆಗೆ  ಭೂ ಪರಿವರ್ತನೆಯ ಅವಶ್ಯಕತೆ ಇಲ್ಲದೆ ನೇರವಾಗಿ ಪ್ಲಾನ್ ಅಪ್ರೋವ್ ಮಾಡಿಸಿಕೊಳ್ಳಬಹುದಾಗಿದೆ ಹಾಗೂ  ರಿನೀವಲ್ ಎನರ್ಜಿ  ಯೋಜನೆ ಗಳಿಗೆ ಕನ್ವರ್ಶನ್ ಅಗತ್ಯವಿಲ್ಲ ಮತ್ತು ರೆವಿನ್ಯು  ಕೋರ್ಟ್ ನಡೆಸುವ ಕುರಿತಂತೆ ನಿಯಮಗಳನ್ನು ರೂಪಿಸಲಾಗುತ್ತಿದೆ ಎಂದು ತಿಳಿಸಿದರು.

What's Your Reaction?

Like Like 1
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0
suddikirana ಸುದ್ದಿ ಕಿರಣ ಟಿವಿ ಬಾಳಿನ ಬೆಳಕು ಕರ್ನಾಟಕದ ಮಾಹಿತಿ ಮನರಂಜನಾ ಚಾನೆಲ್ ಆಗಿದೆ. ಇದು ಮನರಂಜನೆಯ ಜೊತೆಗೆ ಇತ್ತೀಚಿನ ಸುದ್ದಿ ಮತ್ತು ಮಾಹಿತಿಯನ್ನು ವೀಕ್ಷಕರಿಗೆ ತೋರುತ್ತಿದೆ. ಮತ್ತು ಸಮಾಜವು ತೆಗೆದುಕೊಳ್ಳುವ ದಿಕ್ಕು ಮಾಹಿತಿಯಿಂದ ಪ್ರಭಾವಿತವಾಗಿರುತ್ತದೆ ಎಂದು ನಾವು ಅರ್ಥಮಾಡಿಕೊಂಡಿದ್ದೇವೆ. ಸುದ್ದಿ ಕಿರಣ ಟಿವಿ ಹಲವು ವಿಷಯಗಳಲ್ಲಿ ಪ್ರವರ್ತಕವಾಗಿದೆ. ಇದು ತನಿಖಾ ಪತ್ರಿಕೋದ್ಯಮ. ಮತ್ತು ತಾಂತ್ರಿಕ ಕೈಗಾರಿಕೆಗಳ ವೃತ್ತಿಪರರಿಂದ ಪ್ರಚಾರ ಮಾಡಲ್ಪಟ್ಟ ಚಾನೆಲ್ ಆಗಿದೆ. ಸುದ್ದಿ ಕಿರಣ ಟಿವಿ ಇತ್ತೀಚಿನ ತಂತ್ರಜ್ಞಾನಗಳೊಂದಿಗೆ ಗುಣಮಟ್ಟದ ಸಂಪನ್ಮೂಲಗಳನ್ನು ಸಂಯೋಜಿಸಲು ಪ್ರಯತ್ನಿಸುತ್ತದೆ. Chief Editor B.S.Mallikarjuna Reddy # 560, 3ನೇ ಮಹಡಿ, 1ನೇ ಮುಖ್ಯ ರಸ್ತೆ, ಯಶವಂತಪುರ ಬೆಂಗಳೂರು-560022., Email: suddikiranatv@gmail.com Email:suddikiranaa@gmail.com www.suddikirana.com ಸುದ್ದಿ ಮತ್ತು ಜಾಹೀರಾತಿಗಳಿಗಾಗಿ ಸಂಪರ್ಕಿಸಿ ಕಛೇರಿ 08041505268 ಸಂಚಾರಿ ವಾಣಿ 9686665456