ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಉತ್ತಮ ವೇದಿಕೆ.....ವಲಯ ಸಂಪನ್ಮೂಲ ಅಧಿಕಾರಿ ಬಸವರಾಜ ಅಂಗಡಿ

Nov 22, 2025 - 15:32
 0  8
ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಉತ್ತಮ ವೇದಿಕೆ.....ವಲಯ ಸಂಪನ್ಮೂಲ ಅಧಿಕಾರಿ ಬಸವರಾಜ ಅಂಗಡಿ

  ಸಿಂಧನೂರು ತಾಲೂಕಿನ EJ ಹೊಸಳ್ಳಿ ಕ್ಯಾಂಪ್ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಲಯ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮ ಅದ್ದೂರಿಯಾಗಿ ಜರುಗಿತು.13 ಶಾಲೆಗಳ 300 ಅಧಿಕ ವಿದ್ಯಾರ್ಥಿಗಳು ಭಾಗವಹಿಸಿ ಯಶಸ್ವೀಗೊಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು SDMC ಅಧ್ಯಕ್ಷರಾದ ಪ್ರಕಾಶ ಅವರು ವಹಿಸಿದ್ದರು.ಗ್ರಾಮ ಪಂಚಾಯತಿ ಅಧ್ಯಕ್ಷರಾದ ಶ್ರೀಮತಿ ರೇಣುಕಮ್ಮ ಹುಸೇನಪ್ಪ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ವಲಯ ಮಟ್ಟದ ಸಂಪನ್ಮೂಲ ಅಧಿಕಾರಿಗಳಾದ ಬಸವರಾಜ ಅಂಗಡಿ ಅವರು ಪ್ರಾಸ್ತವಿಕವಾಗಿ ಮಾತನಾಡಿರು. ಮಕ್ಕಳು ತಮ್ಮ ಪಠ್ಯ ಪುಸ್ತಕಗಳನ್ನು ಓದುವದರ ಜೊತೆಗೆ ಬೌಧಿಕ ಸಾಮರ್ಥ್ಯವನ್ನು ಹೆಚ್ಚಿಸಿಕೊಳ್ಳಲು ಹಾಗೂ ಅಧ್ಯಾತ್ಮಿಕ ಚಿಂತನಗಳು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಲು ಇಂತಹ ವೇದಿಕೆಗಳು ಮಕ್ಕಳಿಗೆ ಬಹಳ ಅವಶ್ಯಕತೆ ಇದೆ.ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಉತ್ತಮ ವೇದಿಕೆಯಾಗಿದೆ ಇದನ್ನು ಎಲ್ಲಾ ವಿದ್ಯಾರ್ಥಿಗಳು ಸದುಪಯೋಗ ಪಡೆದುಕೊಳ್ಳಬೇಕು ಎಂದು ಹೇಳಿದರು.

ಪ್ರತಿಭಾ ಕಾರಂಜಿ ವೇದಿಕೆಗಳಲ್ಲಿ ಮಕ್ಕಳು ತಮ್ಮ ಪ್ರತಿಭೆಯನ್ನು ಪ್ರದರ್ಶಿಸುವದರಿಂದ ಮಕ್ಕಳಲ್ಲಿ ನಾಯಕತ್ವ ಗುಣ ಬೆಳೆಯುತ್ತದೆ ಹಾಗೂ ಆದರ್ಶ ಪುರುಷರ ಜೀವನ ಚರಿತ್ರೆಯ ಸಾರವನ್ನು ತಿಳದುಕೊಂಡು ಉತ್ತಮ ಸಮಾಜ ಕಟ್ಟಲು ಇಂತಹ ವೇದಿಕೆಗಳು ಬಹಳ ಉಪಯೋಗವಾಗುತ್ತವೆ ಎಂದು ಮುಖ್ಯ ಗುರು ವೀಣಾ ಬಾಯಿ ಹೇಳಿದರು.

ಈ ಸಂಧರ್ಭದಲ್ಲಿ ನಾಗೇಂದ್ರ PDO, ಶಿಕ್ಷಕರಾದ ಛತ್ರಪ್ಪ ಸ್ವಾಗತ ಕೋರಿದರು.ಶ್ರೀಮತಿ ಆಶಾ SK ನಿರೂಪಣೆ ಮಾಡಿದರು.ಸನ್ಮಾನ ಕಾರ್ಯಕ್ರಮವನ್ನು ಶ್ರೀ ಮತಿ ಚಂದ್ರವತಿ ಮತ್ತು ಶ್ರೀಮತಿ ವಿಜಯಲಕ್ಷ್ಮಿ ನಡೆಸಿಕೊಟ್ಟರು,ಈ ಸಂಧರ್ಭದಲ್ಲಿ ಎಲ್ಲಾ ಶಿಕ್ಷಕರು ಅತಿಥಿ ಶಿಕ್ಷಕರು,ಉರಿನ ಮುಖಂಡರು,ಅಡುಗೆ ಸಿಬ್ಬಂದಿಗಳು, ವಿದ್ಯಾರ್ಥಿಗಳು.ಹೊಸಳ್ಳಿ EJ ವಲಯ ಮಟ್ಟದ ಎಲ್ಲಾ ಶಾಲೆಯ ಮುಖ್ಯ ಗುರುಗಳು,SDMC ಸದಸ್ಯರು ಮತ್ತು ಸಹ ಶಿಕ್ಷಕರು ಭಾಗವಹಿಸಿದ್ದರು.

What's Your Reaction?

Like Like 1
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0
suddikirana ಸುದ್ದಿ ಕಿರಣ ಟಿವಿ ಬಾಳಿನ ಬೆಳಕು ಕರ್ನಾಟಕದ ಮಾಹಿತಿ ಮನರಂಜನಾ ಚಾನೆಲ್ ಆಗಿದೆ. ಇದು ಮನರಂಜನೆಯ ಜೊತೆಗೆ ಇತ್ತೀಚಿನ ಸುದ್ದಿ ಮತ್ತು ಮಾಹಿತಿಯನ್ನು ವೀಕ್ಷಕರಿಗೆ ತೋರುತ್ತಿದೆ. ಮತ್ತು ಸಮಾಜವು ತೆಗೆದುಕೊಳ್ಳುವ ದಿಕ್ಕು ಮಾಹಿತಿಯಿಂದ ಪ್ರಭಾವಿತವಾಗಿರುತ್ತದೆ ಎಂದು ನಾವು ಅರ್ಥಮಾಡಿಕೊಂಡಿದ್ದೇವೆ. ಸುದ್ದಿ ಕಿರಣ ಟಿವಿ ಹಲವು ವಿಷಯಗಳಲ್ಲಿ ಪ್ರವರ್ತಕವಾಗಿದೆ. ಇದು ತನಿಖಾ ಪತ್ರಿಕೋದ್ಯಮ. ಮತ್ತು ತಾಂತ್ರಿಕ ಕೈಗಾರಿಕೆಗಳ ವೃತ್ತಿಪರರಿಂದ ಪ್ರಚಾರ ಮಾಡಲ್ಪಟ್ಟ ಚಾನೆಲ್ ಆಗಿದೆ. ಸುದ್ದಿ ಕಿರಣ ಟಿವಿ ಇತ್ತೀಚಿನ ತಂತ್ರಜ್ಞಾನಗಳೊಂದಿಗೆ ಗುಣಮಟ್ಟದ ಸಂಪನ್ಮೂಲಗಳನ್ನು ಸಂಯೋಜಿಸಲು ಪ್ರಯತ್ನಿಸುತ್ತದೆ. Chief Editor B.S.Mallikarjuna Reddy # 560, 3ನೇ ಮಹಡಿ, 1ನೇ ಮುಖ್ಯ ರಸ್ತೆ, ಯಶವಂತಪುರ ಬೆಂಗಳೂರು-560022., Email: suddikiranatv@gmail.com Email:suddikiranaa@gmail.com www.suddikirana.com ಸುದ್ದಿ ಮತ್ತು ಜಾಹೀರಾತಿಗಳಿಗಾಗಿ ಸಂಪರ್ಕಿಸಿ ಕಛೇರಿ 08041505268 ಸಂಚಾರಿ ವಾಣಿ 9686665456