ಮರಗಳ ರಕ್ಷಣೆಗೆ ಮಹಿಳೆಯರು ಅತ್ಯುತ್ತಮ ಕಾರ್ಯಕ್ರಮ ನಗರಸಭೆಯ ಅಧ್ಯಕ್ಷರಾದ ಎಮ್ ಸಮೀವುಲ್ಲಾ

Aug 29, 2025 - 16:37
 0  87
ಮರಗಳ ರಕ್ಷಣೆಗೆ ಮಹಿಳೆಯರು ಅತ್ಯುತ್ತಮ ಕಾರ್ಯಕ್ರಮ ನಗರಸಭೆಯ ಅಧ್ಯಕ್ಷರಾದ ಎಮ್ ಸಮೀವುಲ್ಲಾ

ಹಾಸನ: ಅಮೃತ ಮಿತ್ರ ಕಾರ್ಯಕ್ರಮದ ಅಡಿಯಲ್ಲಿ ಮರಗಳ ರಕ್ಷಣೆಗೆ ಮಹಿಳೆಯರು ಎಂಬ ಕಾರ್ಯಕ್ರಮ ಉತ್ತಮ ಕಾರ್ಯಕ್ರಮ ಆಗಿದ್ದು ಮಹಿಳೆಯರು ತಮ್ಮ ತಮ್ಮ ಕುಟುಂಬಗಳನ್ನು ಹೇಗೆ ಉತ್ತಮ ರೀತಿಯಲ್ಲಿ ಸಾಗಿಸುತ್ತಾರೋ ಅದೇ ರೀತಿ ಮಹಿಳೆಯ ಹೆಸರು ತಾಯಂದಿರು ತಮ್ಮ ಅಕ್ಕತಂಗಿಯರ ಹೆಸರಿನಲ್ಲಿ ಗಿಡಗಳನ್ನು ನೆಟ್ಟು ಉತ್ತಮ ಕಾರ್ಯ ಮಾಡುವುದರಲ್ಲಿ ಯಾವುದೇ ಸಂದೇಹ ಇಲ್ಲ ಇದರಿಂದ ಸರ್ಕಾರ ಚಿಂತನೆ ಮಾಡಿ ಈ ಯೋಜನೆ ಜಾರಿಗೆ ತಂದಿದೆ ಮಹಿಳೆಯರು ಈ ರೀತಿ ಗಿಡಗಳನ್ನು ನೆಟ್ಟಿ ಹಸಿರು ಯುಕ್ತ ನಗರಗಳನ್ನು ನಿರ್ಮಾಣ ಮಾಡಿ ಪರಿಸರ ಕಾಪಾಡುವಲ್ಲಿ ಮಹಿಳೆಯರ ಪಾತ್ರ ಹೆಚ್ಚಾಗಿದೆ ಹೀಗಾಗಿ ಈ ಕಾರ್ಯಕ್ರಮ ಮುಂದಿನ ದಿನಗಳಲ್ಲಿ ಯಶಸ್ವಿಯಾಗುವುದರಲ್ಲಿ ಯಾವುದೇ ಸಂದೇಹವಿಲ್ಲ ಎಂದು ಅರಸಿಕೆರೆ ನಗರಸಭೆಯ ಅಧ್ಯಕ್ಷರಾದ ಎಮ್ ಸಮೀವುಲ್ಲಾ ತಿಳಿಸಿದರು 

 ಅರಸೀಕೆರೆ ನಗರದ ಜೇನುಕಲ್ ನಗರದ ಬಳಿ ಇರುವ ನಗರ ಸಭೆಯ ನೀರು ಶುದ್ಧೀಕರಣ ಘಟಕದ ಆವರಣದಲ್ಲಿ ಈ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು ಈಗಾಗಲೇ ಅರಸೀಕೆರೆ ನಗರದಲ್ಲಿ ಎರಡು ಮಹಿಳಾ ಸ್ವಸಹಾಯ ಸಂಘಗಳಿಗೆ ಉದ್ಯಾನವನಗಳ ನಿರ್ವಹಣೆಗಾಗಿ ನಗರಸಭಾ ವತಿಯಿಂದ ಜವಾಬ್ದಾರಿ ನೀಡಿದ್ದು ಈ ಕಾರ್ಯವನ್ನು ಸ್ವಸಹಾಯ ಸಂಘದ ಮಹಿಳೆಯರು ಯಶಸ್ವಿಯಾಗಿ ಮತ್ತು ಶಿಸ್ತಿನಿಂದ ನಡೆಸುತ್ತಿದ್ದಾರೆ ಮಹಿಳೆಯರಿಗೆ ಯಾವುದೇ ಜವಾಬ್ದಾರಿಗಳನ್ನು ನೀಡಿದಲ್ಲಿ ಉತ್ತಮ ರೀತಿಯಲ್ಲಿ ನಡೆಸಿಕೊಂಡು ಹೋಗುತ್ತಾರೆ ಎನ್ನುವುದಕ್ಕೆ ಈ ಕಾರ್ಯಕ್ರಮ ಉದಾಹರಣೆಯಾಗಿದೆ ಎಂದರು ನಗರಸಭೆ ಆಯುಕ್ತರಾದ ಕೃಷ್ಣಮೂರ್ತಿ ಉಪಾಧ್ಯಕ್ಷರಾದ ಮನೋಹರ್ ನಗರಸಭೆ ಸದಸ್ಯರುಗಳಾದ ಪ್ರೇಮ. ಅನ್ನಪೂರ್ಣ. ದರ್ಶನ್ . ನಗರ ಸಭೆಯ ಸಮುದಾಯ ಸಂಘಟನಾಧಿಕಾರಿಗಳಾದ ರಾಜಶೇಖರ್ ಉಪಸ್ಥಿತರಿದ್ದರು.

What's Your Reaction?

Like Like 1
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0
suddikirana ಸುದ್ದಿ ಕಿರಣ ಟಿವಿ ಬಾಳಿನ ಬೆಳಕು ಕರ್ನಾಟಕದ ಮಾಹಿತಿ ಮನರಂಜನಾ ಚಾನೆಲ್ ಆಗಿದೆ. ಇದು ಮನರಂಜನೆಯ ಜೊತೆಗೆ ಇತ್ತೀಚಿನ ಸುದ್ದಿ ಮತ್ತು ಮಾಹಿತಿಯನ್ನು ವೀಕ್ಷಕರಿಗೆ ತೋರುತ್ತಿದೆ. ಮತ್ತು ಸಮಾಜವು ತೆಗೆದುಕೊಳ್ಳುವ ದಿಕ್ಕು ಮಾಹಿತಿಯಿಂದ ಪ್ರಭಾವಿತವಾಗಿರುತ್ತದೆ ಎಂದು ನಾವು ಅರ್ಥಮಾಡಿಕೊಂಡಿದ್ದೇವೆ. ಸುದ್ದಿ ಕಿರಣ ಟಿವಿ ಹಲವು ವಿಷಯಗಳಲ್ಲಿ ಪ್ರವರ್ತಕವಾಗಿದೆ. ಇದು ತನಿಖಾ ಪತ್ರಿಕೋದ್ಯಮ. ಮತ್ತು ತಾಂತ್ರಿಕ ಕೈಗಾರಿಕೆಗಳ ವೃತ್ತಿಪರರಿಂದ ಪ್ರಚಾರ ಮಾಡಲ್ಪಟ್ಟ ಚಾನೆಲ್ ಆಗಿದೆ. ಸುದ್ದಿ ಕಿರಣ ಟಿವಿ ಇತ್ತೀಚಿನ ತಂತ್ರಜ್ಞಾನಗಳೊಂದಿಗೆ ಗುಣಮಟ್ಟದ ಸಂಪನ್ಮೂಲಗಳನ್ನು ಸಂಯೋಜಿಸಲು ಪ್ರಯತ್ನಿಸುತ್ತದೆ. Chief Editor B.S.Mallikarjuna Reddy # 560, 3ನೇ ಮಹಡಿ, 1ನೇ ಮುಖ್ಯ ರಸ್ತೆ, ಯಶವಂತಪುರ ಬೆಂಗಳೂರು-560022., Email: suddikiranatv@gmail.com Email:suddikiranaa@gmail.com www.suddikirana.com ಸುದ್ದಿ ಮತ್ತು ಜಾಹೀರಾತಿಗಳಿಗಾಗಿ ಸಂಪರ್ಕಿಸಿ ಕಛೇರಿ 08041505268 ಸಂಚಾರಿ ವಾಣಿ 9686665456