ಮಹನೀಯರ ಜಯಂತಿಗಳು ಅರ್ಥಪೂರ್ಣವಾಗಿ ಆಚರಿಸೋಣ-ತಹಶೀಲ್ದಾ‌ರ್ ಮನಿಷಾ ಮಹೇಶ್ ಪತ್ರಿ

Jun 12, 2025 - 17:47
 0  3
ಮಹನೀಯರ ಜಯಂತಿಗಳು ಅರ್ಥಪೂರ್ಣವಾಗಿ ಆಚರಿಸೋಣ-ತಹಶೀಲ್ದಾ‌ರ್ ಮನಿಷಾ ಮಹೇಶ್ ಪತ್ರಿ

ಬಾಗೇಪಲ್ಲಿ: ಮಹನೀಯರ ಜಯಂತಿಗಳು ಕೇವಲ ಆಡಂಬರ, ಅದ್ದೂರಿಯ ಸಂಕೇತವಾಗಬಾರದು, ಮಹನೀಯರ ಆದರ್ಶಗಳನ್ನು ಮೈಗೂಡಿಸಿಕೊಂಡು ನಮ್ಮ ಬದುಕಿನಲ್ಲಿ ಅಳವಡಿಸಿಕೊಳ್ಳುವ ಮೂಲಕ ಸಾರ್ಥಕ ಆಚರಣೆ ಆಗಬೇಕೆಂದು ತಹಶೀಲ್ದಾ‌ರ್ ಮನಿಷಾ ಮಹೇಶ್ ಪತ್ರಿ ತಿಳಿಸಿದರು.

ಪಟ್ಟಣದ ತಾಲ್ಲೂಕು ಕಚೇರಿ ನ್ಯಾಯಾಲಯ ಸಭಾಂಗಣದಲ್ಲಿ ನಾಡಹಬ್ಬಗಳ ಆಚರಣಾ ಸಮಿತಿಯಿಂದ ನಡೆದ ನಾಡಪ್ರಭು ಕೆಂಪೇಗೌಡರ ಜಯಂತಿಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿಮಾತನಾಡಿದ ಅವರು ಇದೆ ಜೂ.27 ರಂದು ನಾಡಪ್ರಭು ಕೆಂಪೇಗೌಡರ ಜಯಂತಿಯನ್ನು ಆಚರಿಸಬೇಕಿದೆ. ಈ ಜಗತ್ತಿನಲ್ಲಿ ಉತ್ತಮ ಬದುಕನ್ನು ರೂಪಿಸಲು ಇರುವ ಏಕೈಕ ಉತ್ತಮ ಮಾರ್ಗ
ಶಿಕ್ಷಣವೊಂದೆ ಹಾಗಾಗಿ ಎಲ್ಲ ಸಮುದಾಯದವರೂ ಸಹ ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸುವ ನಿಟ್ಟಿನಲ್ಲಿ ಶ್ರಮಿಸಬೇಕು ಹಾಗೂ ಪ್ರತಿಯೊಂದು ಕ್ಷೇತ್ರದಲ್ಲೂ ಸಾಧನೆಗೆ ಶಿಕ್ಷಣವೆ ಅಡಿಪಾಯವಾಗಿದೆ ಹಾಗಾಗಿ ಸಮುದಾಯದ ಹಿರಿಯ ಮುಖಂಡರು ತಮ್ಮಮ್ಮ ಸಮುದಾಯಗಳ ಬಡವರ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಕೈಜೋಡಿಸಿ ಉತ್ತೇಜನ ನೀಡಿ ಹಾಗೂ ಎಸ್.ಎಸ್.ಎಲ್.ಸಿ. ಮತ್ತು ಪಿ.ಯು.ಸಿ ಪರೀಕ್ಷೆಯಲ್ಲಿ ಉತ್ತಮ ಅಂಕಗಳು ಪಡೆದ ವಿದ್ಯಾರ್ಥಿಗಳಿಗೆ  ವಿದ್ಯಾಭ್ಯಾಸದ ಉತ್ತೇಜನ ನೀಡಿ ಸನ್ಮಾನಿಸುವ ಮೂಲಕ ನಾಡ ಪ್ರಭು ಕೆಂಪೇಗೌಡರ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸೋಣ ಎನ್ನುವ ತಹಶೀಲ್ದಾರರ ಅಭಿಪ್ರಾಯಕ್ಕೆ ಸಭೆಯಲ್ಲಿ ಎಲ್ಲರೂ ಸಹಮತ ವ್ಯಕ್ತಪಡಿಸಿದರು.

ಈ ಸಂಧರ್ಭದಲ್ಲಿ ಒಕ್ಕಲಿಗರ ಸಂಘದ ಅಧ್ಯಕ್ಷ ನರಸಿಂಹರೆಡ್ಡಿ,ಕಾರ್ಯದರ್ಶಿ, ಸೋಮುಶೇಖರ್ ರೆಡ್ಡಿ,ವೆಂಕಟೇಶ್,ಸುಬ್ಬೀರೆಡ್ಡಿ, ವೆಂಕಟರಂಗಾರೆಡ್ಡಿ, ಬೈರೆಡ್ಡಿ, ವೆಂಕಟರೆಡ್ಡಿ, ವೆಂಕಟಶಿವಾರೆಡ್ಡಿ,ಚೌ ಡ ರೆಡ್ಡಿ, ಚೇಳೂರು ಶಿವಾ ರೆಡ್ಡಿ,ವೆಂಕಟರವಣಪ್ಪ,ಕ್ಷೇತ್ರ ಶಿಕ್ಷಣಾಧಿಕಾರಿ ವೆಂಕಟೇಶಪ್ಪ,ಪುರಸಭೆ ಮುಖ್ಯಧಿಕಾರಿ ಶ್ರೀನಿವಾಸ್,ಲೋಕೋಪಯೋಗಿ ಇಲಾಖೆ ಪ್ರದೀಪ್,ತಾಲ್ಲೂಕು ಪ್ರಭಾರಿ ದೈಹಿಕ ಶಿಕ್ಷಕ ರಂಗನಾಥ್, ಕಾವ್ಯ,ತಾಲ್ಲೂಕು ಪಂಚಾಯಿತಿ ಜಾಕೀರ್ ಸೇರಿದಂತೆ ಮತ್ತಿತರರು ಇದ್ದರು.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0
suddikirana ಸುದ್ದಿ ಕಿರಣ ಟಿವಿ ಬಾಳಿನ ಬೆಳಕು ಕರ್ನಾಟಕದ ಮಾಹಿತಿ ಮನರಂಜನಾ ಚಾನೆಲ್ ಆಗಿದೆ. ಇದು ಮನರಂಜನೆಯ ಜೊತೆಗೆ ಇತ್ತೀಚಿನ ಸುದ್ದಿ ಮತ್ತು ಮಾಹಿತಿಯನ್ನು ವೀಕ್ಷಕರಿಗೆ ತೋರುತ್ತಿದೆ. ಮತ್ತು ಸಮಾಜವು ತೆಗೆದುಕೊಳ್ಳುವ ದಿಕ್ಕು ಮಾಹಿತಿಯಿಂದ ಪ್ರಭಾವಿತವಾಗಿರುತ್ತದೆ ಎಂದು ನಾವು ಅರ್ಥಮಾಡಿಕೊಂಡಿದ್ದೇವೆ. ಸುದ್ದಿ ಕಿರಣ ಟಿವಿ ಹಲವು ವಿಷಯಗಳಲ್ಲಿ ಪ್ರವರ್ತಕವಾಗಿದೆ. ಇದು ತನಿಖಾ ಪತ್ರಿಕೋದ್ಯಮ. ಮತ್ತು ತಾಂತ್ರಿಕ ಕೈಗಾರಿಕೆಗಳ ವೃತ್ತಿಪರರಿಂದ ಪ್ರಚಾರ ಮಾಡಲ್ಪಟ್ಟ ಚಾನೆಲ್ ಆಗಿದೆ. ಸುದ್ದಿ ಕಿರಣ ಟಿವಿ ಇತ್ತೀಚಿನ ತಂತ್ರಜ್ಞಾನಗಳೊಂದಿಗೆ ಗುಣಮಟ್ಟದ ಸಂಪನ್ಮೂಲಗಳನ್ನು ಸಂಯೋಜಿಸಲು ಪ್ರಯತ್ನಿಸುತ್ತದೆ. Chief Editor B.S.Mallikarjuna Reddy # 560, 3ನೇ ಮಹಡಿ, 1ನೇ ಮುಖ್ಯ ರಸ್ತೆ, ಯಶವಂತಪುರ ಬೆಂಗಳೂರು-560022., Email: suddikiranatv@gmail.com Email:suddikiranaa@gmail.com www.suddikirana.com ಸುದ್ದಿ ಮತ್ತು ಜಾಹೀರಾತಿಗಳಿಗಾಗಿ ಸಂಪರ್ಕಿಸಿ ಕಛೇರಿ 08041505268 ಸಂಚಾರಿ ವಾಣಿ 9686665456