ಮಹನೀಯರ ತತ್ವಗಳು ಬದುಕಿಗೆ ದಾರಿದೀಪವಾಗಲಿ: ಮಾಜಿ ಸಂಸತ್ ಸದಸ್ಯ ಡಾ ಎಲ್ ಹನುಮಂತಯ್ಯ
ಕೆಜಿಎಫ್: ಮಹಾನ್ ಪುರುಷರ ಜಯಂತಿಗಳು ಕೇವಲ ಆಚರಣೆಗೆ ಸೀಮಿತವಾಗಬಾರದು. ಡಾ. ಬಿ.ಆರ್. ಅಂಬೇಡ್ಕರ್, ಡಾ. ಬಾಬು ಜಗಜೀವನ್ ರಾಮ್ ಹಾಗೂ ಜಗಜ್ಯೋತಿ ಬಸವೇಶ್ವರ ಅವರ ತತ್ವಗಳನ್ನು ವಿದ್ಯಾರ್ಥಿಗಳು ಜೀವನದಲ್ಲಿ ಅಳವಡಿಸಿಕೊಂಡಾಗ ಮಾತ್ರ ಸಮಾಜದಲ್ಲಿ ಸಕಾರಾತ್ಮಕ ಬದಲಾವಣೆ ಸಾಧ್ಯ ಎಂದು ರಾಜ್ಯ ಸಭೆಯ ಮಾಜಿ ಸಂಸತ್ ಸದಸ್ಯ ಡಾ ಎಲ್ ಹನುಮಂತಯ್ಯ ಅಭಿಪ್ರಾಯಪಟ್ಟರು.
ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅಂಬೇಡ್ಕರ್ ಜಗಜೀವನ್ ರಾಮ್ ಹಾಗೂ ಬಸವೇಶ್ವರ ರವರ ಜಯಂತಿ ಅಂಗವಾಗಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಮೇಲಿನ ಮಹನೀಯರ ಭಾವಚಿತ್ರಗಳಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಗೌರವ ಸಲ್ಲಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ವೇಳೆ ಮಾಜಿ ಸಂಸತ್ ಸದಸ್ಯ ಡಾ ಎಲ್ ಹನುಮಂತಯ್ಯ ಮಾತನಾಡಿ, ಅಂಬೇಡ್ಕರ್ ಜಗಜೀವನ್ ರಾಮ್ ಮತ್ತು ಬಸವೇಶ್ವರರು ಈ ಮೂವರು ಮಹನೀಯರ ಜಯಂತಿಗಳನ್ನು ಕೇವಲ ಆಚರಣೆಗೆ ಸೀಮಿತಗೊಳಿಸದೆ, ಅವರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವುದೇ ಅವರಿಗೆ ಸಲ್ಲಿಸುವ ನಿಜವಾದ ಗೌರವ ಎಂದು ತಿಳಿಸಿದರು.
ಮಹನೀಯರು ಒಂದಾನೊಂದು ಕಾಲದಲ್ಲಿ ದೇಶದಲ್ಲಿನ ಅಸ್ಪೃಶ್ಯತೆಯನ್ನು ಹೋಗಲಾಡಿಸಲು ತಮ್ಮ ಜೀವನವನ್ನೇ ದೇಶದ ಜನರ ಹಿತಕ್ಕಾಗಿ ಮುಡುಪಾಗಿಟ್ಟರು. ಜಾತಿ ರಹಿತ ಭಾರತವನ್ನು ಕಾಣುವ ನಿಟ್ಟಿನಲ್ಲಿ ಅಂಬೇಡ್ಕರ್ ರವರು ಸಂವಿಧಾನವನ್ನು ಬರೆದರು ಎಂದರು.
ಈ ವೇಳೆ ಕಾಲೇಜಿನ ಪ್ರಾಂಶುಪಾಲ ಕೆ. ನಾರಾಯಣ್ ಮಾತನಾಡಿ ಡಾ ಬಿ ಆರ್ ಅಂಬೇಡ್ಕರ್ ರವರ ತತ್ವಗಳಾದ ಶಿಕ್ಷಣ ಸಂಘಟನೆ ಮತ್ತು ಹೋರಾಟ ಎಂಬ ಅಂಬೇಡ್ಕರ್ ರ ಮಂತ್ರವನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಹಾಗೆಯೇ ಹಸಿರು ಕ್ರಾಂತಿಯ ಹರಿಕಾರ ಡಾ ಬಾಬು ಜಗ ಜೀವನ್ ರಾಮ್ ಕೃಷಿ ಮತ್ತು ರಕ್ಷಣಾ ಕ್ಷೇತ್ರದಲ್ಲಿ ಅವರು ನೀಡಿದ ಅಪ್ರತಿಮ ಕೊಡುಗೆಯನ್ನು ಸ್ಮರಿಸಬೇಕು ಆಹಾರ ಮತ್ತು ಭದ್ರತೆಗಾಗಿ ಮಾಡಿದ ಕ್ರಾಂತಿಕರಿಗಳ ಬಗ್ಗೆ ಅರಿಯಬೇಕೆಂದರು.
ದಲಿತರು ಮತ್ತು ಶೋಷಿತ ವರ್ಗದವರ ಏಳಿಗೆಗಾಗಿ ಬಾಬು ಜಗ ಜೀವನ್ ರಾಮ್ ನಡೆಸಿದ ಹೊರಟಾಗಳನ್ನು ಇಂದಿನ ಪೀಳಿಗೆಗೆ ಮಾದರಯಾಗಬೇಕೆಂದರು.
ಬಸವಣ್ಣ ನವರು ಜಾತಿ ರಹಿತ ಸಮಾಜದ ನಿರ್ಮಾಣಕ್ಕಾಗಿ ಅನುಭವ ಮಂಟಪವನ್ನು ನಿರ್ಮಿಸಿದರು. ಬಸವಣ್ಣನವರು ಕೇವಲ ಒಂದು ಸಮುದಾಯಕ್ಕೆ ಸೀಮಿತವಾದವರಲ್ಲ ಅವರು ವಿಶ್ವಮಾನವ ಕಾಯಕವೇ ಕೈಲಾಸ ಮತ್ತು ದಾಸೋಹ ತತ್ವಗಳು ಇಂದಿನ ಯುವ ಪೀಳಿಗೆಗೆ ದಾರಿದೀಪವಾಗಬೇಕು ಎಂದರು.
ಪಿಎಸೈ ಮಂಜುನಾಥ್ ರವರಿಗೆ ಸನ್ಮಾನ: ಇತ್ತೀಚಿಗೆ ಕರ್ನಾಟಕ ರಾಜ್ಯ ಮುಖ್ಯ ಮಂತ್ರಿ ಪದಕ ಪಡೆದ ಕೆಜಿಎಫ್ ಜಿಲ್ಲಾ ಪೊಲೀಸ್ ವ್ಯಾಪ್ತಿಯ ನಗರದ ಅಂಡರ್ಸನ್ ಪೇಟೆ ಪೊಲೀಸ್ ಠಾಣೆಯ ಉಪನಿರೀಕ್ಷಕ ಮಂಜುನಾಥ್ ರವರಿಗೆ ಮುಖ್ಯ ಮಂತ್ರಿ ಪದಕ ಪಡೆದ ಹಿನ್ನೆಲೆ ಗಣ್ಯರು ಸನ್ಮಾನಿಸಿದರು.
ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ: ಮೊನ್ನೆ ಕಾಲೇಜಿನಲ್ಲಿ ವಿಜ್ಞಾನ ದಿನದಂದು ನಡೆದ ವಸ್ತು ಪ್ರದರ್ಶನ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಗಣ್ಯರು ಬಹುಮಾನ ವಿತರಿಸಿದರು.
ಈ ಸಂದರ್ಭದಲ್ಲಿ ಮಾಜಿ ಸಂಸತ್ತಿನ ಸದಸ್ಯ ಎಲ್ ಹನುಮಂತಯ್ಯ, ಚಿಂತಕ ಕ್ಯಾಸಂಬಳ್ಳಿ ನಾರಾಯಣ್, ಪ್ರಾಂಶುಪಾಲ ಡಾ ಕೆ ನಾರಾಯಣ್, ಅಂಡರ್ಸನ್ ಪೇಟೆ ಪಿಎಸೈ ಮಂಜುನಾಥ್, ಕಾಲೇಜಿನ ಅದಿಕ್ಷಕ ಶೇಷದ್ರಿ, ಮತ್ತು ವಿವಿಧ ವಿಭಾಗಗಳ ಮುಖ್ಯಸ್ಥರು ಹಾಗೂ ಉಪನ್ಯಾಸಕರು ಉಪಸ್ಥಿತರಿದ್ದರು.
What's Your Reaction?
Like
0
Dislike
0
Love
0
Funny
0
Angry
0
Sad
0
Wow
0
