ಮಹಾನ್ ಆಧ್ಯಾತ್ಮಿಕ ನಾಯಕ ಸ್ವಾಮಿ ವಿವೇಕಾನಂದರ ಜನ್ಮದಿನವನ್ನು ರಾಷ್ಟ್ರೀಯ ಯುವ ದಿನವನ್ನಾಗಿ ಆಚರಿಸಲಾಯಿತು
ಕಂಪ್ಲಿ ತಾಲೂಕು ಎಮ್ಮಿಗನೂರು ಗ್ರಾಮದ ಎಸ್ ಡಬ್ಲ್ಯೂ ಎಸ್ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಭಾರತ ಕಂಡ ಮಹಾನ್ ಆಧ್ಯಾತ್ಮಿಕ ನಾಯಕ ಸ್ವಾಮಿ ವಿವೇಕಾನಂದರ ಜನ್ಮದಿನವನ್ನು ರಾಷ್ಟ್ರೀಯ ಯುವ ದಿನವನ್ನಾಗಿ ಆಚರಿಸಲಾಯಿತು. ಈ ವೇಳೆ ಮುಖ್ಯ ಶಿಕ್ಷಕ ಮಂಜಪ್ಪ ಹೂಗಾರ ಮಾತನಾಡಿ ವಿದ್ಯಾರ್ಥಿಗಳು, ಯುವಕರು ಸಾಮಾಜಿಕ ಜಾಲತಾಣಗಳ ಗೀಳಿನಿಂದ ಹೊರಬಂದು ದೇಶದ ಅಭಿವೃದ್ಧಿಗೆ ಕೊಡುಗೆ ನೀಡಬೇಕು. ದುಡ್ಡಿಲ್ಲದವ ಬಡವನಲ್ಲ, ಗುರಿ ಮತ್ತು ಕನಸಿಲ್ಲದವ ನಿಜವಾದ ಬಡವ. ಇಂದಿನ ಆಧುನಿಕ ಕಾಲದಲ್ಲಿಯೂ ವಿವೇಕಾನಂದರ ಮೌಲ್ಯ ಆದರ್ಶಗಳು ಇಂದಿಗೂ ಜೀವಂತವಾಗಿದ್ದು ಸರ್ವರಿಗೂ ಸ್ಪೂರ್ತಿದಾಯಕವಾಗಿವೆ. ಈ ಸಂದರ್ಭದಲ್ಲಿ ಸಹ ಶಿಕ್ಷಕರಾದ ಸಂಗಮ್ಮ,ಲಕ್ಷ್ಮಿ, ಶಂಕ್ರಮ್ಮ, ವೀರೇಶ, ಮಲ್ಲೇಶ ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.
What's Your Reaction?
Like
1
Dislike
0
Love
0
Funny
0
Angry
0
Sad
0
Wow
0
