ಮಹಿಳಾ ಸಬಲೀಕರಣವಾಗಲಿ: ಡಾ: ತುಕಾರಾಂ

Jan 10, 2026 - 18:36
 0  16
ಮಹಿಳಾ ಸಬಲೀಕರಣವಾಗಲಿ: ಡಾ: ತುಕಾರಾಂ

ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರದ ಮಲ್ಲತಹಳ್ಳಿಯ ಗಾನಪಲ್ಲವಿ ಆಡಿಟೋರಿಯಂ ನಲ್ಲಿ ಅಕ್ಸೆಂಚರ್ ಭಾರತೀಯ ಉದ್ಯಮಶೀಲತೆ ಅಭಿವೃದ್ಧಿ ಸಂಸ್ಥೆ (EDII) ಇವರ *ಸ್ಕಿಲ್ ಟು ಸಕ್ಸೀಡ್* ಯೋಜನೆಯಡಿ 55 ಮಹಿಳೆಯರ ಕೈಕಸೂತಿ ತರಬೇತಿ ಪಡೆದವರಿಗೆ ಸಮಾರೋಪ ಸಮಾರಂಭ ಮತ್ತು ಪ್ರಮಾಣ ಪತ್ರ ವಿತರಿಸುವ ಕಾರ್ಯಕ್ರಮ ಏರ್ಪಡಿಸಲಾಗಿತ್ತು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಕನ್ಯಾಕುಮಾರಿ ವಿದ್ಯಾಸಂಸ್ಥೆಯ ಕಾರ್ಯದರ್ಶಿ ಡಾ. ಎಚ್.ತುಕಾಕಾರಾಂ ಮಾತನಾಡಿ, ಕುಟುಂಬ ಮತ್ತು ಸಮಾಜದಲ್ಲಿ ಹೆಣ್ಣಿನ ಸ್ಥಾನ ಮಹತ್ವವಾದುದು. ಇಂದು ಎಲ್ಲಾ ಕ್ಷೇತ್ರಗಳಲ್ಲಿಯೂ ಗಂಡಿನಂತೆ ಸಮಾನವಾಗಿ ಮಹಿಳೆ ದುಡಿಯುತ್ತಿದ್ದಾರೆ. ಒಂದು ಮಹಿಳೆ ಕಲಿತರೆ ಇಡೀ ಕುಟುಂಬ ಚೆನ್ನಾಗಿರುತ್ತದೆ. ಮಹಿಳೆ ಆರ್ಥಿಕವಾಗಿ ಸಬಲರಾಗಬೇಕು. ಈ ರೀತಿಯ ತರಬೇತಿಗಳು ಹೆಣ್ಣುಮಕ್ಕಳಿಗೆ ಆರ್ಥಿಕ ಸ್ವಾತಂತ್ರ್ಯ ಮತ್ತು ಭದ್ರತೆಯನ್ನು ಒದಗಿಸುತ್ತದೆ. ತರಬೇತಿಯಲ್ಲಿ ಕಲಿತ ವಿದ್ಯೆಯನ್ನು ಮುಂದುವರಿಸಿ ಆದಾಯದ ಮೂಲವನ್ನಾಗಿ ಮಾಡಿಕೊಳ್ಳಿ ಎಂದು ಸಲಹೆ ನೀಡಿದರು.

ಪ್ರಮಾಣ ಪತ್ರ ವಿತರಿಸಿ ಮಾತನಾಡಿದ ಯೋಜನಾಧಿಕಾರಿ ಎಡ್ಮಂಡ್ ಭೂಪತಿಯವರು ಮಹಿಳೆಯ ಆರ್ಥಿಕ ಶಕ್ತಿಕರಣವು ಕುಟುಂಬ ಮತ್ತು ಸಮುದಾಯದ ದೀರ್ಘಕಾಲಿನ ಅಭಿವೃದ್ಧಿಗೆ ಅಗತ್ಯವೆಂದು ತಿಳಿಸಿದರು.

ಎಂ. ಗಿರಿಯಪ್ಪ, ವ್ಯವಸ್ಥಾಪಕರು ಕೆನರಾ ಬ್ಯಾಂಕ್ ಇವರು ಬ್ಯಾಂಕಿನಲ್ಲಿ ಸಿಗುವ ಸೌಲಭ್ಯಗಳ ಬಗ್ಗೆ ವಿವರಿಸಿದರು.

ಕಾರ್ಯಕ್ರಮದಲ್ಲಿ ಶ್ರೀ ಕೃಷ್ಣಪ್ಪ ಸಮುದಾಯ ವ್ಯವಹಾರಗಳ ಅಧಿಕಾರಿ, ಬೆಂಗಳೂರು ಪಶ್ಚಿಮ ಮತ್ತು ಶ್ರೀ ವೆಂಕಟೇಶಮೂರ್ತಿ ಸಮುದಾಯ ಸಂಘಟಕರು ಮತ್ತು ಶ್ರೀಮತಿ ಲಲಿತ,ರಮ್ಯ,ಬಸ್ತ್ಯಾಂವ್ ಸೋಜ ಉಪಸ್ಥಿತರಿದ್ದರು.

What's Your Reaction?

Like Like 2
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0
suddikirana ಸುದ್ದಿ ಕಿರಣ ಟಿವಿ ಬಾಳಿನ ಬೆಳಕು ಕರ್ನಾಟಕದ ಮಾಹಿತಿ ಮನರಂಜನಾ ಚಾನೆಲ್ ಆಗಿದೆ. ಇದು ಮನರಂಜನೆಯ ಜೊತೆಗೆ ಇತ್ತೀಚಿನ ಸುದ್ದಿ ಮತ್ತು ಮಾಹಿತಿಯನ್ನು ವೀಕ್ಷಕರಿಗೆ ತೋರುತ್ತಿದೆ. ಮತ್ತು ಸಮಾಜವು ತೆಗೆದುಕೊಳ್ಳುವ ದಿಕ್ಕು ಮಾಹಿತಿಯಿಂದ ಪ್ರಭಾವಿತವಾಗಿರುತ್ತದೆ ಎಂದು ನಾವು ಅರ್ಥಮಾಡಿಕೊಂಡಿದ್ದೇವೆ. ಸುದ್ದಿ ಕಿರಣ ಟಿವಿ ಹಲವು ವಿಷಯಗಳಲ್ಲಿ ಪ್ರವರ್ತಕವಾಗಿದೆ. ಇದು ತನಿಖಾ ಪತ್ರಿಕೋದ್ಯಮ. ಮತ್ತು ತಾಂತ್ರಿಕ ಕೈಗಾರಿಕೆಗಳ ವೃತ್ತಿಪರರಿಂದ ಪ್ರಚಾರ ಮಾಡಲ್ಪಟ್ಟ ಚಾನೆಲ್ ಆಗಿದೆ. ಸುದ್ದಿ ಕಿರಣ ಟಿವಿ ಇತ್ತೀಚಿನ ತಂತ್ರಜ್ಞಾನಗಳೊಂದಿಗೆ ಗುಣಮಟ್ಟದ ಸಂಪನ್ಮೂಲಗಳನ್ನು ಸಂಯೋಜಿಸಲು ಪ್ರಯತ್ನಿಸುತ್ತದೆ. Chief Editor B.S.Mallikarjuna Reddy # 560, 3ನೇ ಮಹಡಿ, 1ನೇ ಮುಖ್ಯ ರಸ್ತೆ, ಯಶವಂತಪುರ ಬೆಂಗಳೂರು-560022., Email: suddikiranatv@gmail.com Email:suddikiranaa@gmail.com www.suddikirana.com ಸುದ್ದಿ ಮತ್ತು ಜಾಹೀರಾತಿಗಳಿಗಾಗಿ ಸಂಪರ್ಕಿಸಿ ಕಛೇರಿ 08041505268 ಸಂಚಾರಿ ವಾಣಿ 9686665456