ಮಹಿಳೆಯರ ಗೌರವ ನಮ್ಮೆಲ್ಲರ ಆದ್ಯ ಕರ್ತವ್ಯ | ಜಿ.ಆರ್.ಪ್ರದೀಪ ಅಭಿಮತ
ಬೆಂಗಳೂರು :ಮಹಿಳೆಯರ ಗೌರವ ನಮ್ಮೆಲ್ಲರ ಆದ್ಯ ಕರ್ತವ್ಯ
| ಜಿ.ಆರ್.ಪ್ರದೀಪ ಅಭಿಮತ
| ಅ.ಭಾ.ಬ್ರಾ.ಮ.ಸಂ. ಮಹಿಳಾ ದಿನಾಚರಣೆ
ಮಹಿಳೆಯರನ್ನು ಗೌರವಿಸುವ ಕಾರ್ಯ ನಿರಂತರವಾಗಿರಬೇಕು. ಎಂದು ಅಖಿಲ ಭಾರತೀಯ ಬ್ರಾಹ್ಮಣ ಮಹಾಸಂಘದ ರಾಜ್ಯಾಧ್ಯಕ್ಷ ಜಿ
ಆರ್.ಪ್ರದೀಪ್ ಹೇಳಿದ್ದಾರೆ.
ಬೆಂಗಳೂರು ದಕ್ಷಿಣ ಮಹಿಳಾ ಘಟಕದಿಂದ ಆಯೋಜಿಸಿದ್ದ
ಮಹಿಳಾ ದಿನಾಚರಣೆಯಲ್ಲಿ ಮಾತನಾಡಿದ ಅವರು,
ಮಹಿಳೆಯರನ್ನು ಪೂಜನೀಯ ಸ್ಥಾನದಲ್ಲಿ ಕಾಣಬೇಕಿದೆ. ಮಹಿಳಾ ಶಕ್ತಿಯನ್ನು ಗೌರವಿಸುವ
ಕಾರ್ಯ ನಮ್ಮೆಲ್ಲರ ಆದ್ಯ ಕರ್ತವ್ಯ ಎಂದರು.
ಸಂಘನೆಯನ್ನು ಮತ್ತಷ್ಡು ಬಲ ಪಡಿಸಿವ ಕಾರ್ಯ ಆಗಬೇಕಿದೆ. ಎಲ್ಲ ವಲಯಗಳಲ್ಲೂ ಪದಾಧಿಕಾರಿಗಳ ಸಂಖ್ಯೆ ಹೆಚ್ಚಾಗಿ ನೋಂದಣಿಯಾಗಬೇಕಿದೆ. ಸದಸ್ಯರ ನೋಂದಣಿ ಅಭಿಯಾನಕ್ಕೆ ಶೀಘ್ರ ಚಾಲನೆ ದೊರೆಯಬೇಕಿದೆ ಎಮದು ಅಖಿಲ ಭಾರತೀಯ ಬ್ರಾಹ್ಮಣ ಮಹಾಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ವಿಶ್ವನಾಥ ಜೋಶಿ ತಿಳಿಸಿದರು.
ಇದೇ ಸಂದರ್ಭದಲ್ಲಿ ಸಾಮೂಹಿಕ ಮಹಾಲಕ್ಷ್ಮಿ ಪೂಜೆ, ಕುಂಕುಮಾರ್ಚನೆ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಮಹಿಳೆಯರಿಗೆ ಸನ್ಮಾನ ಸಮಾರಂಭ ನೆರವೇರಿಸಲಾಯಿತು.
ಕಾರ್ಯಕ್ರಮದಲ್ಲಿ ಅಖಿಲ ಭಾರತೀಯ ಬ್ರಾಹ್ಮಣ ಮಹಾಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ವಿಶ್ವನಾಥ ಜೋಶಿ , ಬೆಂಗಳೂರು ದಕ್ಚಿಣ ಘಟಕ ಅಧ್ಯಕ್ಷೆ ಪೂರ್ಣಿಮಾ , ರಾಜ್ಯ ಯುವ ಘಟಕದ ಅಧ್ಯಕ್ಚ ಕಾರ್ತಿಕ್ ಸೋಮಯಾಜಿ , ರಾಜ್ಯ ಉದ್ಯಮ ವಿಭಾಗದ ಅಧ್ಯಕ್ಷ ಶ್ರೀಧರ , ಬೆಂಗಳೂರು ದಕ್ಷಿಣ ಮಹಿಳಾ ಘಟಕ ಅಧ್ಯಕ್ಷೆ ಜಯಶ್ರೀ ಸೂರ್ಯನಾರಾಯಣ ಮತ್ತಿತರರು ಉಪಸ್ಥಿತರಿದ್ದರು .
What's Your Reaction?
Like
2
Dislike
0
Love
0
Funny
0
Angry
0
Sad
0
Wow
0
