ಮಾನವ ಹಕ್ಕುಗಳ ರಕ್ಷಣೆ ಹಾಗೂ ಕಾನೂನು ಅರಿವಿಗೆ ನಿರಂತರ ಸೇವೆ

ಮಾನವ ಹಕ್ಕುಗಳ ರಕ್ಷಣೆ ಹಾಗೂ ಕಾನೂನು ಅರಿವಿಗೆ ನಿರಂತರ ಸೇವೆ
ಸುದ್ದಿ ಕಿರಣ ನ್ಯೂಸ್ ಡಿಸ್ಕ್

ಕೆಜಿಎಫ್: ಕಳೆದ ಎರಡು ದಶಕಗಳಿಂದ ಹಿಂದುಳಿದ ಹಾಗೂ ಶೋಷಿತ ಸಮುದಾಯಗಳ ರಕ್ಷಣೆ, ಕಾನೂನು ಅರಿವು ಮತ್ತು ಸಾಮಾಜಿಕ ಸೇವೆಯಲ್ಲಿ ನಿರಂತರವಾಗಿ ತೊಡಗಿಸಿಕೊಂಡಿರುವ ಸ್ಟಾರ್ ಎಂಪವರ್ ಫೌಂಡೇಶನ್ (ದಕ್ಷಿಣ ಏಷ್ಯಾ ಮಾನವ ಹಕ್ಕುಗಳ ಒಕ್ಕೂಟ), ವಿವಿಧ ಜನಪರ ಕಾರ್ಯಕ್ರಮಗಳ ಮೂಲಕ ಸೇವೆ ಸಲ್ಲಿಸುತ್ತಿದೆ ಎಂದು ಸಂಸ್ಥೆಯ ಅಧ್ಯಕ್ಷ ಹಾಗೂ ರಾಜ್ಯ ಸಾಮಾಜಿಕ ಸೇವಾ ವಿಭಾಗದ ಮುಖ್ಯಸ್ಥ ಡಾ. ಎಲ್. ಬಾಬು ತಿಳಿಸಿದರು.

2001ರಲ್ಲಿ ಸ್ಥಾಪನೆಯಾದ ಸಂಸ್ಥೆಯು ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಕಾನೂನು ಅರಿವು ಕಾರ್ಯಕ್ರಮಗಳು, ಜನಜಾಗೃತಿ ಅಭಿಯಾನಗಳು ಹಾಗೂ ಸಾಮಾಜಿಕ ಸೇವಾ ಕಾರ್ಯಗಳನ್ನು ನಡೆಸಿಕೊಂಡು ಬರುತ್ತಿದೆ. ವಿಶೇಷವಾಗಿ ಮಹಿಳೆಯರು, ಮಕ್ಕಳು ಹಾಗೂ ಹಿಂದುಳಿದ ವರ್ಗಗಳ ಹಕ್ಕುಗಳ ರಕ್ಷಣೆ ಮತ್ತು ಅವರಲ್ಲಿ ಕಾನೂನು ಅರಿವು ಮೂಡಿಸುವ ನಿಟ್ಟಿನಲ್ಲಿ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಅವರು ಹೇಳಿದರು.

ಪರಿಸರ ಸಂರಕ್ಷಣೆ, ಸಾಮಾಜಿಕ ನ್ಯಾಯ, ಶಿಕ್ಷಣ, ಆರೋಗ್ಯ, ಉದ್ಯೋಗ ಹಾಗೂ ಮಾನವ ಹಕ್ಕುಗಳ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ಕೂ ಸಂಸ್ಥೆ ಆದ್ಯತೆ ನೀಡಿದೆ. ಸಾರ್ವಜನಿಕ ಹಿತಾಸಕ್ತಿಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಜನರಿಗೆ ಅಗತ್ಯ ಮಾಹಿತಿ ಮತ್ತು ಕಾನೂನು ಅರಿವು ಒದಗಿಸುವ ಮೂಲಕ ಸಮಾಜದಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ ಎಂದು ಡಾ. ಎಲ್. ಬಾಬು ತಿಳಿಸಿದರು.

ಇದರ ಜೊತೆಗೆ ಇಂಡಿಯನ್ ಹ್ಯೂಮನ್ ರೈಟ್ಸ್ ವೆಲ್ಫೇರ್ ಆರ್ಗನೈಸೇಶನ್, ಹ್ಯೂಮನ್ ರೈಟ್ಸ್ ವೆಲ್ಫೇರ್ ಆರ್ಗನೈಸೇಶನ್ ಹಾಗೂ ಡಿಜಿಟಲ್ ನ್ಯೂಸ್ ಚಾನೆಲ್‌ಗಳ ಮೂಲಕವೂ ಸಂಸ್ಥೆಯ ಜನಸೇವಾ ಕಾರ್ಯಗಳನ್ನು ಮತ್ತಷ್ಟು ವಿಸ್ತರಿಸಲಾಗಿದೆ ಎಂದು ಅವರು ತಿಳಿಸಿದರು.

ಮಾನವ ಹಕ್ಕುಗಳ ರಕ್ಷಣೆ, ಸಾಮಾಜಿಕ ನ್ಯಾಯ ಹಾಗೂ ದುರ್ಬಲ ವರ್ಗಗಳ ಸಬಲೀಕರಣಕ್ಕಾಗಿ ಮುಂದಿನ ದಿನಗಳಲ್ಲಿಯೂ ವಿವಿಧ ಜನಪರ ಕಾರ್ಯಕ್ರಮಗಳನ್ನು ಮುಂದುವರಿಸುವುದಾಗಿ ಅವರು ಹೇಳಿದರು.