ಮುಖ್ಯಮಂತ್ರಿ ಪದಕ ಪಡೆದ ಪೋಲಿಸರಿಗೆ ತೇಜಸ್ವಿ ಅಭಿನಂದನೆ

Apr 1, 2026 - 16:05
 0  1
ಮುಖ್ಯಮಂತ್ರಿ ಪದಕ ಪಡೆದ ಪೋಲಿಸರಿಗೆ ತೇಜಸ್ವಿ ಅಭಿನಂದನೆ

     ಬೆಂಗಳೂರು: 2025ನೇ ಸಾಲಿನ ಮುಖ್ಯಮಂತ್ರಿ ಪದಕ ಪಡೆದ ಎಸ್ ಶಿವಕುಮಾರ್ ಅವರಿಗೆ ಕನ್ನಡ ಕ್ರಾಂತಿದಳ ರಾಜ್ಯಾಧ್ಯಕ್ಷ ತೇಜಸ್ವಿ ನಾಗಲಿಂಗ ಸ್ವಾಮಿ ಅಭಿನಂದನೆ ಸಲ್ಲಿಸಿದ್ದಾರೆ.

ಮೈಸೂರು ಜಿಲ್ಲೆಯ ನಾಲ್ವರು ಪೊಲೀಸ್ ಸಿಬ್ಬಂದಿಗೂ ಈ ಪ್ರತಿಷ್ಠಿತ ಗೌರವ ಲಭಿಸಿರುವುದು ಹೆಮ್ಮೆಯ ವಿಷಯ ಎಂದು ತೇಜಸ್ವಿ ನಾಗಲಿಂಗಸ್ವಾಮಿ ಸಂತಸ ವ್ಯಕ್ತಪಡಿಸಿದ್ದಾರೆ.


ಸುರೇಶ್ ಕುಮಾರ್- ಇನ್ಸ್‌ಪೆಕ್ಟರ್, ವಿಜಯನಗರ ಪೊಲೀಸ್ ಠಾಣೆ,
ಕೆ. ಶಣ್ಮುಗ ವರ್ಮ- ಇನ್ಸ್‌ಪೆಕ್ಟರ್, ಪೊಲೀಸ್ ತರಬೇತಿ ಶಾಲೆ,
ಜಯಕುಮಾರ್- ಹೆಡ್ ಕಾನ್ಸ್‌ಟೇಬಲ್, ಸಿಎಆರ್,
ಎಸ್. ಶಿವಕುಮಾರ್- ಎಎಸ್ಐ, ಅಶೋಕಪುರಂ ಪೊಲೀಸ್ ಠಾಣೆ (ನಗರ ವಿಶೇಷ ವಿಭಾಗ ಇವರುಗಳು ಪ್ರತಿಷ್ಠಿತ ಗೌರವಕ್ಕೆ ಪಾತ್ರರಾಗಿದ್ದಾರೆ‌.

ಸಾಮಾಜಿಕ ಭದ್ರತೆ, ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಹಾಗೂ ಕರ್ತವ್ಯನಿಷ್ಠ ಸೇವೆ ಸಲ್ಲಿಸಿರುವ ಪೊಲೀಸ್ ಸಿಬ್ಬಂದಿಗೆ ಈ ಪದಕ ಪ್ರದಾನ ಮಾಡಲಾಗಿದ್ದು,
ಈ ಉನ್ನತ ಗೌರವದಿಂದ ಪೋಲಿಸ್ ಇಲಾಖೆ ಸಿಬ್ಬಂದಿಗೆ ಉತ್ತೇಜನ,ಪ್ರೋತ್ಸಾಹ ಸಿಗಲಿದೆ ಎಂದು ತೇಜಸ್ವಿ ನಾಗಲಿಂಗಸ್ವಾಮಿ ಹೇಳಿದ್ದಾರೆ .

ಮುಂದಿನ ದಿನಗಳಲ್ಲಿ ಮುಖ್ಯಮಂತ್ರಿ ಪದಕ ಪಡೆದ ನಾಲ್ವರು ಪೋಲಿಸರಿಗೂ ಕನ್ನಡ ಕ್ರಾಂತಿದಳ ವತಿಯಿಂದ ಗೌರವಿಸಿ ಸನ್ಮಾನಿಸುವುದಾಗಿ ತೇಜಸ್ವಿ ನಾಗಲಿಂಗ ಸ್ವಾಮಿ ತಿಳಿಸಿದ್ದಾರೆ.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0
suddikirana ಸುದ್ದಿ ಕಿರಣ ಟಿವಿ ಬಾಳಿನ ಬೆಳಕು ಕರ್ನಾಟಕದ ಮಾಹಿತಿ ಮನರಂಜನಾ ಚಾನೆಲ್ ಆಗಿದೆ. ಇದು ಮನರಂಜನೆಯ ಜೊತೆಗೆ ಇತ್ತೀಚಿನ ಸುದ್ದಿ ಮತ್ತು ಮಾಹಿತಿಯನ್ನು ವೀಕ್ಷಕರಿಗೆ ತೋರುತ್ತಿದೆ. ಮತ್ತು ಸಮಾಜವು ತೆಗೆದುಕೊಳ್ಳುವ ದಿಕ್ಕು ಮಾಹಿತಿಯಿಂದ ಪ್ರಭಾವಿತವಾಗಿರುತ್ತದೆ ಎಂದು ನಾವು ಅರ್ಥಮಾಡಿಕೊಂಡಿದ್ದೇವೆ. ಸುದ್ದಿ ಕಿರಣ ಟಿವಿ ಹಲವು ವಿಷಯಗಳಲ್ಲಿ ಪ್ರವರ್ತಕವಾಗಿದೆ. ಇದು ತನಿಖಾ ಪತ್ರಿಕೋದ್ಯಮ. ಮತ್ತು ತಾಂತ್ರಿಕ ಕೈಗಾರಿಕೆಗಳ ವೃತ್ತಿಪರರಿಂದ ಪ್ರಚಾರ ಮಾಡಲ್ಪಟ್ಟ ಚಾನೆಲ್ ಆಗಿದೆ. ಸುದ್ದಿ ಕಿರಣ ಟಿವಿ ಇತ್ತೀಚಿನ ತಂತ್ರಜ್ಞಾನಗಳೊಂದಿಗೆ ಗುಣಮಟ್ಟದ ಸಂಪನ್ಮೂಲಗಳನ್ನು ಸಂಯೋಜಿಸಲು ಪ್ರಯತ್ನಿಸುತ್ತದೆ. Chief Editor B.S.Mallikarjuna Reddy # 560, 3ನೇ ಮಹಡಿ, 1ನೇ ಮುಖ್ಯ ರಸ್ತೆ, ಯಶವಂತಪುರ ಬೆಂಗಳೂರು-560022., Email: suddikiranatv@gmail.com Email:suddikiranaa@gmail.com www.suddikirana.com ಸುದ್ದಿ ಮತ್ತು ಜಾಹೀರಾತಿಗಳಿಗಾಗಿ ಸಂಪರ್ಕಿಸಿ ಕಛೇರಿ 08041505268 ಸಂಚಾರಿ ವಾಣಿ 9686665456