ಮೇ 10ಕ್ಕೆ ಹೆಮರೆಡ್ಡಿ ಮಲ್ಲಮ್ಮ ಜಯಂತಿ

Apr 28, 2026 - 14:57
 0  1
ಮೇ 10ಕ್ಕೆ ಹೆಮರೆಡ್ಡಿ ಮಲ್ಲಮ್ಮ ಜಯಂತಿ

     ಕೆ.ಜಿ.ಎಫ್: ನಗರದ ರೆಡ್ಡಿ ಕಲ್ಯಾಣ ಮಂಟಪದಲ್ಲಿ ಪೂರ್ವಭಾವಿ ಸಭೆ
ಕೆ.ಜಿ.ಎಫ್: ಮೇ 10ರಂದು ಆಯೋಜಿಸಲಿರುವ ಹೆಮರೆಡ್ಡಿ ಮಲ್ಲಮ್ಮ ಜಯಂತಿಯನ್ನು ಅದ್ದೂರಿಯಾಗಿ ಆಚರಿಸುವ ಕುರಿತು ರೆಡ್ಡಿ ಸಮುದಾಯದ ಮುಖಂಡರು ಕೆ.ಜಿ.ಎಫ್ ನಗರದ ರೆಡ್ಡಿ ಕಲ್ಯಾಣ ಮಂಟಪದಲ್ಲಿ ಪೂರ್ವಭಾವಿ ಸಭೆ ನಡೆಸಿದರು.


ಈ ಸಭೆಯಲ್ಲಿ ತಾಲೂಕು ರೆಡ್ಡಿ ಸಂಘದ ಅಧ್ಯಕ್ಷರಾದ ಪ್ರಸನ್ನ ರೆಡ್ಡಿ ಅವರು ಮಾತನಾಡಿ, ಈ ಜಯಂತಿಯನ್ನು ಯಶಸ್ವಿಗೊಳಿಸಲು ಎಲ್ಲರೂ ಒಗ್ಗೂಡಿ ಶ್ರಮಿಸಬೇಕು ಎಂದು ಮನವಿ ಮಾಡಿದರು.
ಎಸ್.ಎಸ್.ಎಲ್.ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ.90ಕ್ಕೂ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲು ಸಭೆಯಲ್ಲಿ ನಿರ್ಧರಿಸಲಾಯಿತು. ಪೋಷಕರು ಮೇ 5ರೊಳಗೆ ವಿದ್ಯಾರ್ಥಿಗಳ ದಾಖಲೆಗಳನ್ನು ಮತ್ತು ಫೋಟೋಗಳನ್ನು ಸಮುದಾಯದ ಮುಖಂಡರಿಗೆ ನೀಡಬೇಕು ಎಂದು ತಿಳಿಸಲಾಯಿತು.
ವೇಮನ ಜಯಂತಿಯಂತೆಯೇ ಹೆಮರೆಡ್ಡಿ ಮಲ್ಲಮ್ಮ ಜಯಂತಿಯನ್ನು ಕೂಡ ಅತ್ಯಂತ ವಿಜೃಂಭಣೆಯಿಂದ ಆಚರಿಸಬೇಕು ಎಂದು ಎಲ್ಲರೂ ಒಮ್ಮತದ ನಿರ್ಧಾರಕ್ಕೆ ಬಂದರು.
ಸಭೆಯಲ್ಲಿ ರೆಡ್ಡಿ ಸಮುದಾಯದ ಪ್ರಮುಖ ಮುಖಂಡರು ಭಾಗವಹಿಸಿ ತಮ್ಮ ಸಲಹೆಗಳನ್ನು ಹಂಚಿಕೊಂಡರು. ಜಯಂತಿಯ ಅಂಗವಾಗಿ ವಿವಿಧ ಸಾಂಸ್ಕೃತಿಕ ಮತ್ತು ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಬಗ್ಗೆ ಚರ್ಚಿಸಲಾಯಿತು.

ರೆಡ್ಡಿ ಜನ ಸಂಘದ ಅಧ್ಯಕ್ಷರಾದ ಪ್ರಭಾಕರ್ ರೆಡ್ಡಿ, ಕೋಲಾರ ಜಿಲ್ಲಾ ಅಧ್ಯಕ್ಷ ಕೃಷ್ಣಾ ರೆಡ್ಡಿ, ಜಿಲ್ಲಾ ಗೌರವ ಅಧ್ಯಕ್ಷರಾದ ವಿಜಯ ರಾಘವ ರೆಡ್ಡಿ, ಕೆ.ಜಿ.ಎಫ್ ತಾಲೂಕು ಅಧ್ಯಕ್ಷ ಪ್ರಸನ್ನ ರೆಡ್ಡಿ, ಕಾರ್ಯದರ್ಶಿ ರವಿ ರೆಡ್ಡಿ, ಬಿ.ಎಂ.ಎಲ್ ಅಧ್ಯಕ್ಷ ರಾಮಚಂದ್ರ ರೆಡ್ಡಿ, ವಕೀಲ ಪದ್ಮನಾಭ ರೆಡ್ಡಿ, ಮಾಲೂರು ಅಶ್ವತ್ಥ ರೆಡ್ಡಿ, ಸುರೇಶ್ ರೆಡ್ಡಿ, ಶಾಂತಮ್ಮ, ರಾಮಸ್ವಾಮಿ ರೆಡ್ಡಿ, ಪ್ರಕಾಶ್, ದಾಮೋದರ್ ರೆಡ್ಡಿ, ಮುನಿವೆಂಕಟರೆಡ್ಡಿ, ರಾಘವೇಂದ್ರ, ರಾಣೋಜಿ, ರೆಡ್ಡಿ ಅಭಿಲಾಷ್, ಅರುಣ್, ಭಾಸ್ಕರ್, ವೆಂಕಟರೆಡ್ಡಿ ಚಂದ್ರಾ, ರೆಡ್ಡಿ ಆಟೋ ವಿಜಯರಾಘವರೆಡ್ಡಿ, ನಾರಾಯಣರೆಡ್ಡಿ, ರಾಮಕೃಷ್ಣ ರೆಡ್ಡಿ, ಶಂಕರ್ ರೆಡ್ಡಿ, ನರೇಂದ್ರ, ಗೋಪಿ, ರಾಧಮ್ಮ ಬಾಬುರೆಡ್ಡಿ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0
suddikirana ಸುದ್ದಿ ಕಿರಣ ಟಿವಿ ಬಾಳಿನ ಬೆಳಕು ಕರ್ನಾಟಕದ ಮಾಹಿತಿ ಮನರಂಜನಾ ಚಾನೆಲ್ ಆಗಿದೆ. ಇದು ಮನರಂಜನೆಯ ಜೊತೆಗೆ ಇತ್ತೀಚಿನ ಸುದ್ದಿ ಮತ್ತು ಮಾಹಿತಿಯನ್ನು ವೀಕ್ಷಕರಿಗೆ ತೋರುತ್ತಿದೆ. ಮತ್ತು ಸಮಾಜವು ತೆಗೆದುಕೊಳ್ಳುವ ದಿಕ್ಕು ಮಾಹಿತಿಯಿಂದ ಪ್ರಭಾವಿತವಾಗಿರುತ್ತದೆ ಎಂದು ನಾವು ಅರ್ಥಮಾಡಿಕೊಂಡಿದ್ದೇವೆ. ಸುದ್ದಿ ಕಿರಣ ಟಿವಿ ಹಲವು ವಿಷಯಗಳಲ್ಲಿ ಪ್ರವರ್ತಕವಾಗಿದೆ. ಇದು ತನಿಖಾ ಪತ್ರಿಕೋದ್ಯಮ. ಮತ್ತು ತಾಂತ್ರಿಕ ಕೈಗಾರಿಕೆಗಳ ವೃತ್ತಿಪರರಿಂದ ಪ್ರಚಾರ ಮಾಡಲ್ಪಟ್ಟ ಚಾನೆಲ್ ಆಗಿದೆ. ಸುದ್ದಿ ಕಿರಣ ಟಿವಿ ಇತ್ತೀಚಿನ ತಂತ್ರಜ್ಞಾನಗಳೊಂದಿಗೆ ಗುಣಮಟ್ಟದ ಸಂಪನ್ಮೂಲಗಳನ್ನು ಸಂಯೋಜಿಸಲು ಪ್ರಯತ್ನಿಸುತ್ತದೆ. Chief Editor B.S.Mallikarjuna Reddy # 560, 3ನೇ ಮಹಡಿ, 1ನೇ ಮುಖ್ಯ ರಸ್ತೆ, ಯಶವಂತಪುರ ಬೆಂಗಳೂರು-560022., Email: suddikiranatv@gmail.com Email:suddikiranaa@gmail.com www.suddikirana.com ಸುದ್ದಿ ಮತ್ತು ಜಾಹೀರಾತಿಗಳಿಗಾಗಿ ಸಂಪರ್ಕಿಸಿ ಕಛೇರಿ 08041505268 ಸಂಚಾರಿ ವಾಣಿ 9686665456