ಯುವ ಮತದಾರರನ್ನು ಉತ್ತೇಜಿಸುವ ಸಲುವಾಗಿ ರಾಷ್ಟ್ರೀಯ ಮತದಾನದ ದಿನಾಚರಣೆ-ಗೌರವಧ್ಯಕ್ಷ ಆರ್.ಹನುಮಂತ ರೆಡ್ಡಿ

ಯುವ ಮತದಾರರನ್ನು ಉತ್ತೇಜಿಸುವ ಸಲುವಾಗಿ ರಾಷ್ಟ್ರೀಯ ಮತದಾನದ ದಿನಾಚರಣೆ-ಗೌರವಧ್ಯಕ್ಷ ಆರ್.ಹನುಮಂತ ರೆಡ್ಡಿ

ಯುವ ಮತದಾರರನ್ನು ಉತ್ತೇಜಿಸುವ ಸಲುವಾಗಿ ರಾಷ್ಟ್ರೀಯ ಮತದಾನದ ದಿನಾಚರಣೆ-ಗೌರವಧ್ಯಕ್ಷ ಆರ್.ಹನುಮಂತ ರೆಡ್ಡಿ

ಬಾಗೇಪಲ್ಲಿ: ರಾಜಕೀಯ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಲು ಹೆಚ್ಚಿನ ಯುವ ಮತದಾರರನ್ನು ಉತ್ತೇಜಿಸುವ ಸಲುವಾಗಿ, ಭಾರತ ಸರ್ಕಾರವು ಪ್ರತಿವರ್ಷ ಜನವರಿ 25 ಅನ್ನು "ರಾಷ್ಟ್ರೀಯ ಮತದಾರರ ದಿನ" ಎಂದು ಆಚರಿಸಲು ನಿರ್ಧರಿಸಿದೆ ಎಂದು ರಾಜ್ಯ ನೌಕರರ ಸಂಘದ ಗೌರವಾದ್ಯಕ್ಷ ಆರ್.ಹನುಮಂತ ರೆಡ್ಡಿ ಹೇಳಿದರು. ಪಟ್ಟಣದ ಪಿ.ಎಂ.ಶ್ರೀ ಶಾಲೆಯಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮ ಉದ್ಘಾಟಸಿ ಮಾತನಾಡಿ ಭಾರತ ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ದೇಶ. ಮತದಾನವೇ ಶ್ರೇಷ್ಠ ದಾನ. ಪ್ರಜೆಗಳು ಮತದಾನ ಮಾಡಿ ಆಯ್ಕೆ ಮಾಡುವ ಪ್ರತಿನಿಧಿಗಳಿಂದ ಭಾರತದ ಭವಿಷ್ಯ ನಿರ್ಧಾರವಾಗುತ್ತದೆ. ಯೋಗ್ಯ ನಾಯಕರ ಆಯ್ಕೆಗೆ ಮತ್ತು ಶ್ರೇಷ್ಠ ಭಾರತ ನಿರ್ಮಾಣಕ್ಕೆ ತಪ್ಪದೆ ಮತದಾನ ಮೊಡೋಣ ಎಂದು ಸರ್ಕಾರಿ ನೌಕರರ ಸಂಘದ ಗೌರವಾಧ್ಯಕ್ಷ ಆರ್.ಹನುಮಂತ ರೆಡ್ಡಿ ಹೇಳಿದರು. ಇನ್ನೂ ಇದೇ ಸಂಧರ್ಭದಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆ ಅಂಗವಾಗಿ ಶಾಲಾ ಮಕ್ಕಳಿಗೆ ಪ್ರಜ್ಞೆ ವಿಧಿಯನ್ನು ಭೋದಿಸಲಾಯಿತು. ಈ ಸಂದರ್ಭದಲ್ಲಿ ಶಿಕ್ಷಣದ ಸಮನ್ವಯ ಅಧಿಕಾರಿಗಳಾದ ಆರ್.ವೆಂಕಟರಾವ್, ಸಮಾಜ ಕಲ್ಯಾಣ ಇಲಾಖೆ ವ್ಯವಸ್ಥಾಪಕರಾದ ನಾಗರಾಜು, ಕನ್ನಡ ಸಾಹಿತ್ಯ ಪರಿಷತ್ತಿನ ಅದ್ಯಕ್ಷ ಡಿ.ಎನ್.ಕೃಷ್ಣಾರೆಡ್ಡಿ, ಪ್ರಭಾತಿ, ಧರ್ಮಪುತ್ರಿ, ವೈ.ಎ.ಮಂಜುನಾಥ್ ಹಾಗೂ ಶಾಲಾ ಮಕ್ಕಳು ಹಾಜರಿದ್ದರು.