ರಸ್ತೆ ಗುಂಡಿ ಮುಚ್ಚಲು ಆಗ್ರಹಿಸಿ ಆರ್. ಅಶೋಕ್ ನೇತೃತ್ವದಲ್ಲಿ ಪ್ರತಿಭಟನೆ
ಬೆಂಗಳೂರು: ಗುಂಡಿ ಬಿದ್ದ ರಸ್ತೆಗಳನ್ನು ಗುರುತಿಸಿ ಸರ್ಕಾರದ ಗಮನ ಸೆಳೆಯಲು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರ ನೇತೃತ್ವದಲ್ಲಿ ಇಂದು ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ವತಿಯಿಂದ ಮುಖಂಡರು ಹಾಗೂ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಮಾಜಿ ಉಪಮುಖ್ಯಮಂತ್ರಿ ಮತ್ತು ಶಾಸಕ ಡಾ. ಸಿ.ಎನ್. ಅಶ್ವತ್ಥನಾರಾಯಣ್, ಶಾಸಕರಾದ ಎಸ್. ಸುರೇಶ್ ಕುಮಾರ್, ಎನ್. ಮುನಿರತ್ನ, ಬಿಜೆಪಿ ರಾಜ್ಯ ಮುಖ್ಯ ವಕ್ತಾರ ಅಶ್ವತ್ಥನಾರಾಯಣ್, ರಾಜ್ಯ ವಕ್ತಾರ ಪ್ರಕಾಶ್ ಶೇಷರಾಘವಾಚಾರ್, ಮುಖಂಡ ಉಮೇಶ್ ಶೆಟ್ಟಿ, ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಎಸ್. ಹರೀಶ್, ಪಕ್ಷದ ಸ್ಥಳೀಯ ಮುಖಂಡರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.
ರಾಜ್ಯ ಸರ್ಕಾರವು ಕೂಡಲೇ ಕಾರ್ಯಪ್ರವೃತ್ತವಾಗಿ ರಸ್ತೆಗುಂಡಿಗಳನ್ನು ಮುಚ್ಚಬೇಕು, ಅಪಘಾತಕ್ಕೆ ಕಾರಣವಾಗುವ ಹಾಗೂ ಜನರ ಜೀವ ಹಾನಿಗೆ ಎಡೆಕೊಡುವ ರಸ್ತೆ ಗುಂಡಿಗಳ ವಿಚಾರದಲ್ಲಿ ರಾಜ್ಯದ ಕಾಂಗ್ರೆಸ್ ಸರ್ಕಾರದ ನಿರ್ಲಕ್ಷ್ಯ ಧೋರಣೆ ಖಂಡನೀಯ ಎಂದು ಮುಖಂಡರು ಟೀಕಿಸಿದರು.
What's Your Reaction?
Like
1
Dislike
0
Love
0
Funny
0
Angry
0
Sad
0
Wow
0
