ರಸ್ತೆ ನಿರ್ಮಾಣ ಕಾಮಗಾರಿಗೆ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಭೂಮಿ ಪೂಜೆ

ಬಾಗೇಪಲ್ಲಿ ತಾಲ್ಲೂಕಿನ ನಲ್ಲರೆಡ್ಡಿ ಪಲ್ಲಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಜಿಲ್ಲಾಜಿರ್ಲ ಗ್ರಾಮದಿಂದ ಆಂಧ್ರ ಪ್ರದೇಶ ಗಡಿಯವರೆಗೆ 50 ಲಕ್ಷ ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಭೂಮಿ ಪೂಜೆ ನೆರವೇರಿಸಿದರು.
ತಾಲೂಕಿನ ಗೂಳೂರು ಮುಖ್ಯ ರಸ್ತೆಯಿಂದ ಜಿಲಾಜಿರ್ಲ ಗ್ರಾಮದವರಿಗೆ ರಸ್ತೆ ನಿರ್ಮಾಣ ಮಾಡಿದ್ದು ಜಿಲ್ಲಾಜಿರ್ಲ ಗ್ರಾಮದಿಂದ ಆಂಧ್ರ ಪ್ರದೇಶ ಗಡಿಯವರೆಗೆ ಸುಸಜ್ಜಿತವಾದ ರಸ್ತೆ ಬೇಕು ಎಂದು ನನ್ನಲ್ಲಿ ಗ್ರಾಮಸ್ಥರು ಬೇಡಿಕೆ ಇಟ್ಟಿದ್ದರು, ನಾನು ಸಹ ಇದೆ ರಸ್ತೆಯಲ್ಲಿ ಓಡಾಡಿದ್ದೇನೆ ಆದ್ದರಿಂದ ಸಾರ್ವಜನಿಕರಿಗೆ ರಸ್ತೆ ತುಂಬಾ ಅವಶ್ಯಕತೆ ಇತ್ತು. ಹೀಗಾಗಿ ರಸ್ತೆ ನಿರ್ಮಾಣ ಮಾಡಲಾಗುತ್ತಿದೆ ಎಂದರು.
ಗುತ್ತಿಗೆದಾರರು ಹಾಗೂ ಅಧಿಕಾರಿಗಳು ರಸ್ತೆ
ಕಾಮಗಾರಿ ಗುಣಮಟ್ಟ ಕಾಪಾಡಿ ತ್ವರಿತಗತಿಯಲ್ಲಿ ಪೂರ್ಣಗೊಳಿಸ ಬೇಕು ಎಂದು ಸೂಚನೆ ನೀಡಿದರು.
ಕ್ಷೇತ್ರದ ಪ್ರತಿಯೊಂದು ಗ್ರಾಮಕ್ಕೂ ಅಭಿವೃದ್ಧಿ ಯೋಜನೆಗಳನ್ನು ತರುತ್ತಿದ್ದು. ಮೂಲಭೂತ ಸೌಲಭ್ಯಗಳ ಜೊತೆಗೆ ಇನ್ನಷ್ಟು ಅಭಿವೃದ್ಧಿ ಯೋಜನೆಗಳನ್ನು ಕ್ಷೇತ್ರಕ್ಕೆ ತರುವ ಪ್ರಯತ್ನ ಮಾಡಲಾಗುತ್ತಿದೆ ಎಂದು ಹೇಳಿದರು.
What's Your Reaction?






