ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ವಿಶೇಷ ಪೂಜೆ, ಅನ್ನದಾನ; ಭರತನಾಟ್ಯ ಪ್ರದರ್ಶನ

ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ವಿಶೇಷ ಪೂಜೆ, ಅನ್ನದಾನ; ಭರತನಾಟ್ಯ ಪ್ರದರ್ಶನ

       ಬೆಂಗಳೂರಿನ ಜಯನಗರದ ಐದನೇ ಬಡಾವಣೆಯಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪರಮಪೂಜ್ಯ ಶ್ರೀ ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶದಂತೆ ಗುರುವಾರ ಬೆಳಗ್ಗೆ ವಿಶೇಷ ಪೂಜಾ ಕೈಂಕರ್ಯಗಳು ಅನ್ನದಾನ ಸೇವೆಗಳು ಜರುಗಿದವು. ಸಂಜೆಯ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ವಿದುಷಿ ಆಶಾ ಕುಮಾರ್ ನಿರ್ದೇಶನದಲ್ಲಿ ಶಿವ ಗಂಗಾ ಡ್ಯಾನ್ಸ್ ಅಕಾಡೆಮಿಯ ವಿದ್ಯಾರ್ಥಿಗಳಿಂದ ಭರತನಾಟ್ಯ ಪ್ರದರ್ಶನ ಕಾರ್ಯಕ್ರಮ ನಡೆಯಿತು. ಈ ಎಲ್ಲಾ ಕಾರ್ಯಕ್ರಮಗಳೂ ಶ್ರೀಮಠದ ವ್ಯವಸ್ಥಾಪಕರಾದ ಶ್ರೀ ಆರ್ ಕೆ ವಾದೀಂದ್ರಾಚಾರ್ಯರ ನೇತೃತ್ವದಲ್ಲಿ ನೆರವೇರಿತು.