ರಾಜ್ಯದ ಬರಗಾಲವನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಲು ಪ್ರಾಂತ ರೈತ ಸಂಘ ಒತ್ತಾಯ

ರಾಜ್ಯದ ಬರಗಾಲವನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಲು ಪ್ರಾಂತ ರೈತ ಸಂಘ ಒತ್ತಾಯ

ರಾಜ್ಯದ ಬರಗಾಲವನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಲು ಪ್ರಾಂತ ರೈತ ಸಂಘ ಒತ್ತಾಯ

ಕೋಲಾರ: ರಾಜ್ಯದ ಭೀಕರ ಬರಗಾಲವನ್ನು ರಾಷ್ಟ್ರೀಯ ವಿಪತ್ತು ಎಂದು ಕೇಂದ್ರ ಸರಕಾರ ಕೂಡಲೇ ಘೋಷಣೆ ಮಾಡಿ ಅನುದಾನವನ್ನು ಬಿಡುಗಡೆ ಮಾಡುವಂತೆ ಕರ್ನಾಟಕ ಪ್ರಾಂತ ರೈತ ಸಂಘದಿಂದ ಶುಕ್ರವಾರ ನಗರದ ತಹಶಿಲ್ದಾರ್ ಕಛೇರಿ ಮುಂದೆ ಧರಣಿ ನಡೆಸಿದರು. ಈ ಸಂದರ್ಭದಲ್ಲಿ ಪ್ರಾಂತ ರೈತ ಸಂಘದ ಜಿಲ್ಲಾ ಅಧ್ಯಕ್ಷ ಟಿ.ಎಂ ವೆಂಕಟೇಶ್ ಮಾತನಾಡಿ ಶತಮಾನಗಳಲ್ಲೇ ಕಂಡರಿಯದ ಬರಗಾಲಕ್ಕೆ ರಾಜ್ಯ ಸಿಲುಕಿ ಒದ್ದಾಡುತ್ತಿದೆ. ರಾಜ್ಯ ಸರ್ಕಾರವೇ 236 ತಾಲ್ಲೂಕುಗಳ ಪೈಕಿ 223 ತಾಲ್ಲೂಕುಗಳು ತೀವ್ರ ಬರಪೀಡಿತ ಎಂದು ಘೋಷಿಸಿದೆ. ಕೃಷಿ ಇಲಾಖೆ ವರದಿ ಪ್ರಕಾರ ಸುಮಾರು ಐವತ್ತು ಲಕ್ಷ ಹೆಕ್ಟೇ‌ರ್ ಪ್ರದೇಶದಲ್ಲಿ ಬೆಳೆ ನಷ್ಟವಾಗಿದೆ. ಕಳೆದ ಜೂನ್ ನ ಮುಂಗಾರು ವೈಫಲ್ಯದಿಂದ ಉಂಟಾದ ಬರಗಾಲ, ನಂತರದ ಯಾವ ಮಳೆಯೂ ಕಾಣದೇ ರೈತಾಪಿ ಸಮುದಾಯದ ಸಂಕಟ ದಿನೇ ದಿನೇ ಹೆಚ್ಚು ಉಲ್ಬಣಗೊಳ್ಳುವಂತೆ ಮಾಡುತ್ತಿದೆ ಎಂದು ಆರೋಪಿಸಿದರು. ಬರಪೀಡಿತ ಜನರ ಅಗತ್ಯಗಳನ್ನು ಪೂರೈಸಬೇಕಾಗಿದ್ದ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಅತೀವ ನಿರ್ಲಕ್ಷ್ಯವನ್ನು ವಹಿಸಿವೆ. ಬರಗಾಲದ ಪರಿಹಾರಕ್ಕಾಗಿ ಕೇಂದ್ರದಿಂದ 18177 ಕೋಟಿ ರೂಗಳನ್ನು ಒದಗಿಸಬೇಕೆಂದು ರಾಜ್ಯ ಸರ್ಕಾರ ಕೋರಿಕೆ ಸಲ್ಲಿಸಿ ಹಲವಾರು ನಿಯೋಗಗಳ ಮೂಲಕ ಒತ್ತಾಯಿಸಿದ್ದರೂ ಒಂದು ನಯಾ ಪೈಸೆ ಕೊಟ್ಟಿಲ್ಲ ಬೇಸಿಗೆಯಲ್ಲಿ ನೀರು, ಮೇವು, ಆಹಾರ, ಉದ್ಯೋಗಕ್ಕೆ ಹಾಹಾಕಾರ ಇರುವಾಗ, ಇಡೀ ವರ್ಷ ಶತಮಾನದಲ್ಲೇ ಕಂಡರಿಯದ ಭೀಕರ ಬರಗಾಲ ಉಂಟು ಮಾಡಬಹುದಾದ ಪರಿಣಾಮಗಳನ್ನು ಊಹಿಸಬಹುದಾಗಿದೆ ಎಂದು ತಿಳಿಸಿದರು. ಈ ಧರಣಿಯ ನೇತೃತ್ವವನ್ನು ಸಂಘಟನೆಯ ತಾಲೂಕು ಅಧ್ಯಕ್ಷ ಆಲಹಳ್ಳಿ ವೆಂಕಟೇಶ್, ಉಪಾಧ್ಯಕ್ಷರಾದ ಎನ್.ಎನ್ ಶ್ರೀರಾಮ್, ಗಂಗಮ್ಮ, ಅಪ್ಪಯ್ಯಣ್ಣ, ಮುಖಂಡರಾದ ಯಲ್ಲಪ್ಪ, ಮುನಿರತ್ನಮ್ಮ, ಚಿನ್ನಮ್ಮ, ಶ್ರೀನಿವಾಸ್, ವೆಂಕಟರಾವ್, ರಾಜೇಂದ್ರ ಚಪ್ರಾಸ್, ನಾರಾಯಣಸ್ವಾಮಿ ಮುಂತಾದವರು ಇದ್ದರು.