ರಾಬರ್ಟ್‌ಸನ್‌ಪೇಟೆ: ಮನೆ ಕನ್ನ ಕಳವು ಪ್ರಕರಣಗಳಲ್ಲಿ ಆರೋಪಿ ಬಂಧನ, ಮಾಲು ವಶ
ಕೆಜಿಎಫ್,ಜೂ.೨೯: ರಾಬರ್ಟ್‌ಸನ್‌ಪೇಟೆ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಸಂಭವಿಸಿದ್ದ ಕಳವು ಪ್ರಕರಣಗಳಲ್ಲಿ ಆರೋಪಿಯನ್ನು ಬಂಧಿಸಿ, ಆತನಿಂದ ಸುಮಾರು ರೂ.೧,೩೦,೦೦೦/-(ರೂಪಾಯಿ ಒಂದು ಲಕ್ಷದ ಮೂವತ್ತು ಸಾವಿರ ಮಾತ್ರ) ಮೌಲ್ಯದ ಕಳವು ಮಾಲನ್ನು ವಶಪಡಿಸಿಕೊಳ್ಳುವಲ್ಲಿ ರಾಬರ್ಟ್‌ಸನ್‌ಪೇಟೆ ಪೊಲೀಸರು ಯಶಸ್ವಿಯಾಗಿದ್ದಾರೆ.
ಜೂ. ೨೧ ರಂದು ದೂರುದಾರರಾದ ಪಾರಂಡಹಳ್ಳಿ ಗ್ರಾಮದ ಲಕ್ಷ್ಮೀಪತಿ ಎಂಬುವರು ತನ್ನ ಮನೆಯಲ್ಲಿ ಕಳ್ಳತನವಾಗಿರುವ ಬಗ್ಗೆ ರಾಬರ್ಟ್‌ಸನ್‌ಪೇಟೆ ಪೊಲೀಸ್ ಠಾಣೆಯಲ್ಲಿ ನೀಡಿದ ದೂರಿನನ್ವಯ ಪ್ರಕರಣ ದಾಖಲಾಗಿ, ತನಿಖೆ ನಡೆಸಲಾಗುತ್ತಿತ್ತು. ಪ್ರಕರಣದಲ್ಲಿ ಆರೋಪಿ ಮತ್ತು ಮಾಲನ್ನು ಪತ್ತೆ ಮಾಡಲು ಡಿವೈಎಸ್‌ಪಿ ಎಸ್.ಪಾಂಡುರಂಗ ಅವರ ಮಾರ್ಗದರ್ಶನದಲ್ಲಿ ರಾಬರ್ಟ್‌ಸನ್‌ಪೇಟೆ ಸಿಪಿಐ ಪಿ.ಎಂ.ನವೀನ್ ಮತ್ತು ಪಿಎಸ್‌ಐ ಸಂಗಮೇಶ್ ನೇತೃತ್ವದಲ್ಲಿ ವಿಶೇಷ ಅಪರಾಧ ಪತ್ತೆ ದಳವನ್ನು ರಚಿಸಲಾಗಿತ್ತು.
ವಿಶೇಷ ಕಾರ್ಯಾಚರಣೆ ನಡೆಸಿದ ಪೊಲೀಸರು ಆಂಡ್ರಸನ್‌ಪೇಟೆ ವಾಸಿಯಾದ ರವಿಕುಮಾರ್@ಎಬಿನೇಜರ್ (೨೭ ವರ್ಷ) ಎಂಬಾತನನ್ನು ಬಂಧಿಸಿ, ಆತನಿಂದ ರಾಬರ್ಟ್‌ಸನ್‌ಪೇಟೆ ಪೊಲೀಸ್ ಠಾಣೆಯ ಎರಡು ಪ್ರಕರಣಗಳಲ್ಲಿ ಕಳ್ಳತನ ಮಾಡಲಾಗಿದ್ದ ರೂ.೧,೩೦,೦೦೦/- ಮೌಲ್ಯದ ೧೩ ಗ್ರಾಂ ಚಿನ್ನ, ೧೨೫ ಗ್ರಾಂ ಬೆಳ್ಳಿಯ ಆಭರಣಗಳು ಮತ್ತು ಒಂದು ಟೈಟಾನ್ ಕೈ ಗಡಿಯಾರ ವಶಪಡಿಸಿಕೊಂಡು ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿರುತ್ತದೆ.
ಈ ಕಾರ್ಯಾಚರಣೆಯಲ್ಲಿ ಭಾಗವಹಿಸಿದ ರಾಬರ್ಟ್‌ಸನ್‌ಪೇಟೆ ಪಿ.ಎಸ್.ಐ ಸಂಗಮೇಶ್, ವಿಶೇಷ ಅಪರಾಧ ಪತ್ತೆ ತಂಡದ ಸಿಬ್ಬಂದಿಗಳಾದ ಮುರಳಿ, ರಘು, ಬಸವರಾಜ್, ಗೋಪಿ ಹಾಗೂ ವಿನೋದ್ ಕುಮಾರ್ ರವರ ಉತ್ತಮ ಕೆಲಸವನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಂ.ಶಾಂತರಾಜು ಅವರು ಪ್ರಶಂಶಿಸಿದ್ದಾರೆ.
ಚಿತ್ರ ಶೀರ್ಷಿಕೆ: ೨೯ಕೆಜಿಎಫ್೦೨: ವಶಪಡಿಸಿಕೊಂಡ ಕಳವು ಮಾಲಿನೊಂದಿಗೆ ವಿಶೇಷ ಅಪರಾಧ ತಂಡದ ರಾಬರ್ಟ್‌ಸನ್‌ಪೇಟೆ ಪೊಲೀಸರು.
What's Your Reaction?
Like
0
Dislike
0
Love
0
Funny
0
Angry
0
Sad
0
Wow
0
