ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ-ಕಾರಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆ ಸಾವು

ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ-ಕಾರಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆ ಸಾವು

ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ-ಕಾರಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆ ಸಾವು

ಬಾಗೇಪಲ್ಲಿ: ರಸ್ತೆ ತಿರುವು ಪಡೆಯುತ್ತಿದ್ದ ಕಾರಿಗೆ ಲಾರಿ ಡಿಕ್ಕಿಯಾಗಿ ಮಹಿಳೆಯೊಬ್ಬರು ಸ್ಥಳದಲ್ಲೇ ಮೃತಪಟ್ಟು 6 ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬಾಗೇಪಲ್ಲಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮೃತಪಟ್ಟ ಮಹಿಳೆಯನ್ನು ನೆರೆಯ ಆಂಧ್ರಪ್ರದೇಶದ ಪಾತಸಾಮಲಪಲ್ಲಿ ಗ್ರಾಮದ ವೆನ್ನೆಲ (33) ಎಂದು ತಿಳಿದು ಬಂದಿದೆ. ನೆರೆಯ ಆಂಧ್ರಪ್ರದೇಶದ ಪಾತಸಾಮಲಪಲ್ಲಿ ಗ್ರಾಮದ ವೆನ್ನೆಲ ಮತ್ತು ಕುಟುಂಬದವರು ಇಂದು ಮುಂಜಾನೆ ಸುಮಾರು 3.50 ರ ಸಮಯದಲ್ಲಿ ತಾಲ್ಲೂಕಿನ ಕಾಶಾಪುರ ಗ್ರಾಮದ ಮೂಲಕ ಟಾಟಾ ಸಫಾರಿ ಕಾರಿನಲ್ಲಿ ಬೆಂಗಳೂರಿಗೆ ಹೋಗುತ್ತಿದ್ದಾಗ ರಾಷ್ಟ್ರೀಯ ಹೆದ್ದಾರಿ 44 ರ ಗ್ರೀನ್ ಪಾರ್ಕ್ ರೆಸ್ಟೋರಂಟ್ ಬಳಿ ರಾಷ್ಟ್ರೀಯ ಹೆದ್ದಾರಿಗೆ ತಿರುವು ಪಡೆಯುತ್ತಿದ್ದಾಗ ಬೆಂಗಳೂರು ಕಡೆಯಿಂದ ಹೈದರಾಬಾದ್ ಕಡೆಗೆ ಹೋಗುತ್ತಿದ್ದ ಲಾರಿ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕ ಪ್ರಯಾಣಿಸುತ್ತಿದ್ದ ವೆನ್ನೆಲ್ಲ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದು, ಕಾರಿನಲ್ಲಿದ್ದ ಮತ್ತಿಇಬ್ಬರು ಮಕ್ಕಳು ಸೇರಿದಂತೆ ಒಟ್ಟು 6 ಜನರಿಗೆ ಗಂಭೀರ ಗಾಯಗಳಾಗಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಆಸ್ಪತ್ರೆಗೆ ರವಾನಿಸಲಾಗಿದೆ. ಅಪಘಾತ ಸ್ಥಳಕ್ಕೆ ಬಾಗೇಪಲ್ಲಿ ಪೊಲೀಸ್ ಠಾಣೆಯ ಆರಕ್ಷಕ ನಿರೀಕ್ಷಕ ಪ್ರಶಾಂತ್ ವರ್ಣಿ ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.