ವಾಲ್ಮೀಕಿ ನಿಗಮದ ಅಕ್ರಮಗಳ ವಿರುದ್ಧ ಬಿಜೆಪಿ ಧರಣಿ
ಮಾಜಿ ಶಾಸಕರಾದ ಹೆಚ್.ಪಿ.ರಾಜೇಶ್ ರವರು ದಾವಣಗೆರೆಯ ಎಸಿ ಕಚೇರಿ ಮುಂಭಾಗದಲ್ಲಿ, ವಾಲ್ಮೀಕಿ ನಿಗಮದ ಅಕ್ರಮಗಳ ಕುರಿತು ನ್ಯಾಯಸಮ್ಮತ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂಬ ಆಗ್ರಹದೊಂದಿಗೆ ಬಿಜೆಪಿ ಜಿಲ್ಲಾ ಘಟಕದ ವತಿಯಿಂದ ನಡೆದ ಧರಣಿಯಲ್ಲಿ ಭಾಗವಹಿಸಿದರು.
ವಾಲ್ಮೀಕಿ ನಿಗಮದ ಅಕ್ರಮ ಹಾಗೂ ಹಗರಣದ ಹೊಣೆ ಹೊತ್ತು ಮಾಜಿ ಸಚಿವ ಬಿ. ನಾಗೇಂದ್ರ ಅವರು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಲಾಯಿತು.
ಜನರ ಹಣದ ದುರುಪಯೋಗಕ್ಕೆ ಹೊಣೆಗಾರರು ಯಾರು ಎಂಬುದು ಸ್ಪಷ್ಟವಾಗಬೇಕು. ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು.
ಜನರ ಹಣ ಮತ್ತು ಹಕ್ಕುಗಳ ರಕ್ಷಣೆಯೇ ಪ್ರಜಾಪ್ರಭುತ್ವದ ಮೂಲ ಜವಾಬ್ದಾರಿ.
ಈ ಸಂದರ್ಭದಲ್ಲಿ ಜಿಲ್ಲಾ ಅಧ್ಯಕ್ಷರು, ಪದಾಧಿಕಾರಿಗಳು, ಮಾಜಿ ಸಚಿವರು, ಮಾಜಿ ಶಾಸಕರು, ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.