ವಾಹನ ಚಾಲಕರೊಂದಿಗೆ ಗೌರವದಿಂದ ವರ್ತಿಸುವಂತೆ ಡಿಜಿಪಿ ಆದೇಶ

Jan 4, 2026 - 16:14
 0  58
ವಾಹನ ಚಾಲಕರೊಂದಿಗೆ ಗೌರವದಿಂದ ವರ್ತಿಸುವಂತೆ ಡಿಜಿಪಿ ಆದೇಶ

ಬೆಂಗಳೂರು:03, ಪೊಲೀಸ್ ಸಿಬ್ಬಂದಿಗಳು ವಾಹನ ತಪಾಸಣೆ ದಂಡದ ಮೊತ್ತ ವಸೂಲಾತಿ ಮಾಡುವಾಗ ಸಾರ್ವಜನಿಕರೊಂದಿಗೆ ಸೌಜನ್ಯದಿಂದ, ವಾಹನ ಚಾಲಕರೊಂದಿಗೆ ಗೌರವದಿಂದ ವರ್ತಿಸುವಂತೆ ಹಾಗೂ ಸಾರ್ವಜನಿಕ ದೂರುಗಳನ್ನು ಗಂಭೀರವಾಗಿ ಪರಿಗಣಿಸಿ ಅಗತ್ಯ ಕ್ರಮ ಕೈಗೊಳ್ಳುವಂತೆ ರಾಜ್ಯ ಪೊಲೀಸ್ ಇಲಾಖೆಯ ಸಂಚಾರ ಮತ್ತು ರಸ್ತೆ ಸುರಕ್ಷತೆ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಆರ್.ಹಿತೇಂದ್ರರವರು ಆದೇಶ ಹೊರಡಿಸಿದ್ದಾರೆ,

ಕೆಲವು ಪೊಲೀಸ್ ಸಿಬ್ಬಂದಿಗಳು ವಾಹನ ತಪಾಸಣಾ ಸಂದರ್ಭದಲ್ಲಿ ವಾಹನ ಚಾಲಕರ ಮೇಲೆ ದೌರ್ಜನ್ಯ, ಹಲ್ಲೆ, ಕಿರುಕುಳ, ಅವಹೇಳನಕಾರಿ, ಅವಾಚ್ಯ ಶಬ್ದಗಳ ಬಳಕೆ ಮಾಡಿ ಸಾರ್ವಜನಿಕ ಸ್ಥಳಗಳಲ್ಲಿ ವಾಗ್ವಾದಕ್ಕಿಳಿದು ಅವಮಾನ ಮಾಡುವಂತಹ ಘಟನೆಗಳು ನಿರಂತರವಾಗಿ ನಡೆಯುತ್ತಿರುವುದು ಸಾಮಾಜಿಕ ಜಾಲತಾಣಗಳಲ್ಲಿ ಮತ್ತು ಮಾಧ್ಯಮಗಳಲ್ಲಿ ವರದಿಯಾಗುತ್ತಿರುವುದು ಕಂಡು ಬಂದಿದ್ದರಿಂದ ಕರ್ನಾಟಕ ರಾಜ್ಯ ಪೊಲೀಸ್ ದೂರುಗಳ ಪ್ರಾಧಿಕಾರದ ಸದಸ್ಯರಾದ ಮೋಹನ್ ಕುಮಾರ್ ದಾನಪ್ಪನವರು ಪೊಲೀಸ್ ಮಹಾನಿರ್ದೇಶಕರಿಗೆ ಪತ್ರ ಬರೆದ ನಿಮಿತ್ಯ ಪೊಲೀಸ್ ಸಿಬ್ಬಂದಿಗಳು ದಂಡದ ಮೊತ್ತವನ್ನು ವಸೂಲಿ ಮಾಡುವಾಗ ಸಾರ್ವಜನಿಕರೊಂದಿಗೆ ಸೌಜನ್ಯದಿಂದ, ವಾಹನ ಚಾಲಕರೊಂದಿಗೆ ಗೌರವದಿಂದ ವರ್ತಿಸುವಂತೆ ಹಾಗೂ ಸಾವರ್ಜನಿಕರ ದೂರುಗಳನ್ನು ಗಂಭೀರವಾಗಿ ಪರಿಗಣಿಸಿ, ತ್ವರಿತವಾಗಿ ಕ್ರಮ ಕೈಗೊಳ್ಳುವಂತೆ ರಾಜ್ಯ ಪೊಲೀಸ್ ಇಲಾಖೆಯ ಸಂಚಾರ ಮತ್ತು ರಸ್ತೆ ಸುರಕ್ಷತೆ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಆರ್.ಹಿತೇಂದ್ರರವರು ಆದೇಶ ಹೊರಡಿಸಿದ್ದಾರೆ, 

What's Your Reaction?

Like Like 2
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0
suddikirana ಸುದ್ದಿ ಕಿರಣ ಟಿವಿ ಬಾಳಿನ ಬೆಳಕು ಕರ್ನಾಟಕದ ಮಾಹಿತಿ ಮನರಂಜನಾ ಚಾನೆಲ್ ಆಗಿದೆ. ಇದು ಮನರಂಜನೆಯ ಜೊತೆಗೆ ಇತ್ತೀಚಿನ ಸುದ್ದಿ ಮತ್ತು ಮಾಹಿತಿಯನ್ನು ವೀಕ್ಷಕರಿಗೆ ತೋರುತ್ತಿದೆ. ಮತ್ತು ಸಮಾಜವು ತೆಗೆದುಕೊಳ್ಳುವ ದಿಕ್ಕು ಮಾಹಿತಿಯಿಂದ ಪ್ರಭಾವಿತವಾಗಿರುತ್ತದೆ ಎಂದು ನಾವು ಅರ್ಥಮಾಡಿಕೊಂಡಿದ್ದೇವೆ. ಸುದ್ದಿ ಕಿರಣ ಟಿವಿ ಹಲವು ವಿಷಯಗಳಲ್ಲಿ ಪ್ರವರ್ತಕವಾಗಿದೆ. ಇದು ತನಿಖಾ ಪತ್ರಿಕೋದ್ಯಮ. ಮತ್ತು ತಾಂತ್ರಿಕ ಕೈಗಾರಿಕೆಗಳ ವೃತ್ತಿಪರರಿಂದ ಪ್ರಚಾರ ಮಾಡಲ್ಪಟ್ಟ ಚಾನೆಲ್ ಆಗಿದೆ. ಸುದ್ದಿ ಕಿರಣ ಟಿವಿ ಇತ್ತೀಚಿನ ತಂತ್ರಜ್ಞಾನಗಳೊಂದಿಗೆ ಗುಣಮಟ್ಟದ ಸಂಪನ್ಮೂಲಗಳನ್ನು ಸಂಯೋಜಿಸಲು ಪ್ರಯತ್ನಿಸುತ್ತದೆ. Chief Editor B.S.Mallikarjuna Reddy # 560, 3ನೇ ಮಹಡಿ, 1ನೇ ಮುಖ್ಯ ರಸ್ತೆ, ಯಶವಂತಪುರ ಬೆಂಗಳೂರು-560022., Email: suddikiranatv@gmail.com Email:suddikiranaa@gmail.com www.suddikirana.com ಸುದ್ದಿ ಮತ್ತು ಜಾಹೀರಾತಿಗಳಿಗಾಗಿ ಸಂಪರ್ಕಿಸಿ ಕಛೇರಿ 08041505268 ಸಂಚಾರಿ ವಾಣಿ 9686665456