ವಿಜಯದಶಮಿಯಂದು "ಹರಿದಾಸ ವೈಭವ"
ಬೆಂಗಳೂರು: ಪರಮಪೂಜ್ಯ ಶ್ರೀ ಶ್ರೀ 1008 ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶದಂತೆ ಜಯನಗರ 5ನೇ ಬಡಾವಣೆಯ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಶ್ರೀಮಠದ ಹಿರಿಯ ವ್ಯವಸ್ಥಾಪಕರಾದ ಶ್ರೀ ಆರ್ ಕೆ ವಾದೀಂದ್ರಾಚಾರ್ಯರ ನೇತೃತ್ವದಲ್ಲಿ ಅಕ್ಟೋಬರ್ 2, ಗುರುವಾರ ಸಂಜೆ 5-15ಕ್ಕೆ ಕು|| ಅನನ್ಯ ಬೆಳವಾಡಿ ಇವರಿಂದ "ಹರಿದಾಸ ವೈಭವ" ಗಾಯನ ಕಾರ್ಯಕ್ರಮ ಏರ್ಪಡಿಸಲಾಗಿದ್ದು, ಇವರ ಗಾಯನಕ್ಕೆ ಕೀ-ಬೋರ್ಡ್ ವಾದನದಲ್ಲಿ ಶ್ರೀ ಅಮಿತ್ ಶರ್ಮಾ ಮತ್ತು ತಬಲಾ ವಾದನದಲ್ಲಿ ಶ್ರೀ ರಂಗವಿಠಲ ಸಾಥ್ ನೀಡಲಿದ್ದಾರೆ ಎಂದು ಶ್ರೀ ನಂದಕಿಶೋರ್ ಆಚಾರ್ಯರು ತಿಳಿಸಿದ್ದಾರೆ. ಸ್ಥಳ : ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠ, 11ನೇ ಮುಖ್ಯರಸ್ತೆ, 45ನೇ ಅಡ್ಡರಸ್ತೆ, ಜಯನಗರ 5ನೇ ಬಡಾವಣೆ, ಬೆಂಗಳೂರು 41

What's Your Reaction?
Like
2
Dislike
0
Love
0
Funny
0
Angry
0
Sad
0
Wow
0
