ವಿದ್ಯಾರ್ಥಿಗಳಿಗೆ ಶಿಕ್ಷಣದ ಜೊತೆಗೆ ಶಿಸ್ತು ಅತೀ ಮುಖ್ಯ-ಶಾಸಕ ಎಸ್. ಎನ್.ಸುಬ್ಬಾರೆಡ್ಡಿ
ಬಾಗೇಪಲ್ಲಿ: ಶಿಕ್ಷಣ ಮತ್ತು ಆರೋಗ್ಯ ಪ್ರತಿಯೊಬ್ಬರಿಗೂ ಅವಶ್ಯಕ. ಉತ್ತಮ ಶಿಕ್ಷಣವು ಉನ್ನತ ಸಾಧನೆಗೆ ಹಾದಿ. ಹಾಗಾಗಿ ಸರ್ಕಾರವು ಗುಣಾತ್ಮಕ ಶಿಕ್ಷಣ ನೀಡುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಹಾಗಾಗಿ ಮಕ್ಕಳಿಗೆ ವಿದ್ಯಾರ್ಥಿ ದೇಷೆಯಲ್ಲಿ ಸಾಧನೆ ಮಾಡಲು ಶಿಸ್ತು ಪಾಲನೆ ಅತೀ ಮುಖ್ಯ ಎಂದು ಶಾಸಕ ಎಸ್. ಎನ್.ಸುಬ್ಬಾರೆಡ್ಡಿ ತಿಳಿಸಿದ್ದಾರೆ.
ಪಟ್ಟಣದ ಹೊರವಲಯದ ದೇವರಗುಡಿಪಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಆರಂಭೋತ್ಸವಕ್ಕೆ ಶಾಸಕ ಶಾಸಕ ಎಸ್. ಎನ್. ಸುಬ್ಬಾ ರೆಡ್ಡಿ ಅವರು ಚಾಲನೆ ನೀಡಿದರು. ವಿದ್ಯಾರ್ಥಿಗಳಿಗೆ ಗುಲಾಬಿ ಹೂವುಗಳನ್ನು ನೀಡುವ ಮೂಲಕ ಶಾಲಾ ಪ್ರಾರಂಭೋತ್ಸವಕ್ಕೆ ಚಾಲನೆ ನೀಡಲಾಯಿತು.
ಶಾಲಾ ಪ್ರಾರಂಭೋತ್ಸವದ ಉದ್ಘಾಟನೆ ಪ್ರಯುಕ್ತ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕಗಳನ್ನು ಗಳಿಸಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.
ಶೇ.100ರಷ್ಟು ಸಾಧನೆ ಮಾಡಿದ ಶಾಲೆಗಳ ಮುಖ್ಯೋಪಾಧ್ಯಾಯರನ್ನು ಸನ್ಮಾನಿಸಲಾಯಿತು.
ಶಾಸಕ ಎಸ್. ಎನ್. ಸುಬ್ಬಾ ರೆಡ್ಡಿ ಮಾತನಾಡಿ, ಸರ್ಕಾರಿ ಶಾಲೆಗಳಲ್ಲಿ ಮೂಲಸೌಲಭ್ಯಗಳನ್ನು ಕಲ್ಪಿಸಲಾಗಿದೆ. ತರಬೇತಿ ಪಡೆದ ನುರಿತ ಶಿಕ್ಷಕರಿದ್ದಾರೆ. ಅಕ್ಷರ ದಾಸೋಹ, ಪಠ್ಯ ಪುಸ್ತಕ, ಸಮವಸ್ತ್ರ ಸೇರಿದಂತೆ ವಿವಿಧ ಸೌಲಭ್ಯಗಳನ್ನು ಉಚಿತವಾಗಿ ನೀಡಲಾಗುತ್ತದೆ. ಹಾಗಾಗಿ ಸರ್ಕಾರಿ ಶಾಲೆಗಳಿಗೆ ಮಕ್ಕಳನ್ನು ಸೇರಿಸುವ ನಿಟ್ಟಿನಲ್ಲಿ ಶಿಕ್ಷಕರು ಗ್ರಾಮಗಳಲ್ಲಿ ದಾಖಲಾತಿ ಆಂದೋಲನ ನಡೆಸಬೇಕು.
ಶಿಕ್ಷಣ ಮತ್ತು ಆರೋಗ್ಯ ಪ್ರತಿಯೊಬ್ಬರಿಗೂ ಅವಶ್ಯಕ. ಉತ್ತಮ ಶಿಕ್ಷಣವು ಉನ್ನತ ಸಾಧನೆಗೆ ಹಾದಿ. ಹಾಗಾಗಿ ಸರ್ಕಾರವು ಗುಣಾತ್ಮಕ ಶಿಕ್ಷಣ ನೀಡುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ. ಪೋಷಕರು ಶಾಲೆಗೆ ಮಕ್ಕಳು ಗೈರು ಹಾಜರಾಗದಂತೆ ನೋಡಿಕೊಳ್ಳಬೇಕು. ಮೊದಲ ದಿನದಿಂದಲೇ ಶೈಕ್ಷಣಿಕ ಚಟುವಟಿಕೆಗಳು ಆರಂಭವಾಗಿವೆ. ಹಾಗಾಗಿ ತಮ್ಮ ನೆರೆಹೊರೆಯ ಕುಟುಂಬಗಳಿಗೆ ತಿಳಿಸಿ ಎಲ್ಲಾ ಮಕ್ಕಳು ಶಾಲೆಗೆ ಬರುವಂತೆ ಮಾಡಬೇಕು ಎಂದರು.
ಈ ಸಂಧರ್ಭದಲ್ಲಿ ತಹಸೀಲ್ದಾರ್ ಮನಿಷಾ ಮಹೇಶ್ ಪತ್ರಿ, ಕ್ಷೇತ್ರ ಶಿಕ್ಷಣಾಧಿಕಾರಿ ವೆಂಕಟರಮಣ,ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಹನುಮಂತ ರೆಡ್ಡಿ, ಶಾಲಾ ಮುಖ್ಯ ಶಿಕ್ಷಕಿ ಪ್ರಮೀಳಾ, ಪಾಕೃದ್ದಿನ್ ಸಾಬ್, ವಿಶ್ವನಾಥ್,ಉಮಾದೇವಿ,ಸೇರಿದಂತೆ ಶಿಕ್ಷಕರು, ವಿದ್ಯಾರ್ಥಿ-ವಿದ್ಯಾರ್ಥಿನಿಯರು ಇದ್ದರು.
What's Your Reaction?
Like
0
Dislike
0
Love
0
Funny
0
Angry
0
Sad
0
Wow
0
