ವಿದ್ಯುತ್ ಖಾಸಗೀಕರಣ ವಿರೋಧಿಸಿ ಸಂತೆಮರಹಳ್ಳಿ ಕೆಇಬಿ ಕಛೇರಿ ಮುಂದೆ ಪ್ರತಿಭಟನೆ 

Feb 12, 2026 - 17:52
 0  47
ವಿದ್ಯುತ್ ಖಾಸಗೀಕರಣ ವಿರೋಧಿಸಿ ಸಂತೆಮರಹಳ್ಳಿ ಕೆಇಬಿ ಕಛೇರಿ ಮುಂದೆ ಪ್ರತಿಭಟನೆ 

       ಸಂತೆಮರಹಳ್ಳಿ: ವಿದ್ಯುತ್ ಖಾಸಗೀಕಾರಣ ವಿರೋಧಿಸಿ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನೌಕರರ ಸಂಘದ ವತಿಯಿಂದ ಸಂತೆಮರಹಳ್ಳಿ ಕೆಇಬಿ ಕಛೇರಿ ಆವರಣದಲ್ಲಿ ಪ್ರತಿಭಟನೆ ನಡೆಸಲಾಯಿತು.

ಸಂತೆಮರಹಳ್ಳಿ ಕೆಇಬಿ ಕಛೇರಿ ಮುಂಭಾಗ ಜಮಾಯಿಸಿದ ಅಧಿಕಾರಿಗಳು ಹಾಗೂ ನೌಕರರು ವಿದ್ಯುತ್ ಕಾಯ್ದೆಗೆ ತಿದ್ದುಪಡಿ ಬೇಡ, ವಿದ್ಯುತ್ ಕ್ಷೇತ್ರದಲ್ಲಿ ಖಾಸಗೀ ಕಾರಣ ಬೇಡ ಕಾರ್ಮಿಕರ ಒಗ್ಗಟ್ಟುಚಿರಾಯುವಾಗಲಿ ಎಂದು ಘೋಷಣೆ ಕೂಗಿ ಪ್ರತಿಭಟನೆ ಮಾಡಲಾಯಿತು.

ನೌಕರ ಸಂಘದ ಅಧ್ಯಕ್ಷ ಮರಿಸ್ವಾಮಿ ಮಾತನಾಡಿ ಖಾಸಗೀಕರಣ ಮಾಡಿರುವುದರ ವಿರುದ್ಧ ಆಲ್ ಇಂಜಿನಿಯರ್ ಒಕ್ಕೂಟ ಸಂಘ ಸಂಸ್ಥೆಗಳು ಒಂದು ದಿನ ಮಾಡಿರುವ ಮುಷ್ಕರವನ್ನು ಬೆಂಬಲಿಸಿ ನಾವು ಪ್ರತಿಭಟನೆ ಮಾಡಿದ್ದೇವೆ ಎಂದರು. ವಿದ್ಯುತ್ ಸುಧಾರಣೆ ಕಾಯ್ದೆ 2026 ಗ್ರಾಹಕರಿಗೆ ನೌಕರರ ವರ್ಗದವರಿಗೆ ಮಾರಕವಾಗಲಿದ್ದು ಇದು ಕಾರ್ಮಿಕ ವಿರೋಧ ನೀತಿಯಾಗಿದೆ ಎಂದರು. ಇದರಿಂದ ರೈತರಿಗೆ ಹಾಗೂ ಸಾಮಾನ್ಯ ಜನರಿಗೆ ಹೊರೆಯಾಗಲಿದೆ.

ಕೃಷಿ ಉದ್ದೇಶಕ್ಕೆ ರೈತರಿಗೆ ನೀಡುತ್ತಿರುವ ಉಚಿತ ವಿದ್ಯುತ್ ಗೆ ತೊಂದರೆ ಉಂಟಾಗುವ ಸಾಧ್ಯತೆ ಇದೆ,ಬಡವರಿಗೆ ನೀಡುತ್ತಿರುವ ಭಾಗ್ಯಜ್ಯೋತಿ ಹಾಗೂ ಕುಟೀರ ಜ್ಯೋತಿ ಉಚಿತ ವಿದ್ಯುತ್ ಗೆ ಕಡಿವಾಣ ಬೀಳುವ ಸಾಧ್ಯತೆ ಇದೆ ಎಂದರು.ಈ ಕ್ಷೇತ್ರದಲ್ಲಿ 60 ಸಾವಿರಕ್ಕೂ ನೌಕರರು ಸಂಘ ಸಂಸ್ಥೆ ಕಟ್ಟಿ ಬೆಳಸಿದ ನೌಕರರಿಗೆ ತೊಂದರೆ ಯಾಗಲಿದೆ ಎಂದರು. ಈ ಸಂದರ್ಭದಲ್ಲಿ ಸಹಾಯಕ ಕಾರ್ಯ ಪಾಲಕ ಇಂಜಿನಿಯರ್ ಎಂ ಪಿ ಪ್ರಶಾಂತ್, ಇಂಜಿನಿಯರ್ಗಳಾದ ಸತೀಶ್ ,ಮುದ್ದುರಾಜ್, ತಿಪ್ಪೇಸ್ವಾಮಿ, ಮಧು ಹಾಗೂ ಸಿಬ್ಬಂದಿಗಳಾದ ಮಲ್ಲೇಶ್, ಶಾಂತರಾಜು, ಸರ್ವೇಶ್, ಸುರೇಶ, ಪದ್ಮನಾಭ, ಪ್ರತೀಶ್ , ರವೀಶ್ ಹಾಗೂ ಮತ್ತಿತರರು ಇದ್ದರು.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0
suddikirana ಸುದ್ದಿ ಕಿರಣ ಟಿವಿ ಬಾಳಿನ ಬೆಳಕು ಕರ್ನಾಟಕದ ಮಾಹಿತಿ ಮನರಂಜನಾ ಚಾನೆಲ್ ಆಗಿದೆ. ಇದು ಮನರಂಜನೆಯ ಜೊತೆಗೆ ಇತ್ತೀಚಿನ ಸುದ್ದಿ ಮತ್ತು ಮಾಹಿತಿಯನ್ನು ವೀಕ್ಷಕರಿಗೆ ತೋರುತ್ತಿದೆ. ಮತ್ತು ಸಮಾಜವು ತೆಗೆದುಕೊಳ್ಳುವ ದಿಕ್ಕು ಮಾಹಿತಿಯಿಂದ ಪ್ರಭಾವಿತವಾಗಿರುತ್ತದೆ ಎಂದು ನಾವು ಅರ್ಥಮಾಡಿಕೊಂಡಿದ್ದೇವೆ. ಸುದ್ದಿ ಕಿರಣ ಟಿವಿ ಹಲವು ವಿಷಯಗಳಲ್ಲಿ ಪ್ರವರ್ತಕವಾಗಿದೆ. ಇದು ತನಿಖಾ ಪತ್ರಿಕೋದ್ಯಮ. ಮತ್ತು ತಾಂತ್ರಿಕ ಕೈಗಾರಿಕೆಗಳ ವೃತ್ತಿಪರರಿಂದ ಪ್ರಚಾರ ಮಾಡಲ್ಪಟ್ಟ ಚಾನೆಲ್ ಆಗಿದೆ. ಸುದ್ದಿ ಕಿರಣ ಟಿವಿ ಇತ್ತೀಚಿನ ತಂತ್ರಜ್ಞಾನಗಳೊಂದಿಗೆ ಗುಣಮಟ್ಟದ ಸಂಪನ್ಮೂಲಗಳನ್ನು ಸಂಯೋಜಿಸಲು ಪ್ರಯತ್ನಿಸುತ್ತದೆ. Chief Editor B.S.Mallikarjuna Reddy # 560, 3ನೇ ಮಹಡಿ, 1ನೇ ಮುಖ್ಯ ರಸ್ತೆ, ಯಶವಂತಪುರ ಬೆಂಗಳೂರು-560022., Email: suddikiranatv@gmail.com Email:suddikiranaa@gmail.com www.suddikirana.com ಸುದ್ದಿ ಮತ್ತು ಜಾಹೀರಾತಿಗಳಿಗಾಗಿ ಸಂಪರ್ಕಿಸಿ ಕಛೇರಿ 08041505268 ಸಂಚಾರಿ ವಾಣಿ 9686665456