ವಿಶ್ವ ಪರಿಸರ ದಿನಾಚರಣೆ ಅರ್ಥಪೂರ್ಣ ಆಚರಣೆ: ಎಸ್‌ಪಿ ಕೆ.ಎಂ. ಶಾಂತರಾಜು

Jun 6, 2025 - 10:42
 0  4
ವಿಶ್ವ ಪರಿಸರ ದಿನಾಚರಣೆ ಅರ್ಥಪೂರ್ಣ ಆಚರಣೆ: ಎಸ್‌ಪಿ ಕೆ.ಎಂ. ಶಾಂತರಾಜು

ಕೆಜಿಎಫ್,ಜೂ.೦೫: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಜಿಲ್ಲಾ ಪೊಲೀಸ್ ಕಛೇರಿಯಲ್ಲಿ ಸಸಿ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡುವ ಮೂಲಕ ಪರಿಸರ ದಿನವನ್ನು ಅರ್ಥಪೂರ್ಣವಾಗಿ ಆಚರಣೆ ಮಾಡಲಾಯಿತು.
ಜಿಲ್ಲಾ ಪೊಲೀಸ್ ಕಛೇರಿಯಲ್ಲಿ ಗುರುವಾರದಂದು ಏರ್ಪಡಿಸಿದ್ದ ವಿಶ್ವ ಪರಿಸರ ದಿನಾಚರಣೆಯ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಂ. ಶಾಂತರಾಜು ಅವರು ಮಾತನಾಡಿ, ಪ್ರತಿಯೊಬ್ಬರು ಗಿಡಗಳನ್ನು, ಮರಗಳನ್ನು ಬೆಳೆಸಬೇಕೆಂದು ಕರೆ ನೀಡಿದರು. ಪರಿಸರದ ಬಗ್ಗೆ, ಪರಿಸರ ಸಂರಕ್ಷಣೆಯ ಕುರಿತು ಶಾಲಾ ಮಕ್ಕಳಿಗೆ ಪ್ರಾಥಮಿಕ ಹಂತದಿಂದಲೂ ಅರಿವು ಮೂಡಿಸುವ ಕೆಲಸವಾಗಬೇಕೆಂದರು.
ಇದುವರೆವಿಗೂ ತಮ್ಮ ಅವಧಿಯಲ್ಲಿ ಸುಮಾರು ೨೦೦೦ ಸಸಿಗಳನ್ನು ಜಿಲ್ಲೆಯ ಎಲ್ಲಾ ಪೊಲೀಸ್ ಠಾಣೆ, ಕಛೇರಿ, ವಸತಿ ಗೃಹಗಳ ಆವರಣಗಳಲ್ಲಿ ನೆಡುವ ಮೂಲಕ ಸಸ್ಯ ಕ್ಷೇತ್ರಾಭಿವೃದ್ದಿಗೆ ಸಹಕರಿಸಿರುವುದಾಗಿ ಎಸ್‌ಪಿ ಶಾಂತರಾಜು ಅವರು ತಿಳಿಸಿದರು. ಸಾರ್ವಜನಿಕರು ಮನೆಗಳ ಬಳಿ, ರಸ್ತೆಗಳ ಬದಿ, ತಂತಮ್ಮ ಖಾಲಿ ಸ್ಥಳಗಳಲ್ಲಿ ಸಸಿಗಳನ್ನು ನೆಡುವ ಮೂಲಕ ಪರಿಸರದ ಅಭಿವೃದ್ದಿ, ಅರಣ್ಯಾಭಿವೃದ್ದಿಪಡಿಸುವುದು ಇಂದಿನ ಸಮಾಜಕ್ಕೆ ಬಹಳ ಅವಶ್ಯಕವೆಂದು ಅಭಿಪ್ರಾಯಪಟ್ಟರು.
ಕಾರ್ಯಕ್ರಮದಲ್ಲಿ ಡಿವೈಎಸ್‌ಪಿ ಎಸ್.ಪಾಂಡುರಂಗ, ಸಹಾಯಕ ಆಡಳಿತಾಧಿಕಾರಿ ಜಿ.ವಿಶ್ವನಾಥ, ಉರಿಗಾಂ ವೃತ್ತ ಪೊಲೀಸ್ ಇನ್ಸ್‌ಪೆಕ್ಟರ್ ಎಸ್.ಟಿ.ಮಾರ್ಕೋಂಡಯ್ಯ, ಆರ್‌ಪಿಐ ವಿ.ಸೋಮಶೇಖರ್, ನಿಸ್ತಂತು ಪಿಎಸ್‌ಐ ನಾಗಪ್ಪ ಮಲ್ಲಪ್ಪ ಖಾನಾಪೂರ್, ಜಿಲ್ಲಾ ಪೊಲೀಸ್ ಕಛೇರಿಯ ಅಧಿಕಾರಿ, ಸಿಬ್ಬಂದಿಗಳು ಮತ್ತು ಲಿಪಿಕ ನೌಕರರು ಭಾಗವಹಿಸಿದ್ದರು.
ಕೆಜಿಎಫ್ ಪೊಲೀಸ್ ಜಿಲ್ಲೆಯ ಎಲ್ಲಾ ಪೊಲೀಸ್ ಠಾಣೆ ಹಾಗೂ ಇಲಾಖೆಯ ಎಲ್ಲಾ ಕಛೇರಿಗಳಲ್ಲಿ ಪರಿಸರ ದಿನಾಚರಣೆ ಕಾರ್ಯಕ್ರಮವನ್ನು ಆಚರಿಸಲಾಯಿತು.
ಚಿತ್ರಶಿರ್ಷಿಕೆ: ೦೫ಕೆಜಿಎಫ್೦೧: ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ಎಸ್ಪಿ ಕೆ.ಎಂ. ಶಾಂತರಾಜು, ಡಿವೈಎಸ್‌ಪಿ ಪಾಂಡುರಂಗ ಇತರರು ಇದ್ದಾರೆ.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0
suddikirana ಸುದ್ದಿ ಕಿರಣ ಟಿವಿ ಬಾಳಿನ ಬೆಳಕು ಕರ್ನಾಟಕದ ಮಾಹಿತಿ ಮನರಂಜನಾ ಚಾನೆಲ್ ಆಗಿದೆ. ಇದು ಮನರಂಜನೆಯ ಜೊತೆಗೆ ಇತ್ತೀಚಿನ ಸುದ್ದಿ ಮತ್ತು ಮಾಹಿತಿಯನ್ನು ವೀಕ್ಷಕರಿಗೆ ತೋರುತ್ತಿದೆ. ಮತ್ತು ಸಮಾಜವು ತೆಗೆದುಕೊಳ್ಳುವ ದಿಕ್ಕು ಮಾಹಿತಿಯಿಂದ ಪ್ರಭಾವಿತವಾಗಿರುತ್ತದೆ ಎಂದು ನಾವು ಅರ್ಥಮಾಡಿಕೊಂಡಿದ್ದೇವೆ. ಸುದ್ದಿ ಕಿರಣ ಟಿವಿ ಹಲವು ವಿಷಯಗಳಲ್ಲಿ ಪ್ರವರ್ತಕವಾಗಿದೆ. ಇದು ತನಿಖಾ ಪತ್ರಿಕೋದ್ಯಮ. ಮತ್ತು ತಾಂತ್ರಿಕ ಕೈಗಾರಿಕೆಗಳ ವೃತ್ತಿಪರರಿಂದ ಪ್ರಚಾರ ಮಾಡಲ್ಪಟ್ಟ ಚಾನೆಲ್ ಆಗಿದೆ. ಸುದ್ದಿ ಕಿರಣ ಟಿವಿ ಇತ್ತೀಚಿನ ತಂತ್ರಜ್ಞಾನಗಳೊಂದಿಗೆ ಗುಣಮಟ್ಟದ ಸಂಪನ್ಮೂಲಗಳನ್ನು ಸಂಯೋಜಿಸಲು ಪ್ರಯತ್ನಿಸುತ್ತದೆ. Chief Editor B.S.Mallikarjuna Reddy # 560, 3ನೇ ಮಹಡಿ, 1ನೇ ಮುಖ್ಯ ರಸ್ತೆ, ಯಶವಂತಪುರ ಬೆಂಗಳೂರು-560022., Email: suddikiranatv@gmail.com Email:suddikiranaa@gmail.com www.suddikirana.com ಸುದ್ದಿ ಮತ್ತು ಜಾಹೀರಾತಿಗಳಿಗಾಗಿ ಸಂಪರ್ಕಿಸಿ ಕಛೇರಿ 08041505268 ಸಂಚಾರಿ ವಾಣಿ 9686665456