ಶನೇಶ್ವರ ಜಯಂತೋತ್ಸವ ಅಂಗವಾಗಿ ಶನಿಮಹಾತ್ಮನಿಗೆ ಕಷ್ಟನಿವಾರಣೆ ಶಾಂತಿ ಪೂಜೆ

May 28, 2025 - 18:06
Jun 7, 2025 - 12:41
 0  5
ಶನೇಶ್ವರ ಜಯಂತೋತ್ಸವ ಅಂಗವಾಗಿ ಶನಿಮಹಾತ್ಮನಿಗೆ ಕಷ್ಟನಿವಾರಣೆ ಶಾಂತಿ ಪೂಜೆ

ಬಾಗೇಪಲ್ಲಿ: ಅಪರೂಪಕ್ಕೆ ಬರುವ ಶನಿ ಅಮಾವಾಸ್ಯೆಯಾದ ಮಂಗಳವಾರದಂದು ಬಾಗೇಪಲ್ಲಿ  ಶನಿಮಹಾತ್ಮ ದೇವಾಲಯದಲ್ಲಿ ವಿಶೇಷ ಪೂಜೆಯನ್ನು ಹಮ್ಮಿಕೊಂಡಿದ್ದು ಕಷ್ಟ ನಿವಾರಣೆಗೆ ಹಾಗೂ ಶಾಂತಿಗಾಗಿ ಶನಿಮಹಾತ್ಮನನ್ನು ಪ್ರಾರ್ಥಿಸಲಾಯಿತು.

ಪಟ್ಟಣನದ ಹೊರವಲಯದ ಶನಿಮಹಾತ್ಮ ದೇವಾಲಯದಲ್ಲಿ ಮಂಗಳವಾರ ಅಮಾವಾಸೆ ಅಂಗವಾಗಿ ಅದರಲ್ಲೂ ಅಪರೂಪಕ್ಕೆ ಬರುವ ಶನಿ ಅಮಾವಾಸ್ಯೆಯ ಜೊತೆಗೆ ಶನೇಶ್ವರ ಜಯಂತಿ. ಹಾಗಾಗಿ ಶನಿಮಹಾತ್ಮನನ್ನು ಪೂಜಿಸಲು ಇದೊಂದು ವಿಶೇಷ ದಿನದಂದು ವಿಶೇಷ ಪೂಜೆ ಪುನಸ್ಕಾರ ಹೋಮ ಶಾಂತಿ ಕಾರ್ಯಗಳನ್ನು ಹಮ್ಮಿಕೊಳ್ಳಲಾಗಿತ್ತು.

ನೂರಾರು ಭಕ್ತರು ಶ್ರದ್ಧಾ ಭಕ್ತಿಯಿಂದ ದೇವಸ್ಥಾನಕ್ಕೆ ತೆರಳಿ ಭಕ್ತಿಯಿಂದ ಕೈ ಮುಗಿದು ಪೂಜಾ ಕಾರ್ಯಗಳಲ್ಲಿ ತಲ್ಲೀನರಾಗಿ ಎಲ್ಲ ಕಷ್ಟಗಳನ್ನು ಪರಿಹರಿಸಿ ಶಾಂತಿಯನ್ನು ಕರುಣಿಸೆಂದು ಆ ಭಗವಂತನಲ್ಲಿ ಪ್ರಾರ್ಥಿಸಿದರು.ವಿಶೇಷ ಪೂಜೆ ಪುನಸ್ಕಾರ ಶಾಂತಿ ಹೋಮಗಳನ್ನು ನಡೆಸಿ ಮಹಾಮಂಗಳಾರತಿ ಮಾಡಿ ತೀರ್ಥ ಪ್ರಸಾದವನ್ನು ವಿನಿಯೋಗಿಸಲಾಯಿತು.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0
suddikirana ಸುದ್ದಿ ಕಿರಣ ಟಿವಿ ಬಾಳಿನ ಬೆಳಕು ಕರ್ನಾಟಕದ ಮಾಹಿತಿ ಮನರಂಜನಾ ಚಾನೆಲ್ ಆಗಿದೆ. ಇದು ಮನರಂಜನೆಯ ಜೊತೆಗೆ ಇತ್ತೀಚಿನ ಸುದ್ದಿ ಮತ್ತು ಮಾಹಿತಿಯನ್ನು ವೀಕ್ಷಕರಿಗೆ ತೋರುತ್ತಿದೆ. ಮತ್ತು ಸಮಾಜವು ತೆಗೆದುಕೊಳ್ಳುವ ದಿಕ್ಕು ಮಾಹಿತಿಯಿಂದ ಪ್ರಭಾವಿತವಾಗಿರುತ್ತದೆ ಎಂದು ನಾವು ಅರ್ಥಮಾಡಿಕೊಂಡಿದ್ದೇವೆ. ಸುದ್ದಿ ಕಿರಣ ಟಿವಿ ಹಲವು ವಿಷಯಗಳಲ್ಲಿ ಪ್ರವರ್ತಕವಾಗಿದೆ. ಇದು ತನಿಖಾ ಪತ್ರಿಕೋದ್ಯಮ. ಮತ್ತು ತಾಂತ್ರಿಕ ಕೈಗಾರಿಕೆಗಳ ವೃತ್ತಿಪರರಿಂದ ಪ್ರಚಾರ ಮಾಡಲ್ಪಟ್ಟ ಚಾನೆಲ್ ಆಗಿದೆ. ಸುದ್ದಿ ಕಿರಣ ಟಿವಿ ಇತ್ತೀಚಿನ ತಂತ್ರಜ್ಞಾನಗಳೊಂದಿಗೆ ಗುಣಮಟ್ಟದ ಸಂಪನ್ಮೂಲಗಳನ್ನು ಸಂಯೋಜಿಸಲು ಪ್ರಯತ್ನಿಸುತ್ತದೆ. Chief Editor B.S.Mallikarjuna Reddy # 560, 3ನೇ ಮಹಡಿ, 1ನೇ ಮುಖ್ಯ ರಸ್ತೆ, ಯಶವಂತಪುರ ಬೆಂಗಳೂರು-560022., Email: suddikiranatv@gmail.com Email:suddikiranaa@gmail.com www.suddikirana.com ಸುದ್ದಿ ಮತ್ತು ಜಾಹೀರಾತಿಗಳಿಗಾಗಿ ಸಂಪರ್ಕಿಸಿ ಕಛೇರಿ 08041505268 ಸಂಚಾರಿ ವಾಣಿ 9686665456