ಶಾಲಿನಿ ಇಂಟರ್ ನ್ಯಾಷನಲ್ ಶಾಲೆಯಲ್ಲಿ ವಿಶ್ವ ಯೋಗ ಆಚರಣೆ  ನಡೆಯಿತು

Jun 21, 2025 - 17:07
 0  3
ಶಾಲಿನಿ ಇಂಟರ್ ನ್ಯಾಷನಲ್ ಶಾಲೆಯಲ್ಲಿ ವಿಶ್ವ ಯೋಗ ಆಚರಣೆ  ನಡೆಯಿತು

ಚನ್ನರಾಯಪಟ್ಟಣ: ಶಾಲಿನಿ ಇಂಟರ್ ನ್ಯಾಷನಲ್ ಶಾಲೆಯಲ್ಲಿ ವಿಶ್ವ ಯೋಗ ಆಚರಣೆ  ನಡೆಯಿತು. ಪಟ್ಟಣದ ಗಾಂಧಿ ಸರ್ಕಲ್ ನಲ್ಲಿರುವ ಶಾಲಿನಿ  ವಿದ್ಯಾಸಂಸ್ಥೆಯ ಮಕ್ಕಳಿಂದ 11ನೇ ವಿಶ್ವ ಯೋಗ ದಿನಾಚರಣೆಯ ಅಂಗವಾಗಿ ವಿವಿಧ ಬಂಗಿಯ ಯೋಗಾಸನ ಪ್ರದರ್ಶನ ಜರುಗಿತು. ಕಾರ್ಯಕ್ರಮ ಉದ್ಘಾಟಿಸಿದ ಅರುಣ ಕುಮಾರಿ ಮಾತನಾಡಿ ಪ್ರತಿಯೊಬ್ಬರು ಯೋಗ ಮಾಡುವ ಮೂಲಕ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಎಂದರು. ಪ್ರತಿಯೊಬ್ಬರು ದಿನದಲ್ಲಿ 10 ನಿಮಿಷವಾದರೂ ಯೋಗಾಸನ ಮಾಡುವುದರಿಂದ ರೋಗ ಬರದಂತೆ ಆರೋಗ್ಯವಾಗಿ ಜೀವಿಸಬಹುದು ಎಂದು ತಿಳಿಸಿದರು. ಈ ದಿನ ಪ್ರಪಂಚದ ವಿವಿಧ ದೇಶಗಳಲ್ಲಿ ವಿಶ್ವ ಯೋಗ ದಿನ ಎಂದು ಆಚರಿಸುತ್ತಿರುವುದು ನಮ್ಮೆಲ್ಲರಿಗೂ ಹೆಮ್ಮೆ ವಿಚಾರವಾಗಿದೆ ಎಂದರು. ಈ ಕಾರ್ಯಕ್ರಮದಲ್ಲಿ ಚನ್ನರಾಯಪಟ್ಟಣ ಹಿರಿಯ ಸಿವಿಲ್ ನ್ಯಾಯಾಧೀಶರಾದ ಅರುಣ ಕುಮಾರಿ, ಸಿವಿಲ್ ನ್ಯಾಯಾಧೀಶರಾದ ಕುಸುಮ, ಪರಿಸರ ಪ್ರೇಮಿ ಸಿ ಎನ್ ಅಶೋಕ್, ಶಾಲಿನಿ ವಿದ್ಯಾ  ಶಾಲೆ ಸಂಸ್ಥಾಪಕ ನಂಜುಂಡೇಗೌಡರು, ಪುರಸಭೆ ಮುಖ್ಯ ಅಧಿಕಾರಿ ಯತೀಶ್ ಕುಮಾರ್, ಸಮಾಜ ಸೇವಕ ಮನೋಹರ್ ಸೇರಿದಂತೆ ಇತರರು ಹಾಜರಿದ್ದರು.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0
suddikirana ಸುದ್ದಿ ಕಿರಣ ಟಿವಿ ಬಾಳಿನ ಬೆಳಕು ಕರ್ನಾಟಕದ ಮಾಹಿತಿ ಮನರಂಜನಾ ಚಾನೆಲ್ ಆಗಿದೆ. ಇದು ಮನರಂಜನೆಯ ಜೊತೆಗೆ ಇತ್ತೀಚಿನ ಸುದ್ದಿ ಮತ್ತು ಮಾಹಿತಿಯನ್ನು ವೀಕ್ಷಕರಿಗೆ ತೋರುತ್ತಿದೆ. ಮತ್ತು ಸಮಾಜವು ತೆಗೆದುಕೊಳ್ಳುವ ದಿಕ್ಕು ಮಾಹಿತಿಯಿಂದ ಪ್ರಭಾವಿತವಾಗಿರುತ್ತದೆ ಎಂದು ನಾವು ಅರ್ಥಮಾಡಿಕೊಂಡಿದ್ದೇವೆ. ಸುದ್ದಿ ಕಿರಣ ಟಿವಿ ಹಲವು ವಿಷಯಗಳಲ್ಲಿ ಪ್ರವರ್ತಕವಾಗಿದೆ. ಇದು ತನಿಖಾ ಪತ್ರಿಕೋದ್ಯಮ. ಮತ್ತು ತಾಂತ್ರಿಕ ಕೈಗಾರಿಕೆಗಳ ವೃತ್ತಿಪರರಿಂದ ಪ್ರಚಾರ ಮಾಡಲ್ಪಟ್ಟ ಚಾನೆಲ್ ಆಗಿದೆ. ಸುದ್ದಿ ಕಿರಣ ಟಿವಿ ಇತ್ತೀಚಿನ ತಂತ್ರಜ್ಞಾನಗಳೊಂದಿಗೆ ಗುಣಮಟ್ಟದ ಸಂಪನ್ಮೂಲಗಳನ್ನು ಸಂಯೋಜಿಸಲು ಪ್ರಯತ್ನಿಸುತ್ತದೆ. Chief Editor B.S.Mallikarjuna Reddy # 560, 3ನೇ ಮಹಡಿ, 1ನೇ ಮುಖ್ಯ ರಸ್ತೆ, ಯಶವಂತಪುರ ಬೆಂಗಳೂರು-560022., Email: suddikiranatv@gmail.com Email:suddikiranaa@gmail.com www.suddikirana.com ಸುದ್ದಿ ಮತ್ತು ಜಾಹೀರಾತಿಗಳಿಗಾಗಿ ಸಂಪರ್ಕಿಸಿ ಕಛೇರಿ 08041505268 ಸಂಚಾರಿ ವಾಣಿ 9686665456