ಶಾಸಕ ದಿನೇಶ್ ಗುಂಡೂರಾವ್ ಸಚಿವ ಸ್ಥಾನ ಕೈ ತಪ್ಪಿದ ಹಿನ್ನಲೆ: ಕಾರ್ಯಕರ್ತರು, ಬ್ರಾಹ್ಮಣ ಮುಖಂಡರಿಂದ ಪ್ರತಿಭಟನೆ
ಬೆಂಗಳೂರು: ಕೆಪಿಸಿಸಿ ಕಛೇರಿ, ಗಾಂಧಿನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ದಿನೇಶ್ ಗುಂಡೂರಾವ್ ಅವರಿಗೆ ಸಚಿವ ಸ್ಥಾನ ಕೈತಪ್ಪಿದ ಹಿನ್ನಲೆಯಲ್ಲಿ ಗಾಂಧಿನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಹಾಗೂ ಬ್ರಾಹ್ಮಣ ಸಮುದಾಯದ ಮುಖಂಡರಿಂದ ಪ್ರತಿಭಟನೆ.
ಗಾಂಧಿನಗರ ವಿಧಾನಸಭಾ ಕ್ಷೇತ್ರದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಉಮೇಶ್, ಕಾಟನ್ ಪೇಟೆ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಶ್ರೀನಿವಾಸಮೂರ್ತಿ, ಗಾಂಧಿನಗರ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಸರವಣನ್, ಮಾಜಿ ಬಿಬಿಎಂಪಿ ಸದಸ್ಯರುಗಳಾದ ಸತ್ಯನಾರಾಯಣ್, ಮಲ್ಲೇಶ್, ಕ್ವೀನ್ ಎಲಿಜಬತ್ ಕಾಂಗ್ರೆಸ್ ಪಕ್ಷದ ಮುಖಂಡರುಗಳಾದ ನವೀನ್ ಕುಮಾರ್ ರಾಥೋಡ್, ರಾಜ್ ಕಾರ್ತಿಕ್, ಗಾಂಧಿನಗರ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಹರೀಶ್ ವಿ. ಮತ್ತು ಅಖಿಲ ಕರ್ನಾಟಕ ಹಿಂದೂ ದೇವಾಲಯಗಳ ಅರ್ಚಕರ ಅಗಮಿಕರ ಉಪಾಧಿಂತರ ಒಕ್ಕೂಟ ಮುಖ್ಯ ಪ್ರಧಾನ ಕಾರ್ಯದರ್ಶಿ ಡಾ.ಕೆ.ಎಸ್.ಎನ್.ದೀಕ್ಷಿತ್, ಚಿಕ್ಕಬಳ್ಳಾಪುರ ಬ್ರಾಹ್ಮಣ ಮಹಾಸಭಾ ಜಿಲ್ಲಾ ಪ್ರತಿನಿಧಿ ಪಿ.ಆರ್.ಪ್ರಕಾಶ್, ವಿಪ್ರ ಮುಖಂಡರುಗಳಾದ ಎಲ್.ಜಯಸಿಂಹ ಭಾರದ್ವಾಜ್, ನಾಗಭೂಷಣ್ ರಾವ್ ಕೆ. ಮತ್ತು ನೂರಾರು ಜನರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ರಾಜ್ಯದಲ್ಲಿ ಬ್ರಾಹ್ಮಣ ಸಮುದಾಯ ಅಂದಾಜು 25ರಿಂದ 30ಲಕ್ಷದಷ್ಟು ಜನಸಂಖ್ಯೆ ಇದೆ. ವಿಧಾನಸಭೆಯಲ್ಲಿ ಯಾವುದೇ ಸರ್ಕಾರ ಆಡಳಿತಕ್ಕೆ ಬಂದರು ಬ್ರಾಹ್ಮಣ ಸಮುದಾಯದವರಿಗೆ ಸಚಿವ ಸ್ಥಾನ ಸಿಗುತ್ತಿತ್ತು ಅದರೆ ಮೊದಲ ಬಾರಿಗೆ ಬ್ರಾಹ್ಮಣ ಸಮುದಾಯದವರಿಗೆ ಸಚಿವ ಸ್ಥಾನ ಸಿಗದಿರುವುದು ಅಕ್ರೋಶಕ್ಕೆ ಕಾರಣವಾಗಿದೆ.
ಗಾಂಧಿನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ದಿನೇಶ್ ಗುಂಡೂರಾವ್ 6 ಬಾರಿ ಶಾಸಕರಾಗಿ, ಕೆಪಿಸಿಸಿ ಅಧ್ಯಕ್ಷರಾಗಿ ಮತ್ತು ಎರಡು ಬಾರಿ ಸಚಿವರಾಗಿ ಕಳೆದ 45 ವರ್ಷಗಳಿಂದಲೂ ಕಾಂಗ್ರೆಸ್ ಪಕ್ಷಕ್ಕೆ ಗುಂಡೂರಾವ್ ರವರ ಕುಟುಂಬ ನಿಷ್ಠೆ ತೋರಿದೆ.
ಸರಳ ಸಜ್ಞನ ರಾಜಕಾರಣಿ, ಎಲ್ಲ ಧರ್ಮ, ಜಾತಿಯ ಜನರ ಜೊತೆಯಲ್ಲಿ ಉತ್ತಮ ಭಾಂದವ್ಯ ಹಾಗೂ ಪಕ್ಷ ಸಂಘಟನೆಯಲ್ಲಿ ಉತ್ತಮ ಸಂಘಟಕರಾಗಿ ರಾಜ್ಯದಲ್ಲಿ ಉತ್ತಮ ಹೆಸರುಗಳಿಸಿರುವ ದಿನೇಶ್ ಗುಂಡೂರಾವ್ ರವರಿಗೆ ಸಚಿವ ಸ್ಥಾನ ಸಿಗದಿರುವುದು ಅಸಂಖ್ಯಾತ ಕಾರ್ಯಕರ್ತರು, ಸಾರ್ವಜನಿಕರು ಮತ್ತು ಬ್ರಾಹ್ಮಣ ಸಮುದಾಯದ ಜನರಿಗೆ ಬಹಳ ನೋವುಂಟಾಗಿದೆ.
ಸಾಮಾಜಿಕ ನ್ಯಾಯ ಏನ್ನುವ ಪಕ್ಷ ಬ್ರಾಹ್ಮಣ ಸಮುದಾಯಕ್ಕೆ ಅನ್ಯಾಯ ಮಾಡಿದೆ. ಬ್ಯಾಹ್ಮಣ ಸಮುದಾಯಕ್ಕೆ ಅನ್ಯಾಯ ಮಾಡಿದರೆ ದೇಶಾದ್ಯಂತ ಇರುವ ಬ್ರಾಹ್ಮಣ ಮತದಾರರು ಕಾಂಗ್ರೆಸ್ ಪಕ್ಷದ ವಿರುದ್ದ ತಿರುಗಿ ಬೀಳುವ ಸಾಧ್ಯತೆ ಇದೆ. ಅನ್ಯಾಯ ಸರಿಪಡಿಸಿ ಬ್ರಾಹ್ಮಣ ಸಮುದಾಯದ ದಿನೇಶ್ ಗುಂಡೂರಾವ್ ರವರಿಗೆ ನ್ಯಾಯ ಒದಗಿಸಬೇಕು ಎಂದು ಅಗ್ರಹಿಸಿದರು.
ಗಾಂಧಿನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದಿಂದ ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ.ಹರಿಪ್ರಸಾದ್ ರವರಿಗೆ ಮನವಿ ಪತ್ರ ಸಲ್ಲಿಸಿದರು ನಿಮ್ಮ ಮನವಿ ಪತ್ರವನ್ನು ರಾಹುಲ್ ಗಾಂಧಿ, ಎ.ಐ.ಸಿ.ಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ್ ಖರ್ಗೆ, ಉಸ್ತುವಾರಿ ವೇಣುಗೋಪಾಲ್ ರವರಿಗೆ ನಿಮ್ಮ ಮನವಿ ಪತ್ರ ತಲುಪಿಸುತ್ತೇನೆ ಬಿ.ಕೆ.ಹರಿಪ್ರಸಾದ್ ರವರು ತಿಳಿಸಿದರು