ಶಾಸಕಿ ರೂಪಕಲಾ ಅವರಿಗೆ ಸಚಿವ ಸ್ಥಾನ ನೀಡಬೇಕು: ಕಾಂಗ್ರೆಸ್ ಹಿರಿಯ ಮುಖಂಡ ಎಂ.ಬಿ.ಎ. ಕೃಷ್ಣಪ್ಪ ಒತ್ತಾಯ

May 30, 2026 - 11:09
 0  40
ಶಾಸಕಿ ರೂಪಕಲಾ ಅವರಿಗೆ ಸಚಿವ ಸ್ಥಾನ ನೀಡಬೇಕು: ಕಾಂಗ್ರೆಸ್ ಹಿರಿಯ ಮುಖಂಡ ಎಂ.ಬಿ.ಎ. ಕೃಷ್ಣಪ್ಪ ಒತ್ತಾಯ

     ಬೇತಮಂಗಲ: ರಾಜ್ಯ ಸರ್ಕಾರದಲ್ಲಿ ಸಚಿವ ಸಂಪುಟ ರಚನೆಯಲ್ಲಿ ಕೆಜಿಎಫ್ ಕ್ಷೇತ್ರದ ಶಾಸಕಿ ರೂಪಕಲಾ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಕಾಂಗ್ರೆಸ್ ಹಿರಿಯ ಮುಖಂಡ ಕೃಷ್ಣಪ್ಪ ಒತ್ತಾಯಿಸಿದ್ದಾರೆ.

ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಶಾಸಕಿ ರೂಪಕಲಾ ಅವರು ಕ್ಷೇತ್ರದ ಅಭಿವೃದ್ಧಿಗೆ ನಿರಂತರವಾಗಿ ಶ್ರಮಿಸುತ್ತಿದ್ದು, ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡುತ್ತಿದ್ದಾರೆ. ಅವರ ಸೇವೆ ಮತ್ತು ಪಕ್ಷದ ಮೇಲಿನ ನಿಷ್ಠೆಯನ್ನು ಪರಿಗಣಿಸಿ ಸಚಿವ ಸ್ಥಾನ ನೀಡುವುದು ಸೂಕ್ತ ಎಂದು ಅಭಿಪ್ರಾಯಪಟ್ಟರು.

ಕೆಜಿಎಫ್ ಕ್ಷೇತ್ರಕ್ಕೆ ಸಚಿವ ಸ್ಥಾನ ದೊರೆತರೆ ಅಭಿವೃದ್ಧಿ ಕಾಮಗಾರಿಗಳಿಗೆ ಹೆಚ್ಚಿನ ವೇಗ ಸಿಗಲಿದ್ದು, ಜನರ ನಿರೀಕ್ಷೆಗಳನ್ನು ಈಡೇರಿಸಲು ಸಹಕಾರಿಯಾಗಲಿದೆ ಎಂದು  ಹೇಳಿದರು.

ಪಕ್ಷದ ವರಿಷ್ಠ ನಾಯಕರು ಹಾಗೂ ಕೇವಲ ಇನ್ನೂ ಕೆಲವೇ ದಿನಗಳಲ್ಲಿ ಮುಖ್ಯಮಂತ್ರಿಯಾಗುವ  ಡಿಕೆ ಶಿವಕುಮಾರ್ ಸಂಪುಟದಲ್ಲಿ ಶಾಸಕಿ ರೂಪಕಲಾ ಅವರನ್ನು ಪರಿಗಣಿಸಿ, ಅವರಿಗೆ ಸಚಿವ ಸ್ಥಾನ ನೀಡುವ ಮೂಲಕ ಕ್ಷೇತ್ರದ ಜನರ ಆಶಯವನ್ನು ಈಡೇರಿಸಬೇಕು ಎಂದು ಕಾಂಗ್ರೆಸ್ ಹಿರಿಯ ಮುಖಂಡ ಎಂಬಿಎ ಕೃಷ್ಣಪ್ಪ ಮನವಿ ಮಾಡಿದರು.

What's Your Reaction?

like

dislike

love

funny

angry

sad

wow

suddikirana ಸುದ್ದಿ ಕಿರಣ ಟಿವಿ ಬಾಳಿನ ಬೆಳಕು ಕರ್ನಾಟಕದ ಮಾಹಿತಿ ಮನರಂಜನಾ ಚಾನೆಲ್ ಆಗಿದೆ. ಇದು ಮನರಂಜನೆಯ ಜೊತೆಗೆ ಇತ್ತೀಚಿನ ಸುದ್ದಿ ಮತ್ತು ಮಾಹಿತಿಯನ್ನು ವೀಕ್ಷಕರಿಗೆ ತೋರುತ್ತಿದೆ. ಮತ್ತು ಸಮಾಜವು ತೆಗೆದುಕೊಳ್ಳುವ ದಿಕ್ಕು ಮಾಹಿತಿಯಿಂದ ಪ್ರಭಾವಿತವಾಗಿರುತ್ತದೆ ಎಂದು ನಾವು ಅರ್ಥಮಾಡಿಕೊಂಡಿದ್ದೇವೆ. ಸುದ್ದಿ ಕಿರಣ ಟಿವಿ ಹಲವು ವಿಷಯಗಳಲ್ಲಿ ಪ್ರವರ್ತಕವಾಗಿದೆ. ಇದು ತನಿಖಾ ಪತ್ರಿಕೋದ್ಯಮ. ಮತ್ತು ತಾಂತ್ರಿಕ ಕೈಗಾರಿಕೆಗಳ ವೃತ್ತಿಪರರಿಂದ ಪ್ರಚಾರ ಮಾಡಲ್ಪಟ್ಟ ಚಾನೆಲ್ ಆಗಿದೆ. ಸುದ್ದಿ ಕಿರಣ ಟಿವಿ ಇತ್ತೀಚಿನ ತಂತ್ರಜ್ಞಾನಗಳೊಂದಿಗೆ ಗುಣಮಟ್ಟದ ಸಂಪನ್ಮೂಲಗಳನ್ನು ಸಂಯೋಜಿಸಲು ಪ್ರಯತ್ನಿಸುತ್ತದೆ. Chief Editor B.S.Mallikarjuna Reddy # 560, 3ನೇ ಮಹಡಿ, 1ನೇ ಮುಖ್ಯ ರಸ್ತೆ, ಯಶವಂತಪುರ ಬೆಂಗಳೂರು-560022 Email: suddikiranatv@gmail.com Email:suddikiranaa@gmail.com www.suddikirana.com ಸುದ್ದಿ ಮತ್ತು ಜಾಹೀರಾತಿಗಳಿಗಾಗಿ ಸಂಪರ್ಕಿಸಿ ಕಛೇರಿ:08041505268 , 9686665456 #suddikiranatv #suddikiranaott