ಶಿಕ್ಷಕರ ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ-ಎಸ್‌.ಎಫ್‌.ಐ ಜಿಲ್ಲಾ ಸಮಿತಿ ಸಾಥ್

Nov 23, 2025 - 15:18
 0  15
ಶಿಕ್ಷಕರ ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ-ಎಸ್‌.ಎಫ್‌.ಐ ಜಿಲ್ಲಾ ಸಮಿತಿ ಸಾಥ್

ಬಾಗೇಪಲ್ಲಿ: ಬಾಲಕರ ಸರ್ಕಾರಿ ಶಾಲೆ ಮುಖ್ಯಶಿಕ್ಷಕರು ವಿದ್ಯಾರ್ಥಿಗಳಿಗೆ ಸೌಲಭ್ಯ ಕಲ್ಪಿಸುತ್ತಿಲ್ಲ ಜೊತೆಗೆ ಮಧ್ಯಾಹ್ನ ಬಿಸಿಯೂಟ ಸಮರ್ಪಕವಾಗಿ ವಿತರಣೆ ಮಾಡುತ್ತಿಲ್ಲವೆಂದು ಆರೋಪಿಸಿ ಎಸ್‌.ಎಫ್‌.ಐ ಜಿಲ್ಲಾ ಸಮಿತಿ ನೇತೃತ್ವದಲ್ಲಿ ವಿದ್ಯಾರ್ಥಿಗಳು ಕ್ಷೇತ್ರಶಿಕ್ಷಣಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.

ಪಟ್ಟಣದ ಡಾ.ಎಚ್‌.ಎನ್. ವೃತ್ತದಿಂದ ಹೊರಟ ಮುಖಂಡರು, ವಿದ್ಯಾರ್ಥಿಗಳು ಡಿವಿಜಿ ಮುಖ್ಯರಸ್ತೆಯಲ್ಲಿ ಪ್ರತಿಭಟನಾ ಮೆರವಣಿಗೆ ಮಾಡಿ ಮಾತನಾಡಿದ ಅವರು ಎಸ್‌ಎಫ್‌ಐ ಜಿಲ್ಲಾ ಸಮಿತಿ ಅಧ್ಯಕ್ಷ ಎ.ಸೋಮಶೇಖರ ಪಟ್ಟಣದ ಸರ್ಕಾರಿ ಪ್ರೌಢಶಾಲೆಗೆ ಇತಿಹಾಸ ಇದೆ. ಅನೇಕ ಹಿರಿಯ ಶಿಕ್ಷಕ, ಶಿಕ್ಷಕಿಯರು ಸೇವೆ ಸಲ್ಲಿಸಿದ್ದಾರೆ. ಇಂತಹಾ ಶಾಲೆಗೆ ಕಳಂಕ ತಂದಿರುವುದು ಶೋಚನೀಯ, ಶಾಲೆಯಲ್ಲಿ 280 ವಿದ್ಯಾರ್ಥಿಗಳು ಇದ್ದಾರೆ. ಶಾಲೆಯ ಪ್ರಭಾರ ಮುಖ್ಯಶಿಕ್ಷಕ ವಿ.ವೆಂಕಟೇಶ್ ಸರ್ಕಾರದ ಸೌಲಭ್ಯ ಕಲ್ಪಿಸಿಲ್ಲ. ಮಧ್ಯಾಹ್ನದ ಬಿಸಿಯೂಟ ಮಕ್ಕಳಿಗೆ ಸಮರ್ಪಕವಾಗಿ ವಿತರಣೆ ಮಾಡಿಸುತ್ತಿಲ್ಲ. ಪಡಿತರ ವಸ್ತುಗಳನ್ನು ಹೊರಗೆ ಸಾಗಿಸುತ್ತಿದ್ದಾ-ಪೆ. ಬಾಳೆಹಣ್ಣು ಹಾಗೂ ಮೊಟ್ಟೆಗಳನ್ನು ಸರಿಯಾಗಿ ವಿತರಿಸುತ್ತಿಲ್ಲ ಎಂದು ಆರೋಪಿಸಿದರು.

ಮಕ್ಕಳು ಇಲ್ಲದೇ ಸರ್ಕಾರಿ ಶಾಲೆಗಳನ್ನು ಮುಚ್ಚುವ ಹಂತದಲ್ಲಿ ಇದೆ. ಆದರೆ ವಿದ್ಯಾರ್ಥಿಗಳು ಇದ್ದರೂ, ಸರ್ಕಾರದಿಂದ ವಿತರಣೆ ಆಗಿರುವ ಸೌಲಭ್ಯಗಳನ್ನು ಮಕ್ಕಳಿಗೆ ತಲುಪಿಸದ ಪ್ರಭಾರ ಮುಖ್ಯಶಿಕ್ಷಕನ ವಿರುದ್ಧ ಶಿಸ್ತುಕ್ರಮ ಜರುಗಿಸಬೇಕು. ಕೂಡಲೇ ವರ್ಗಾವಣೆ ಮಾಡಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನಾ ಸ್ಥಳಕ್ಕೆ ತಾಲ್ಲೂಕು ಪ್ರಭಾರ ಕ್ಷೇತ್ರಶಿಕ್ಷಣಾಧಿಕಾರಿ ವೆಂಕಟರಾಮಪ್ಪ ಆಗಮಿಸಿ ಸಮಸ್ಯೆ ಆಲಿಸಿದರು. ಪ್ರೌಢಶಾಲೆಗೆ ಭೇಟಿ ಮಾಡಿ, ಪರಿಶೀಲನೆ ಮಾಡಲಾಗುವುದು. ಮುಖ್ಯ-ಶಿಕ್ಷಕರ ಜತೆ ಚರ್ಚಿಸಲಾಗುವುದು ಎಂದು ಭರವಸೆ ನೀಡಿದರು.

ನಂತರ ಬಾಲಕರ ಸರ್ಕಾರಿ ಪ್ರೌಢಶಾಲೆಗೆ ತಾಲ್ಲೂಕು ಪ್ರಭಾರ ಕ್ಷೇ-ತ್ರಶಿಕ್ಷಣಾಧಿಕಾರಿ ವೆಂಕಟರಾಮಪ್ಪ, ಶಿಕ್ಷಣ ಅಧಿಕಾರಿ ಎನ್.ಶಿವಪ್ಪ, ಪಿ.ಎನ್‌. ನಾರಾಯಣಸ್ವಾಮಿ, ಮಂಜುನಾಥ್ ಭೇಟಿ ಮಾಡಿದರು. ಅಡುಗೆಕೋ-ಣೆಯಲ್ಲಿ ಇದ್ದ ಪಡಿತರ ವಸ್ತುಗಳನ್ನು ಪರಿಶೀಲನೆ ಮಾಡಿದರು. ಮುಖ್ಯಶಿ-ಕ್ಷಕರ ಜತೆ ಚರ್ಚೆ ಮಾಡಿ, ಮುಂದಿನ ದಿನಗಳಲ್ಲಿ ಸೌಲಭ್ಯಗಳನ್ನು ಮಕ್ಕಳಿಗೆ ತಲುಪಿಸಬೇಕು ಎಂದು ಎಚ್ಚರಿಕೆ ನೀಡಿದರು.

ಈ ಸಂಧರ್ಭದಲ್ಲಿ ಎಸ್‌ಎಫ್‌ಐ ತಾಲ್ಲೂಕು ಸಮಿತಿ ಜಿ.ಸೋಮಶೇಖರ, ಡಿವೈಎಫ್‌ಐ ಮುಖಂಡ ಇಮ್ರಾನ್  ಸೇರಿದಂತೆ ನೂರಾರು ವಿದ್ಯಾರ್ಥಿಗಳು ಇದ್ದರು.

What's Your Reaction?

Like Like 1
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0
suddikirana ಸುದ್ದಿ ಕಿರಣ ಟಿವಿ ಬಾಳಿನ ಬೆಳಕು ಕರ್ನಾಟಕದ ಮಾಹಿತಿ ಮನರಂಜನಾ ಚಾನೆಲ್ ಆಗಿದೆ. ಇದು ಮನರಂಜನೆಯ ಜೊತೆಗೆ ಇತ್ತೀಚಿನ ಸುದ್ದಿ ಮತ್ತು ಮಾಹಿತಿಯನ್ನು ವೀಕ್ಷಕರಿಗೆ ತೋರುತ್ತಿದೆ. ಮತ್ತು ಸಮಾಜವು ತೆಗೆದುಕೊಳ್ಳುವ ದಿಕ್ಕು ಮಾಹಿತಿಯಿಂದ ಪ್ರಭಾವಿತವಾಗಿರುತ್ತದೆ ಎಂದು ನಾವು ಅರ್ಥಮಾಡಿಕೊಂಡಿದ್ದೇವೆ. ಸುದ್ದಿ ಕಿರಣ ಟಿವಿ ಹಲವು ವಿಷಯಗಳಲ್ಲಿ ಪ್ರವರ್ತಕವಾಗಿದೆ. ಇದು ತನಿಖಾ ಪತ್ರಿಕೋದ್ಯಮ. ಮತ್ತು ತಾಂತ್ರಿಕ ಕೈಗಾರಿಕೆಗಳ ವೃತ್ತಿಪರರಿಂದ ಪ್ರಚಾರ ಮಾಡಲ್ಪಟ್ಟ ಚಾನೆಲ್ ಆಗಿದೆ. ಸುದ್ದಿ ಕಿರಣ ಟಿವಿ ಇತ್ತೀಚಿನ ತಂತ್ರಜ್ಞಾನಗಳೊಂದಿಗೆ ಗುಣಮಟ್ಟದ ಸಂಪನ್ಮೂಲಗಳನ್ನು ಸಂಯೋಜಿಸಲು ಪ್ರಯತ್ನಿಸುತ್ತದೆ. Chief Editor B.S.Mallikarjuna Reddy # 560, 3ನೇ ಮಹಡಿ, 1ನೇ ಮುಖ್ಯ ರಸ್ತೆ, ಯಶವಂತಪುರ ಬೆಂಗಳೂರು-560022., Email: suddikiranatv@gmail.com Email:suddikiranaa@gmail.com www.suddikirana.com ಸುದ್ದಿ ಮತ್ತು ಜಾಹೀರಾತಿಗಳಿಗಾಗಿ ಸಂಪರ್ಕಿಸಿ ಕಛೇರಿ 08041505268 ಸಂಚಾರಿ ವಾಣಿ 9686665456