ಶಿಕ್ಷಣಕ್ಕೆ ಹೆಚ್ಚು ಆದ್ಯತೆ ಕೊಡಿ ಶಾಸಕ ಕೋನರಡ್ಡಿ se

Mar 6, 2026 - 00:00
 0  42
ಶಿಕ್ಷಣಕ್ಕೆ ಹೆಚ್ಚು ಆದ್ಯತೆ ಕೊಡಿ ಶಾಸಕ ಕೋನರಡ್ಡಿ se
ಸುದ್ದಿ ಕಿರಣ ನ್ಯೂಸ್ ಡೆಸ್ಕ್

ನವಲಗುಂದ : ಗ್ರಾಮೀಣ ಭಾಗದಲ್ಲಿಯೂ ಕೂಡಾ ಶಿಕ್ಷಣಕ್ಕೆ ಹೆಚ್ಚು ಆದ್ಯತೆ ಕೊಟ್ಟು,ಶೈಕ್ಷಣಿಕ ಪ್ರಗತಿಯ ಜೊತೆಗೆ ಸರ್ವಾಂಗೀಣ ಅಭಿವೃದ್ಧಿಗೆ ಸರಕಾರ ಹಲವು ಯೋಜನೆಗಳನ್ನು ಜಾರಿಗೊಳಿಸಿದೆ ಎಂದು ಶಾಸಕ ಶ್ರೀ ಎನ್.ಎಚ್. ಕೋನರಡ್ಡಿ ಹೇಳಿದರು.

       ತಾಲೂಕಿನ ಕಡದಳ್ಳಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ವಾರ್ಷಿಕೋತ್ಸವ ಹಾಗೂ ಎಂಟನೆಯ ವರ್ಗದ ವಿದ್ಯಾರ್ಥಿಗಳ ಬೀಳ್ಕೊಡುವ ಸಮಾರಂಭ ಉದ್ಘಾಟಿಸಿ ಮಾತನಾಡಿದರು.

       ಮುಖ್ಯ ಅತಿಥಿಗಳಾಗಿ ತಹಶೀಲ್ದಾರ ಸುಧೀರ ಸಾಹುಕಾರ, ತಾ. ಪಂ ಕಾರ್ಯ ನಿರ್ವಾಹಕ ಅಧಿಕಾರಿ ಪಿ. ಆರ್. ಬಡೇಖಾನವರ,ಮಲಪ್ರಭಾ ನೀರು ಬಳಕೆದಾರರ ಸಂಘದ ಅಧ್ಯಕ್ಷ ಸದುಗೌಡ ಪಾಟೀಲ,ನಾಗನೂರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ನಿಂಗರಡ್ಡಿ ಕರಮಳ್ಳಿ ಆಗಮಿಸಿದ್ದರು.

ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷ ಕಲ್ಲಪ್ಪ ಕುಂಬಾರ ಅಧ್ಯಕ್ಷತೆ ವಹಿಸಿದ್ದರು. 

      ಪ್ರಧಾನ ಗುರುಗಳಾದ ಬಿ.ಕೆ.ಹಾಲವರ, ಹಿರಿಯ ಶಿಕ್ಷಕ ಡಾ. ಸಿದ್ಧಲಿಂಗೇಶ ಹಂಡಿಗಿ, ಸುನಂದಾ ಕುಂಬಾರ, ಜ್ಯೋತಿ ಉಪ್ಪಾರ, ಬಸವರಾಜ ಸಾಲಿಮಠ, ಗಣ್ಯರಾದ ಕಲ್ಲೋಳೆಪ್ಪ ಕರಿಕಟ್ಟಿ, ರುದ್ರಪ್ಪ ಕುಂಬಾರ, ಕಲ್ಲನಗೌಡ ಗುರನಗೌಡ್ರ, ಭೀಮಪ್ಪ ಕೊಳ್ಳಾರ, ಅಲ್ಲಾಸಾಬ ಕಲ್ಲಕುಟ್ರಿ, ಹೆಬ್ಬೆಳ್ಳೆವ್ವ ಮಾದರ, ದಾಕ್ಷಾಯಿಣಿ ಬಡಿಗೇರ ಮುಂತಾದವರು ಉಪಸ್ಥಿತರಿದ್ದರು.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0
suddikirana ಸುದ್ದಿ ಕಿರಣ ಟಿವಿ ಬಾಳಿನ ಬೆಳಕು ಕರ್ನಾಟಕದ ಮಾಹಿತಿ ಮನರಂಜನಾ ಚಾನೆಲ್ ಆಗಿದೆ. ಇದು ಮನರಂಜನೆಯ ಜೊತೆಗೆ ಇತ್ತೀಚಿನ ಸುದ್ದಿ ಮತ್ತು ಮಾಹಿತಿಯನ್ನು ವೀಕ್ಷಕರಿಗೆ ತೋರುತ್ತಿದೆ. ಮತ್ತು ಸಮಾಜವು ತೆಗೆದುಕೊಳ್ಳುವ ದಿಕ್ಕು ಮಾಹಿತಿಯಿಂದ ಪ್ರಭಾವಿತವಾಗಿರುತ್ತದೆ ಎಂದು ನಾವು ಅರ್ಥಮಾಡಿಕೊಂಡಿದ್ದೇವೆ. ಸುದ್ದಿ ಕಿರಣ ಟಿವಿ ಹಲವು ವಿಷಯಗಳಲ್ಲಿ ಪ್ರವರ್ತಕವಾಗಿದೆ. ಇದು ತನಿಖಾ ಪತ್ರಿಕೋದ್ಯಮ. ಮತ್ತು ತಾಂತ್ರಿಕ ಕೈಗಾರಿಕೆಗಳ ವೃತ್ತಿಪರರಿಂದ ಪ್ರಚಾರ ಮಾಡಲ್ಪಟ್ಟ ಚಾನೆಲ್ ಆಗಿದೆ. ಸುದ್ದಿ ಕಿರಣ ಟಿವಿ ಇತ್ತೀಚಿನ ತಂತ್ರಜ್ಞಾನಗಳೊಂದಿಗೆ ಗುಣಮಟ್ಟದ ಸಂಪನ್ಮೂಲಗಳನ್ನು ಸಂಯೋಜಿಸಲು ಪ್ರಯತ್ನಿಸುತ್ತದೆ. Chief Editor B.S.Mallikarjuna Reddy # 560, 3ನೇ ಮಹಡಿ, 1ನೇ ಮುಖ್ಯ ರಸ್ತೆ, ಯಶವಂತಪುರ ಬೆಂಗಳೂರು-560022., Email: suddikiranatv@gmail.com Email:suddikiranaa@gmail.com www.suddikirana.com ಸುದ್ದಿ ಮತ್ತು ಜಾಹೀರಾತಿಗಳಿಗಾಗಿ ಸಂಪರ್ಕಿಸಿ ಕಛೇರಿ 08041505268 ಸಂಚಾರಿ ವಾಣಿ 9686665456