ಶಿವಕುಮಾರ ಸ್ವಾಮೀಜಿ ರವರ ಪುಣ್ಯ ಸ್ಮರಣೆಯ ಪ್ರಯುಕ್ತ ದೇವಾಲಯದಲ್ಲಿ ವಿಶೇಷ ಪೂಜೆ ಹಾಗೂ ಅನ್ನದಾಸೋಹ

ಶಿವಕುಮಾರ ಸ್ವಾಮೀಜಿ ರವರ ಪುಣ್ಯ ಸ್ಮರಣೆಯ ಪ್ರಯುಕ್ತ ದೇವಾಲಯದಲ್ಲಿ ವಿಶೇಷ ಪೂಜೆ ಹಾಗೂ ಅನ್ನದಾಸೋಹ

ಶಿವಕುಮಾರ ಸ್ವಾಮೀಜಿ ರವರ ಪುಣ್ಯ ಸ್ಮರಣೆಯ ಪ್ರಯುಕ್ತ ದೇವಾಲಯದಲ್ಲಿ ವಿಶೇಷ ಪೂಜೆ ಹಾಗೂ ಅನ್ನದಾಸೋಹ

ಕೋಲಾರ: ನಡೆದಾಡುವ ದೇವರು, ಕಾಯಕ ಯೋಗಿ, ತ್ರಿವಿಧ ದಾಸೋಹಿ ಸಿದ್ದಗಂಗಾಶ್ರೀಗಳ ಬದುಕಿನ ಹಾದಿ ನಮಗೆಲ್ಲಾ ಸ್ಫೂರ್ತಿಯ ಸೆಲೆಯಾಗಿದೆ. ನಾಡಿನಾದ್ಯಂತ ಅವರ ಪುಣ್ಯಸ್ಮರಣೆಯ ಕಾರ್ಯಕ್ರಮಗಳು ಅದ್ದೂರಿಯಾಗಿ ನಡೆದವು. ತಾಲೂಕಿನ ನರಸಾಪುರ ಗ್ರಾಮದಲ್ಲಿಯು ಡಾ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿರವರ 5ನೇ ವರ್ಷದ ಪುಣ್ಯಸ್ಮರಣೆಯನ್ನು ಭಾನುವಾರ ಹಮ್ಮಿಕೊಳ್ಳಲಾಗಿತ್ತು. ವೀರಶೈವ ಲಿಂಗಾಯತ ಸಮಿತಿ ವತಿಯಿಂದ ತಾಲೂಕಿನ ನರಸಾಪುರ ಗ್ರಾಮದಲ್ಲಿ ಆಯೋಜಿಸಿದ್ದ ಡಾ ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿ ರವರ ಐದನೇ ವರ್ಷದ ಪುಣ್ಯಸ್ಮರಣೆಯ ಪ್ರಯುಕ್ತ ದೇವಾಲಯದಲ್ಲಿ ವಿಶೇಷ ಪೂಜೆಗಳು ಹಾಗೂ ಭಕ್ತಾದಿಗಳಿಗೆ ಅನ್ನದಾಸೋಹ ನಡೆಯಿತು. ಕಾಯಕ ದಾಸೋಹದಿಂದ 111 ವರ್ಷಗಳ ಸಾರ್ಥಕ ಜೀವನ ಮಾಡಿದ ಸಂತ ಶಿಖಾಮಣಿ ಸಿದ್ದಗಂಗೆಯ ಶಿವಕುಮಾರ ಸ್ವಾಮೀಜಿ ಪುಣ್ಯಸ್ಮರಣೆಯನ್ನು ದಾಸೋಹ ದಿನವನ್ನಾಗಿ ಆಚರಣೆ ಮಾಡಲು ಮುಂದಾಗೋಣ ಎಂದು ವೀರಶೈವ ಲಿಂಗಾಯತ ಸಮಿತಿಯ ಪದಾಧಿಕಾರಿಗಳು ತಿಳಿಸಿದರು. ಡಾ.ಶ್ರೀ ಶಿವಕುಮಾರ ಸ್ವಾಮೀಜಿ ಪುಣ್ಯಸ್ಮರಣೆ ದಿನವನ್ನು ಸರಕಾರದಿಂದ ದಾಸೋಹ ದಿನವನ್ನಾಗಿ ಆಚರಿಸಲಾಗುತ್ತಿದೆ. ನಾಡಿನೆಲ್ಲೆಡೆ ಭಕ್ತರು, ಹಳೆಯ ವಿದ್ಯಾರ್ಥಿಗಳು ದಾಸೋಹ ಹಮ್ಮಿಕೊಂಡು ವಿಶೇಷ ರೀತಿಯಲ್ಲಿ ಶ್ರೀ ಸ್ಮರಣೆ ಮಾಡುತ್ತಿದ್ದಾರೆ. ಶಿವಕುಮಾರ ಸ್ವಾಮೀಜಿ ರವರ ಪುಣ್ಯ ಸ್ಮರಣೆಯ ಪ್ರಯುಕ್ತ ನರಸಾಪುರ ಗ್ರಾಮದ ವೀರಭದ್ರ ಸ್ವಾಮಿ ಹಾಗೂ ಬಾಣೇಶ್ವರ ಸ್ವಾಮಿ ದೇವಾಲಯದಲ್ಲಿ ರುದ್ರಭಿಷೇಕ ನೆರವೇರಿಸಿ ನಂತರ ಶಿವಕುಮಾರ ಸ್ವಾಮೀಜಿರವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಪೂಜೆ ಸಲ್ಲಿಸಿದರು ಹಾಗೂ ನೂರಾರು ಭಕ್ತಾದಿಗಳಿಗೆ ಅನ್ನದಾಸೋಹ ನೆರವೇರಿಸಿದರು. ಈ ಸಂದರ್ಭದಲ್ಲಿ ವೀರಶೈವ ಲಿಂಗಾಯತ ಸಮಿತಿಯ ಪದಾಧಿಕಾರಿಗಳು ಹಾಗೂ ಗ್ರಾಮಸ್ಥರು ಭಾಗವಹಿಸಿದ್ದರು.