ಶ್ರವಣಬೆಳಗೊಳದಲ್ಲಿ ಭಾನುವಾರ ಹಿಂದೂ ಸಮಾಜೋತ್ಸವ: ಹೆಚ್.ಸಿ.ಕೃಷ್ಣಮೂರ್ತಿ

Jan 22, 2026 - 16:15
 0  16
ಶ್ರವಣಬೆಳಗೊಳದಲ್ಲಿ ಭಾನುವಾರ ಹಿಂದೂ ಸಮಾಜೋತ್ಸವ: ಹೆಚ್.ಸಿ.ಕೃಷ್ಣಮೂರ್ತಿ

    ಚನ್ನರಾಯಪಟ್ಟಣ:  ಹಿಂದೂ ಸಮಾಜೋತ್ಸವ ಸಮಿತಿ ವತಿಯಿಂದ ದಿನಾಂಕ 25.01.2026 ನೇ ಭಾನುವಾರ ಬೆಳಿಗ್ಗೆ 11 ಗಂಟೆಗೆ ಶ್ರವಣಬೆಳಗೊಳದ ಬಾಹುಬಲಿ ಪಾಲಿಟೆಕ್ನಿಕ್ ಕಾಲೇಜು ಆವರಣದಲ್ಲಿ ಹಿಂದೂ ಸಮಾಜೋತ್ಸವ ಕಾರ್ಯಕ್ರಮ ನೆರವೇರಲಿದೆ ಎಂದು ಧರ್ಮ ಜಾಗರಣ ಸಮಿತಿ ಜಿಲ್ಲಾ ಸಂಯೋಜಕ ಹೆಚ್.ಸಿ.ಕೃಷ್ಣಮೂರ್ತಿ ಹೊಸಹಳ್ಳಿ ಹೇಳಿದರು.
      ಪಟ್ಟಣದ ಪತ್ರಕರ್ತರ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಭಾನುವಾರ ಬೆಳಗ್ಗೆ 9:30 ಗಂಟೆಗೆ ಶ್ರವಣಬೆಳಗೊಳದ ನಾಗಯ್ಯನಕೊಪ್ಪಲು ಸರ್ಕಲ್ ನಿಂದ ಶೋಭಯಾತ್ರೆ ಆರಂಭವಾಗಿ ಗೊಮ್ಮಟನಗರದ ಪಾಲಿಟೆಕ್ನಿಕ್ ಕಾಲೇಜು ಆವರಣದಲ್ಲಿರುವ ವೇದಿಕೆ ತಲುಪಲಿದೆ.

         ಈ ಕಾರ್ಯಕ್ರಮದಲ್ಲಿ ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಶ್ರೀ ಶ್ರೀ ಶ್ರೀ ಡಾ. ನಿಶ್ಚಲಾನಂದನಾಥ ಸ್ವಾಮೀಜಿಯವರು ದಿವ್ಯ ಸಾನಿಧ್ಯ ಮತ್ತು ಆಶೀರ್ವಚನ ನೀಡಲಿದ್ದು, ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರಿಯ ವಿಶ್ವವಿದ್ಯಾಲಯದ ಸಂಚಾಲಕರಾದ ರಾಜಯೋಗಿನಿ ಬಿ.ಕೆ.ಮೋಹನಕುಮಾರಿ ಮತ್ತು ಮೆಳಿಯಮ್ಮ ಆಧ್ಯಾತ್ಮಿಕ ಕೇಂದ್ರದ ಶ್ರೀ ಚಂದ್ರಶೇಖರ ಗುರೂಜಿ ರವರು ಉಪಸ್ಥಿತರಿದ್ದು, ವಿಶ್ವ ಹಿಂದೂ ಪರಿಷತ್ತಿನ ಪ್ರಾಂತ ಕಾರ್ಯದರ್ಶಿ ಶ್ರೀ ಶರತ್ ಪಂಪ್ವೆಲ್ ರವರು ದಿಕ್ಸೂಚಿ ಭಾಷಣ ಮಾಡಲಿದ್ದಾರೆ ಎಂದು ತಿಳಿಸಿದರು.
           ತಾಲೂಕು ಹಿಂದೂ ಸಮಾಜೋತ್ಸವ ಸಮಿತಿ ಉಪಾಧ್ಯಕ್ಷರಾದ ಹೆಚ್.ಎನ್.ಲೋಕೇಶ್ ಹಡೇನಹಳ್ಳಿ ಮಾತನಾಡಿ, ಹಿಂದುಗಳೆಲ್ಲ ಒಗ್ಗೂಡಿದರೆ ದೇಶದಲ್ಲಿ ಹಿಂದೂ ಸಂಸ್ಕೃತಿ ಹಾಗೂ ಧರ್ಮ ಬಲಿಷ್ಠಗೊಂಡು, ಸುಭದ್ರ ರಾಷ್ಟ್ರ ನಿರ್ಮಾಣ ಮಾಡುವ ಉದ್ದೇಶದಿಂದ ಹಾಗೂ ದೇಶದಲ್ಲಿ ನಡೆಯುತ್ತಿರುವ ಹಿಂದುಗಳ ಮೇಲಿನ ದೌರ್ಜನ್ಯಕ್ಕೆ ನಾವೆಲ್ಲರೂ ಒಗ್ಗೂಡಿಗರ ಮಾತ್ರ ಪರಿಹಾರ ದೊರೆಯಲಿದೆ. ನಮ್ಮ ದೇಶದಲ್ಲಿ ಬಹು ಪಾಲು ಜನರಿಗೆ ದೇಶ ಮತ್ತು ಧರ್ಮದ ಬಗ್ಗೆ ಅಭಿಮಾನ  ಇಲ್ಲದಿರುವುದೇ ಇಂದಿನ ಈ ಪರಿಸ್ಥಿತಿಗೆ ಕಾರಣವಾಗಿದ್ದು ಇದರ ಅರಿವು ಮೂಡಿಸುವ ಉದ್ದೇಶವೇ ಈ ಹಿಂದೂ ಸಮಾಜೋತ್ಸವದ ಮುಖ್ಯ ಉದ್ದೇಶವಾಗಿದೆ ಎಂದರು.

           ಶ್ರವಣಬೆಳಗೊಳ ಹಿಂದೂ ಸಮಾಜೋತ್ಸವ ಸಮಿತಿ ಸದಸ್ಯ ಮನುಗೌಡ ಮಾತನಾಡಿ, ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ ನೂರು ವರ್ಷ ತುಂಬಿದ ಸಹಸ್ರಾಬ್ದಿ  ಸಂದರ್ಭದಲ್ಲಿ ಇಡೀ ದೇಶಾದ್ಯಂತ ಹಿಂದೂ ಸಮಾಜವನ್ನು ಒಗ್ಗೂಡಿಸುವ ದೃಷ್ಟಿಯಿಂದ ಈ ಹಿಂದೂ ಸಮಾಜೋತ್ಸವ ಕಾರ್ಯಕ್ರಮಗಳನ್ನು ಇಡೀ ದೇಶದಲ್ಲಿ ಜಿಲ್ಲೆ, ತಾಲೂಕು ಹಾಗೂ ಹೋಬಳಿ ಮಟ್ಟದಲ್ಲೂ ಕಾರ್ಯಕ್ರಮ ಆಯೋಜನೆ ಮಾಡಿ ಸಂಘಟನೆ ಮಾಡಲಾಗುತ್ತಿದೆ.
         ಸುದ್ದಿಗೋಷ್ಠಿಯಲ್ಲಿ ಶ್ರವಣಬೆಳಗೊಳ ಹಿಂದೂ ಸಮಾಜೋತ್ಸವ ಆಯೋಜನಾ ಸಮಿತಿ ಸದಸ್ಯರಾದ ನಾಗೇಶ್ ಹಿರಿಬಿಳ್ತಿ, ಎಸ್.ಜೆ.ಭಾಸ್ಕರಾಚಾರ್, ಸತೀಶ್ ಹೊಸಹಳ್ಳಿ ಇದ್ದರು.

What's Your Reaction?

Like Like 1
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0
suddikirana ಸುದ್ದಿ ಕಿರಣ ಟಿವಿ ಬಾಳಿನ ಬೆಳಕು ಕರ್ನಾಟಕದ ಮಾಹಿತಿ ಮನರಂಜನಾ ಚಾನೆಲ್ ಆಗಿದೆ. ಇದು ಮನರಂಜನೆಯ ಜೊತೆಗೆ ಇತ್ತೀಚಿನ ಸುದ್ದಿ ಮತ್ತು ಮಾಹಿತಿಯನ್ನು ವೀಕ್ಷಕರಿಗೆ ತೋರುತ್ತಿದೆ. ಮತ್ತು ಸಮಾಜವು ತೆಗೆದುಕೊಳ್ಳುವ ದಿಕ್ಕು ಮಾಹಿತಿಯಿಂದ ಪ್ರಭಾವಿತವಾಗಿರುತ್ತದೆ ಎಂದು ನಾವು ಅರ್ಥಮಾಡಿಕೊಂಡಿದ್ದೇವೆ. ಸುದ್ದಿ ಕಿರಣ ಟಿವಿ ಹಲವು ವಿಷಯಗಳಲ್ಲಿ ಪ್ರವರ್ತಕವಾಗಿದೆ. ಇದು ತನಿಖಾ ಪತ್ರಿಕೋದ್ಯಮ. ಮತ್ತು ತಾಂತ್ರಿಕ ಕೈಗಾರಿಕೆಗಳ ವೃತ್ತಿಪರರಿಂದ ಪ್ರಚಾರ ಮಾಡಲ್ಪಟ್ಟ ಚಾನೆಲ್ ಆಗಿದೆ. ಸುದ್ದಿ ಕಿರಣ ಟಿವಿ ಇತ್ತೀಚಿನ ತಂತ್ರಜ್ಞಾನಗಳೊಂದಿಗೆ ಗುಣಮಟ್ಟದ ಸಂಪನ್ಮೂಲಗಳನ್ನು ಸಂಯೋಜಿಸಲು ಪ್ರಯತ್ನಿಸುತ್ತದೆ. Chief Editor B.S.Mallikarjuna Reddy # 560, 3ನೇ ಮಹಡಿ, 1ನೇ ಮುಖ್ಯ ರಸ್ತೆ, ಯಶವಂತಪುರ ಬೆಂಗಳೂರು-560022., Email: suddikiranatv@gmail.com Email:suddikiranaa@gmail.com www.suddikirana.com ಸುದ್ದಿ ಮತ್ತು ಜಾಹೀರಾತಿಗಳಿಗಾಗಿ ಸಂಪರ್ಕಿಸಿ ಕಛೇರಿ 08041505268 ಸಂಚಾರಿ ವಾಣಿ 9686665456