ಶ್ರೀ ಗುರು ಚನ್ನಬಸವೇಶ್ವರ ಸ್ವಾಮಿಯವ ಕಾರ್ತಿಕ ದೀಪೋತ್ಸವ

Nov 18, 2025 - 15:49
 0  4
ಶ್ರೀ ಗುರು ಚನ್ನಬಸವೇಶ್ವರ ಸ್ವಾಮಿಯವ ಕಾರ್ತಿಕ ದೀಪೋತ್ಸವ

  ಮಾಡಾಳು ಗ್ರಾಮದ  ಕೆರೆ ಏರಿ ಮೇಲಿ ನೆಲೆಸಿರುವ ಗ್ರಾಮದ ಆರಾಧ್ಯ ದೈವ ಶ್ರೀ ಗುರು ಚನ್ನಬಸವೇಶ್ವರ ಸ್ವಾಮಿಯವ ಕಾರ್ತಿಕ ದೀಪೋತ್ಸವ ನೂರಾರು ಭಕ್ತರ ಸಮ್ಮುಖದಲ್ಲಿ ಶ್ರದ್ಧಾ ಭಕ್ತಿಯಿಂದ ಸೋಮವಾರ ಸಂಜೆ ವಿಜೃಂಭಣೆಯಿಂದ ನಡೆಯಿತು

ನಮ್ಮಪೂರ್ವಜರು ಹಾಗೂ ಗುರುಹಿರಿಯರುಕಾರ್ತಿಕ ಮಾಸದಲ್ಲಿ ಭಕ್ತರೆಲ್ಲ ಸೇರಿ ದೇವಾಲಯಗಳಲ್ಲಿ  ಹಣತೆಗಳನ್ನು ಬೆಳಗಿಸಿಕೊಂಡು ಬರುತ್ತಿದ್ದರು 

ಸಂಪ್ರದಾಯದಂತೆ ಶ್ರೀ ಗುರು ಚನ್ನಬಸವೇಶ್ವರ ಸ್ವಾಮಿ ದೇವಾಲಯದಲ್ಲೂ ಸಹ ದೀಪುತ್ಸವ ಕಾರ್ಯಕ್ರಮವನ್ನುಹಮ್ಮಿಕೊಳ್ಳಲಾಗಿತ್ತು ದೇವಾಲಯವನ್ನು ತಳಿರು ತೋರಣ ಹಾಗೂ ಬಾಳೆ ಕಂದುಗಳಿಂದ  ಶೃಂಗರಿಸಿದ್ದರೆ  ಬಣ್ಣ ಬಣ್ಣದ ವಿದ್ಯುತ್ ದೀಪಗಳಿಂದ ಅಲಂಕರಿಸಿದ್ದು ನೋಡುಗರ ಕಣ್ಮನ ಸೆಳೆಯಿತು ಮುಂಜಾನೆಯ ದೇವರಿಗೆ ರುದ್ರಾಭಿಷೇಕ ಸಹಸ್ರ ಬಿಲ್ವಾರ್ಚನೆ ನ್ನು ಪುರೋಹಿತರು  ಭಕ್ತರ ಸಮ್ಮುಖದಲ್ಲಿ ದಾರ್ಮಿಕ ವಿಧಿ ವಿಧಾನಗಳಿಂದ ನೆರವೇರಿಸಿದರು  ದೇವಾಲಯದಲ್ಲಿ ಸಡಗರ ಸಂಭ್ರಮ ಮನೆ ಮಾಡಿತ್ತು ಇತ್ತ ಸಂಜೆಯಾಗುತ್ತಿದ್ದಂತೆ ಮಹಿಳೆಯರು ಹಾಗೂ  ಯುವತಿಯರು ಹಣತೆಗಳಿಗೆ ಎಣ್ಣೆಬತ್ತಿ ಹಾಕುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು 8:30 ಕ್ಕೆ ಎಲೆಕದಲ್ಲಿ ಕಟ್ಟಿ ವಿಶೇಷ ಪೂಜೆ ಸಲ್ಲಿಸಲಾಯಿತು ಈ ವೇಳೆ ದೀವಟಿಗೆ ಸಲಾಂಸಲ್ಲಿಸಿದ್ದು ಪೂಜಾ ಕಾರ್ಯಕ್ರಮಕ್ಕೆ ಮೆರಗು ನೀಡಿತುಮಹಾಮಂಗಳಾರತಿ ನಂತರ ಚನ್ನಬಸವೇಶ್ವರ ಸ್ವಾಮಿ ಭಕ್ತ ಮಂಡಳಿಯವರು ಬಂದ ಭಕ್ತಾದಿಗಳಿಗೆ ದಾಸೋಹ ವ್ಯವಸ್ಥೆಕಲ್ಪಿಸಿದ್ದರು ಪೂಜಾ ಕಾರ್ಯಕ್ರಮದಲ್ಲಿ ಮಾಡಾಳು ಗ್ರಾಮಸ್ಥರು ಸೇರಿದಂತೆ ವೈಜಿಹಳ್ಳಿ ಡಿ ಎಂ ಕುರ್ಕಿ ಸೀತಾಪುರ ಕೊಪ್ಪಲು ಪಿ ಹೊಸ ಹಳ್ಳಿ ಪಂಚನಹಳ್ಳಿಹೊಳಲ್ಕೆರೆ ಮುಂತಾದ ಗ್ರಾಮಗಳಿಂದ ಭಕ್ತರು ಆಗಮಿಸಿದ್ದರು

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0
suddikirana ಸುದ್ದಿ ಕಿರಣ ಟಿವಿ ಬಾಳಿನ ಬೆಳಕು ಕರ್ನಾಟಕದ ಮಾಹಿತಿ ಮನರಂಜನಾ ಚಾನೆಲ್ ಆಗಿದೆ. ಇದು ಮನರಂಜನೆಯ ಜೊತೆಗೆ ಇತ್ತೀಚಿನ ಸುದ್ದಿ ಮತ್ತು ಮಾಹಿತಿಯನ್ನು ವೀಕ್ಷಕರಿಗೆ ತೋರುತ್ತಿದೆ. ಮತ್ತು ಸಮಾಜವು ತೆಗೆದುಕೊಳ್ಳುವ ದಿಕ್ಕು ಮಾಹಿತಿಯಿಂದ ಪ್ರಭಾವಿತವಾಗಿರುತ್ತದೆ ಎಂದು ನಾವು ಅರ್ಥಮಾಡಿಕೊಂಡಿದ್ದೇವೆ. ಸುದ್ದಿ ಕಿರಣ ಟಿವಿ ಹಲವು ವಿಷಯಗಳಲ್ಲಿ ಪ್ರವರ್ತಕವಾಗಿದೆ. ಇದು ತನಿಖಾ ಪತ್ರಿಕೋದ್ಯಮ. ಮತ್ತು ತಾಂತ್ರಿಕ ಕೈಗಾರಿಕೆಗಳ ವೃತ್ತಿಪರರಿಂದ ಪ್ರಚಾರ ಮಾಡಲ್ಪಟ್ಟ ಚಾನೆಲ್ ಆಗಿದೆ. ಸುದ್ದಿ ಕಿರಣ ಟಿವಿ ಇತ್ತೀಚಿನ ತಂತ್ರಜ್ಞಾನಗಳೊಂದಿಗೆ ಗುಣಮಟ್ಟದ ಸಂಪನ್ಮೂಲಗಳನ್ನು ಸಂಯೋಜಿಸಲು ಪ್ರಯತ್ನಿಸುತ್ತದೆ. Chief Editor B.S.Mallikarjuna Reddy # 560, 3ನೇ ಮಹಡಿ, 1ನೇ ಮುಖ್ಯ ರಸ್ತೆ, ಯಶವಂತಪುರ ಬೆಂಗಳೂರು-560022., Email: suddikiranatv@gmail.com Email:suddikiranaa@gmail.com www.suddikirana.com ಸುದ್ದಿ ಮತ್ತು ಜಾಹೀರಾತಿಗಳಿಗಾಗಿ ಸಂಪರ್ಕಿಸಿ ಕಛೇರಿ 08041505268 ಸಂಚಾರಿ ವಾಣಿ 9686665456