ಶ್ರೀ ಗುರು ರಾಘವೇಂದ್ರ ಸ್ವಾಮಿಗಳ 354ನೇ ಆರಾಧನಾ ಮಹೋತ್ಸವ
ಚನ್ನರಾಯಪಟ್ಟಣ: ಪಟ್ಟಣದ ಗಾಂಧಿ ವೃತ್ತದಲ್ಲಿರುವ ರಾಯರ ರಂಗಮಂದಿರದಲ್ಲಿ ಶ್ರೀ ಗುರು ರಾಘವೇಂದ್ರ ಸ್ವಾಮಿಗಳ 354ನೇ ಆರಾಧನಾ ಮಹೋತ್ಸವ ಶ್ರದ್ಧಾಭಕ್ತಿಯಿಂದ ನಡೆಯಿತು.
ರಾಯರ ರಂಗಮಂದಿರದ ಮುಖ್ಯಸ್ಥರಾದ ಎಂ ಕೆ ಪ್ರಕಾಶ ಅವರ ನೇತೃತ್ವದಲ್ಲಿ ಶ್ರೀರಾಯರಿಗೆ ವಿಶೇಷ ಪೂಜೆ, ಅಲಂಕಾರ ನೈವೇದ್ಯ, ಮಹಾ ಮಂಗಳಾರತಿ ಹಾಗೂ ಭಕ್ತರಿಗೆ ದಾಸೋಹ ಆಯೋಜಿಸಲಾಗಿತ್ತು.
354ನೇ ಶ್ರೀ ಗುರು ರಾಘವೇಂದ್ರ ಸ್ವಾಮಿಗಳ ಆರಾಧನಾ ಮಹೋತ್ಸವದ ಪೂರ್ವಾರಾಧನೆ ಧಾರ್ಮಿಕ ಕಾರ್ಯಕ್ರಮದಲ್ಲಿ ಹಲವಾರು ಮಹಿಳಾ ತಂಡಗಳಿಂದ ಭಜನಾ ಕಾರ್ಯಕ್ರಮ ನಡೆದಿದ್ದು ವಿಶೇಷವಾಗಿತ್ತು. ಪ್ರತಿನಿತ್ಯ ರಾಯರಿಗೆ ವಿಶೇಷ ಪೂಜೆ, ಅಲಂಕಾರ ನಡೆಯುತ್ತಿದೆ ಎಂದು ರಾಯರ ರಂಗಮಂದಿರದ ಮುಖ್ಯಸ್ಥೆ ಡಾ. ಸ್ವಾತಿ ಭಾರದ್ವಾಜ್ ತಿಳಿಸಿದ್ದಾರೆ.
ಆ.11ರ ಮಧ್ವರಾಧನೆ ಹಾಗೂ ಸಂಜೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಅದ್ಧೂರಿ ಮೆರವಣಿಗೆ ನಡೆಯಲಿದೆ. ಆ.12ರ ಉತ್ತರ ಆರಾಧನಾ ಮಹೋತ್ಸವ ನಡೆಯಲಿದೆ.
ಶ್ರೀ ಗುರುರಾಯರ ಬೆಳ್ಳಿ ಪಾದುಕೆಯ ದರ್ಶನ ಭಾಗ್ಯ ಕಲ್ಪಿಸಲಾಗಿದೆ.ಭಕ್ತರು ರಾಯರ ದರ್ಶನ ಪಡೆದು ಕೃತಾರ್ಥರಾಗಬೇಕೆಂದು ರಾಯರ ರಂಗಮಂದಿರದ ಮುಖ್ಯಸ್ಥ ಪ್ರಕಾಶ್ ಮನವಿ ಮಾಡಿದ್ದರು. ಇದೇ ಸಂದರ್ಭದಲ್ಲಿ ಲೋಕಸಭಾ ಸದಸ್ಯರಾದ ಶ್ರೇಯಸ್ ಎಂ ಪಟೇಲ್, ಮಾಜಿ ವಿಧಾನ ಪರಿಷತ್ ಸದಸ್ಯರಾದ ಎಮ್ಮೆ ಗೋಪಾಲಸ್ವಾಮಿ, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಸಿ. ಕೆ ಕುಸುಮರಾಣಿ, ಅಣತಿ ಶೇಖರಣ್ಣ, ಕಾಳೇನಹಳ್ಳಿ ಆನಂದ್ ಕುಮಾರ್, ಸೇರಿದಂತೆ ಇತರರು ಶ್ರೀ ಗುರು ರಾಘವೇಂದ್ರ ಸ್ವಾಮಿಗಳ ದರ್ಶನ ಪಡೆದರು.
What's Your Reaction?
Like
0
Dislike
0
Love
0
Funny
0
Angry
0
Sad
0
Wow
0
