ಶ್ರೀ ಬಾಲಸೋಮೇಶ್ವರ ದೇವಾಲಯದಲ್ಲಿ ಅದ್ಧೂರಿ ಗಿರಿಜಾ ಕಲ್ಯಾಣೋತ್ಸವ 

May 1, 2026 - 17:40
 0  1
ಶ್ರೀ ಬಾಲಸೋಮೇಶ್ವರ ದೇವಾಲಯದಲ್ಲಿ ಅದ್ಧೂರಿ ಗಿರಿಜಾ ಕಲ್ಯಾಣೋತ್ಸವ 

         ಕೆಜಿಎಫ್: ನಗರದ ಉರಿಗಾಮ್ ಪೇಟೆಯಲ್ಲಿ ನೆಲೆಸಿರುವ ಶ್ರೀ ಬಾಲ ಸೋಮೇಶ್ವರ ದೇವಾಲಯದಲ್ಲಿ ಶಿವ ಪಾರ್ವತಿ ವಿವಾಹ ಮಹೋತ್ಸವವಾದ ಗಿರಿಜಾ ಕಲ್ಯಾನೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು.

ದೇವಸ್ಥಾನದ ಆವರಣದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಆರಂಭಗೊಂಡವು. ಗಣಪತಿ ಪೂಜೆ, ಪುಣ್ಯಾಹ ವಾಚನ  ಶಿವ ಪಾರ್ವತಿಯರ ಉತ್ಸವ ಮೂರ್ತಿಗಳನ್ನು ವಿವಿಧ ಬಗೆಯ ಹೂವುಗಳಿಂದ ಸಿಂಗಾರಿಸಲಾಗಿತ್ತು. 

ದೇವಸ್ಥಾನದ ಪ್ರಧಾನ ಅರ್ಚಕರು ಮಂಜುನಾಥ್ ದೀಕ್ಷಿತ್ ಅವರ ಮಾರ್ಗದರ್ಶನದಲ್ಲಿ  ಭಕ್ತಾದಿಗಳ ಸಮ್ಮುಖದಲ್ಲಿ ಶಿವ-ಪಾರ್ವತಿಯರ ಧಾರಾ ಮುಹೂರ್ತ ನೆರವೇರಿತು. ಈ ಸುಸಂದರ್ಭದಲ್ಲಿ  ನೂರಾರು ಭಕ್ತರು ಅಕ್ಷತೆ ಹಾಕಿ ದೇವದಂಪತಿಗಳನ್ನು ಹರಸಿದರು.

ಈ ವೇಳೆ ಪ್ರದಾನ ಅರ್ಚಕರು ಮಂಜುನಾಥ್ ದೀಕ್ಷಿತ್ ಮಾತನಾಡಿ, ಲೋಕಕಲ್ಯಾಣಕ್ಕಾಗಿ ಮತ್ತು ಮಳೆ-ಬೆಳೆ ಸಮೃದ್ಧಿಯಾಗಲಿ ಎಂಬ ಆಶಯದೊಂದಿಗೆ ಪ್ರತಿ ವರ್ಷದಂತೆ ಈ ಬಾರಿಯೂ ಗಿರಿಜಾ ಕಲ್ಯಾಣವನ್ನು ಆಯೋಜಿಸಲಾಗಿದೆ. ಭಕ್ತರ ಸಹಕಾರ ಶ್ಲಾಘನೀಯ  ಎಂದು ಹರ್ಷ ವ್ಯಕ್ತಪಡಿಸಿದರು. 

ಈ ಸಂದರ್ಭದಲ್ಲಿ ನೂರಾರು ಭಕ್ತರು ಹಾಗೂ ಉಪಸ್ಥಿತರಿದ್ದರು.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0
suddikirana ಸುದ್ದಿ ಕಿರಣ ಟಿವಿ ಬಾಳಿನ ಬೆಳಕು ಕರ್ನಾಟಕದ ಮಾಹಿತಿ ಮನರಂಜನಾ ಚಾನೆಲ್ ಆಗಿದೆ. ಇದು ಮನರಂಜನೆಯ ಜೊತೆಗೆ ಇತ್ತೀಚಿನ ಸುದ್ದಿ ಮತ್ತು ಮಾಹಿತಿಯನ್ನು ವೀಕ್ಷಕರಿಗೆ ತೋರುತ್ತಿದೆ. ಮತ್ತು ಸಮಾಜವು ತೆಗೆದುಕೊಳ್ಳುವ ದಿಕ್ಕು ಮಾಹಿತಿಯಿಂದ ಪ್ರಭಾವಿತವಾಗಿರುತ್ತದೆ ಎಂದು ನಾವು ಅರ್ಥಮಾಡಿಕೊಂಡಿದ್ದೇವೆ. ಸುದ್ದಿ ಕಿರಣ ಟಿವಿ ಹಲವು ವಿಷಯಗಳಲ್ಲಿ ಪ್ರವರ್ತಕವಾಗಿದೆ. ಇದು ತನಿಖಾ ಪತ್ರಿಕೋದ್ಯಮ. ಮತ್ತು ತಾಂತ್ರಿಕ ಕೈಗಾರಿಕೆಗಳ ವೃತ್ತಿಪರರಿಂದ ಪ್ರಚಾರ ಮಾಡಲ್ಪಟ್ಟ ಚಾನೆಲ್ ಆಗಿದೆ. ಸುದ್ದಿ ಕಿರಣ ಟಿವಿ ಇತ್ತೀಚಿನ ತಂತ್ರಜ್ಞಾನಗಳೊಂದಿಗೆ ಗುಣಮಟ್ಟದ ಸಂಪನ್ಮೂಲಗಳನ್ನು ಸಂಯೋಜಿಸಲು ಪ್ರಯತ್ನಿಸುತ್ತದೆ. Chief Editor B.S.Mallikarjuna Reddy # 560, 3ನೇ ಮಹಡಿ, 1ನೇ ಮುಖ್ಯ ರಸ್ತೆ, ಯಶವಂತಪುರ ಬೆಂಗಳೂರು-560022., Email: suddikiranatv@gmail.com Email:suddikiranaa@gmail.com www.suddikirana.com ಸುದ್ದಿ ಮತ್ತು ಜಾಹೀರಾತಿಗಳಿಗಾಗಿ ಸಂಪರ್ಕಿಸಿ ಕಛೇರಿ 08041505268 ಸಂಚಾರಿ ವಾಣಿ 9686665456