ಶ್ರೀ ಶ್ರೀನಿವಾಸ ದೇವರಿಗೆ ಮಹಾಭಿಷೇಕ ಪವಮಾನಪುರ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ

Apr 27, 2026 - 18:02
 0  1
ಶ್ರೀ ಶ್ರೀನಿವಾಸ ದೇವರಿಗೆ ಮಹಾಭಿಷೇಕ ಪವಮಾನಪುರ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ

    ಬೆಂಗಳೂರು: ಪವಮಾನಪುರ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪರಮಪೂಜ್ಯ ಶ್ರೀ 1008 ಶ್ರೀ  ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶ ಅನುಗ್ರಹದೊಂದಿಗೆ ಶ್ರೀಮಠದ ವಿಚಾರಣಾಕರ್ತರಾದ ಶ್ರೀ ಗಿರಿರಾಜಾಚಾರ್ ಮತ್ತು ನೂತನ ವ್ಯವಸ್ಥಾಪಕರಾದ  ಶ್ರೀ ನಂದಕಿಶೋರಾಚಾರ್ಯರ ನೇತೃತ್ವದಲ್ಲಿ ಶ್ರೀ ಶ್ರೀನಿವಾಸ ಕಲ್ಯಾಣ ಮಹೋತ್ಸವದ ಅಂಗವಾಗಿ ಶ್ರೀ ಶ್ರೀನಿವಾಸ ದೇವರಿಗೆ ಮಹಾಭಿಷೇಕ  ಮತ್ತು ಉತ್ಸವ ಮೂರ್ತಿಗಳಿಗೆ ಮಹಾಮಂಗಳಾರತಿಯು ನೆರವೇರಿಸಲಾಯಿತು. ಬೆಳಗ್ಗೆ 7:30ಕ್ಕೆ ಶ್ರೀನಿವಾಸ ದೇವರಿಗೆ ಮಹಾ ಅಭಿಷೇಕ ಪಂಚಾಮೃತದೊಂದಿಗೆ   ಶ್ರೀ ರಾಘವೇಂದ್ರ ಸ್ವಾಮಿಗಳ ಬೃಂದಾವನಕ್ಕೆ ಅಷ್ಟೋತ್ತರ ಸಹಿತ ಫಲ ಪಂಚಾಮೃತ ಅಭಿಷೇಕವು ಅರ್ಚಕರಾದ ಇಂದಿರೇಶ ಆಚಾರ್ ಮತ್ತು ಶ್ರೀಪಾದ ಆಚಾರ್ಯರಿಂದ  ಶ್ರೀ ಗುರು ರಾಘವೇಂದ್ರ ಸ್ವಾಮಿಗಳ ಬೃಂದಾವನಕ್ಕೆ ನೆರವೇರಿಸಿ ವಿಶೇಷ  ಅಲಂಕಾರದೊಂದಿಗೆ ಮಹಾಮಂಗಳಾರತಿಯು ನೆರವೇರಿತು. ಈ ಸಂದರ್ಭದಲ್ಲಿ ಸೇವಾಕರ್ತೃಗಳು, ಶ್ರೀಮಠದ ಶಿಷ್ಯರು, ಭಕ್ತರು, ಶ್ರೀಮಠದ ಸಿಬ್ಬಂದಿಗಳು ಸ್ವಯಂ ಸೇವಕರು ಭಾಗವಹಿಸಿ ತೀರ್ಥ ಫಲಮಂತ್ರಾಕ್ಷತೆ ಪ್ರಸಾದವನ್ನು ಸ್ವೀಕರಿಸಿ ಶ್ರೀ ಶ್ರೀನಿವಾಸ ದೇವರ  ಶ್ರೀ ರಾಘವೇಂದ್ರ ಸ್ವಾಮಿಗಳ ಅನುಗ್ರಹಕ್ಕೆ ಪಾತ್ರರಾದರು.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0
suddikirana ಸುದ್ದಿ ಕಿರಣ ಟಿವಿ ಬಾಳಿನ ಬೆಳಕು ಕರ್ನಾಟಕದ ಮಾಹಿತಿ ಮನರಂಜನಾ ಚಾನೆಲ್ ಆಗಿದೆ. ಇದು ಮನರಂಜನೆಯ ಜೊತೆಗೆ ಇತ್ತೀಚಿನ ಸುದ್ದಿ ಮತ್ತು ಮಾಹಿತಿಯನ್ನು ವೀಕ್ಷಕರಿಗೆ ತೋರುತ್ತಿದೆ. ಮತ್ತು ಸಮಾಜವು ತೆಗೆದುಕೊಳ್ಳುವ ದಿಕ್ಕು ಮಾಹಿತಿಯಿಂದ ಪ್ರಭಾವಿತವಾಗಿರುತ್ತದೆ ಎಂದು ನಾವು ಅರ್ಥಮಾಡಿಕೊಂಡಿದ್ದೇವೆ. ಸುದ್ದಿ ಕಿರಣ ಟಿವಿ ಹಲವು ವಿಷಯಗಳಲ್ಲಿ ಪ್ರವರ್ತಕವಾಗಿದೆ. ಇದು ತನಿಖಾ ಪತ್ರಿಕೋದ್ಯಮ. ಮತ್ತು ತಾಂತ್ರಿಕ ಕೈಗಾರಿಕೆಗಳ ವೃತ್ತಿಪರರಿಂದ ಪ್ರಚಾರ ಮಾಡಲ್ಪಟ್ಟ ಚಾನೆಲ್ ಆಗಿದೆ. ಸುದ್ದಿ ಕಿರಣ ಟಿವಿ ಇತ್ತೀಚಿನ ತಂತ್ರಜ್ಞಾನಗಳೊಂದಿಗೆ ಗುಣಮಟ್ಟದ ಸಂಪನ್ಮೂಲಗಳನ್ನು ಸಂಯೋಜಿಸಲು ಪ್ರಯತ್ನಿಸುತ್ತದೆ. Chief Editor B.S.Mallikarjuna Reddy # 560, 3ನೇ ಮಹಡಿ, 1ನೇ ಮುಖ್ಯ ರಸ್ತೆ, ಯಶವಂತಪುರ ಬೆಂಗಳೂರು-560022., Email: suddikiranatv@gmail.com Email:suddikiranaa@gmail.com www.suddikirana.com ಸುದ್ದಿ ಮತ್ತು ಜಾಹೀರಾತಿಗಳಿಗಾಗಿ ಸಂಪರ್ಕಿಸಿ ಕಛೇರಿ 08041505268 ಸಂಚಾರಿ ವಾಣಿ 9686665456